ಹುವಾವೇ Y7A ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಏನು?
ಜಾಗತಿಕ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪನಿಗಳಲ್ಲಿ ಹುವಾವೇ ಕೂಡ ಒಂದಾಗಿದೆ. ಹುವಾವೇ ಸಂಸ್ಥೆ ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ Y ಸರಣಿಯಲ್ಲಿ ಹೊಸದಾಗಿ ಹುವಾವೇ Y7a ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದು ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಹೌದು, ಹುವಾವೇ ಸಂಸ್ಥೆ ತನ್ನ ಹೊಸ ಹುವಾವೇ Y7a ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಬಜೆಟ್ ಪ್ಲ್ಯಾಗ್‌ಶಿಪ್‌ನಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಫೋನ್ ಹೈಸಿಲಿಕಾನ್ ಕಿರಿನ್ 710A SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದು 64GB ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಹುವಾವೇ Y7A ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.67-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಹುವಾವೇ ಹಿಸಿಲಿಕಾನ್ ಕಿರಿನ್ 710A SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಹುವಾವೇ Y7A ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಅನ್ನು ಹೊಂದಿರುತ್ತದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 22.5W ಸೂಪರ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V5.1, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನುಳಿದಂತೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಹುವಾವೇ Y7A ಸ್ಮಾರ್ಟ್‌ಫೋನ್ ಮಲೆಷ್ಯಾದಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ MYR 799 (ಸುಮಾರು ರೂ. 14,200)ಕ್ಕೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲಶ್ ಗೋಲ್ಡ್, ಕ್ರಷ್ ಗ್ರೀನ್ ಮತ್ತು ಮಿಡ್ನೈಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications