Just In
Don't Miss
- News
ಕೇಂದ್ರ ಬಜೆಟ್: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಜೆಟ್ ಬಗ್ಗೆ ಭಾರೀ ಮೆಚ್ಚುಗೆ!
- Automobiles
ಸೇನೆಗೆ ಮಾರುತಿ ಜಿಪ್ಸಿ ಬದಲಿಗೆ ಅತ್ಯಾಧುನಿಕ ಹೊಸ ಜಿಮ್ನಿ ಸೇರ್ಪಡೆ ಹೇಗಿರಬಹುದು?
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Sports
ಟಿ20 ರ್ಯಾಂಕಿಂಗ್: ಸೂರ್ಯಕುಮಾರ್ ಅಂಕದಲ್ಲಿ ಮತ್ತಷ್ಟು ಏರಿಕೆ
- Movies
'ಕಬ್ಜ', 'ಕೆಜಿಎಫ್' ಅಂಥಹಾ ಸಿನಿಮಾ ಮಾಡಲು ತಾಕತ್ ಇರಬೇಕು: ಆರ್ ಚಂದ್ರು
- Finance
LIC Jeevan Lakshya: LIC ಜೀವನ್ ಲಕ್ಷ್ಯ ಯೋಜನೆ: ಪಾಲಿಸಿ ಪ್ರಯೋಜನವೇನು? ಆರ್ಥಿಕ ರಕ್ಷಣೆ ಹೇಗೆ? ತಿಳಿಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪಾಕೆಟ್ ಗಾತ್ರದ ಸ್ಮಾರ್ಟ್‌ಫೋನ್ ಪರಿಚಯಿಸಿದ ಹುವಾವೇ! ವಿನ್ಯಾಸಕ್ಕೆ ಫಿದಾ ಆಗೋದು ಗ್ಯಾರಂಟಿ!
ಜಾಗತಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಹುವಾವೇ ಕಂಪೆನಿ ಕೂಡ ಒಂದು. ಆಪಲ್‌ನ ಐಫೋನ್‌ಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನವನ್ನು ಹುವಾವೇ ಮೊದಲಿನಿಂದಲೂ ಮಾಡುತ್ತಲೇ ಬಂದಿದೆ. ಅದರಂತೆ ಹಲವು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಹುವಾವೇ ಕಂಪೆನಿ ಹೊಸ ಪಾಕೆಟ್ ಮಾದರಿಯ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಅನ್ನು ಹುವಾವೇ ಪಾಕೆಟ್ ಎಸ್ ಎಂದು ಹೆಸರಿಸಲಾಗಿದ್ದು, ಫೋಲ್ಡಬಲ್ ಫೋನ್ ಆಗಿದೆ.

ಹೌದು, ಹುವಾವೇ ಕಂಪೆನಿ ಹೊಸ ಹುವಾವೇ ಪಾಕೆಟ್ ಎಸ್ ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸುವ 6.9 ಇಂಚಿನ OLED ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಹುವಾವೇ ಪಾಕೆಟ್ S ಸ್ಮಾರ್ಟ್‌ಫೋನ್ 6.9 ಇಂಚಿನ ಮಡಿಸಬಹುದಾದ OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,790 x 1,188 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಫೋನ್ ಔಟ್‌ಸೈಡ್ ಡಿಸ್‌ಪ್ಲೇ 1.04-ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಇದು 340 x 340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ.

ಪ್ರೊಸೆಸರ್ ಯಾವುದು?
ಹುವಾವೇ ಪಾಕೆಟ್ S ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಬಾಕ್ಸ್ ಹೊರಗೆ ಹಾರ್ಮನಿ OS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಮತ್ತು 8GB RAM + 256GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಹುವಾವೇ ಪಾಕೆಟ್ S ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 10.7 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇದು ಎಲ್ಇಡಿ ಫ್ಲ್ಯಾಷ್, ಎಚ್‌ಡಿಆರ್, ಪನೋರಮಾದಂತಹ ಫೀಚರ್ಸ್‌ಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?
ಹುವಾವೇ ಪಾಕೆಟ್ S ಸ್ಮಾರ್ಟ್‌ಫೋನ್ 40W ಚಾರ್ಜಿಂಗ್ ಬೆಂಬಲಿಸುವ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಡ್ಯುಯಲ್-ಬ್ಯಾಂಡ್, Wi-Fi ಡೈರೆಕ್ಟ್, ಹಾಟ್‌ಸ್ಪಾಟ್, ಬ್ಲೂಟೂತ್ 5.2, USB ಟೈಪ್-C 2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ, ಅಕ್ಸೆಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್, ಕಲರ್ ಸ್ಪೆಕ್ಟ್ರಂ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಹುವಾವೇ ಪಾಕೆಟ್ ಎಸ್ ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ನ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 5,988 (ಅಂದಾಜು 67,900ರೂ)ಬೆಲೆ ಹೊಂದಿದೆ. ಇದರ 8GB RAM + 256GB ಸ್ಟೋರೇಜ್ ಆಯ್ಕೆಗೆ CNY 6,488 ( ಅಂದಾಜು 73,600ರೂ) ಬೆಲೆಯನ್ನು ಒಳಗೊಂಡಿದೆ. ಇನ್ನು ಈ ಫೋನ್ ಫ್ರಾಸ್ಟ್ ಸಿಲ್ವರ್, ಐಸ್ ಕ್ರಿಸ್ಟಲ್ ಬ್ಲೂ, ಮಿಂಟ್ ಗ್ರೀನ್, ಅಬ್ಸಿಡಿಯನ್ ಬ್ಲ್ಯಾಕ್, ಪ್ರಿಮ್ರೋಸ್ ಗೋಲ್ಡ್ ಮತ್ತು ಸಕುರಾ ಪಿಂಕ್ ಬಣ್ಣದ ರೂಪಾಂತರಗಳಲ್ಲಿ ಬರುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470