Home
ಸುದ್ದಿಜಾಲ

ಹುವಾವೇ ಕಂಪೆನಿಯಿಂದ ಹುವಾವೇ Y7P ಸ್ಮಾರ್ಟ್‌ಫೋನ್‌ ಲಾಂಚ್‌!

ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪೆನಿ ಹುವಾವೇ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಅನ್ನು ಥೈಲ್ಯಾಂಡ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಪಂಚ್‌ಹೋಲ್‌ ಕ್ಯಾಮೆರಾ ಡಿಸ್‌ಪ್ಲೇಯನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್‌ ಸಖತ್‌ ಸೌಂಡ್‌ ಮಾಡೋ ಸೂಚನೆ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ.

ಹೌದು

ಹೌದು, ಹುವಾವೇ ಕಂಪೆನಿ ಹುವಾವೇ Y7P ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಆಕರ್ಷಕ ಫೀಚರ್ಸ್‌ಗಳನ್ನ ಒಳಗೊಂಡಿರುವ ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕಿರಿನ್ 710F ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಶೇಖರಣಾ ಸಾಮರ್ಥ್ಯದ ವಿಸ್ತರಣೆಗಾಗಿ ಮೆಮೊರಿ ಕಾರ್ಡ್‌ ಸ್ಲಾಟ್ ಅನ್ನು ಒಳಗೊಂಡಿದೆ. ಸದ್ಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಹುವಾವೇ Y7P ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ತಿಳಿಸಿಕೊಡ್ತೀವಿ ಈ ಲೇಖನವನ್ನ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಹುವಾವೇ Y7P ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.39 ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಇದು ಟಿಎಫ್‌ಟಿ ಎಲ್‌ಸಿಡಿ ಡಿಸ್‌ಪ್ಲೇ ಆಗಿದೆ. ಇನ್ನು ಇದು ಪಂಚ್ ಹೋಲ್‌ ಡಿಸ್ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್-ಟು-ಬಾಡಿ 90.15% ಅನುಪಾತವನ್ನು ಹೊಂದಿದೆ. ಡಿಸ್‌ಪ್ಲೇ ಉತ್ತಮವಾಗಿರೊದ್ರಿಂದ ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಹಿಸಿಲಿಕಾನ್‌ ಕಿರಿನ್ 710 F ಆಕ್ಟಾ-ಕೋರ್ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌9 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 64GB ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌,ಹಾಗೂ F/ 1.8 ಲೆನ್ಸ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು,ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಕ್ಯಾಮೆರಾ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಬ್ಯಾಟರಿ

ಬ್ಯಾಟರಿ

ಹುವಾವೇ Y7P ಸ್ಮಾರ್ಟ್‌ಫೋನ್‌ 4,000mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, 10W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 22 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 111 ಗಂಟೆಗಳ ಮ್ಯೂಸಿಕ್ ಪ್ಲೇ ಹಾಗೂ 20 ಗಂಟೆಗಳ ಅಂತರ್ಜಾಲ ಬಳಕೆಯನ್ನ ಮಾಡಿದರು ಬ್ಯಾಟರಿ ಬಾಳಿಕೆ ಉತ್ತಮವಾಗಿದೆ. ಜೊತೆಗೆ ಉತ್ತಮ ಸ್ಟ್ಯಾಂಡ್‌ಬೈಂ ಟೈಂ ಅನ್ನು ಹೊಂದಿದ್ದು, ದೀರ್ಘ ಬ್ಯಾಟರಿ ಬಾಳಿಕೆ ಬರಲಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, ಮೈಕ್ರೊ ಯುಎಸ್‌ಬಿ ಪೋರ್ಟ್, ವೈ-ಫೈ 802.11 ಬಿ / ಜಿ / ಎನ್, 3.5 ಎಂಎಂ ಆಡಿಯೊ ಜ್ಯಾಕ್, ಜಿಪಿಎಸ್, ಎಜಿಪಿಎಸ್, ಗ್ಲೋನಾಸ್, 4G LTE ಅನ್ನು ಬೆಂಬಲಿಸಲಿದೆ. ಜೊತೆಗೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಕಂಪಾಸ್‌, ಗ್ರ್ಯಾವಿಟಿ ಸೆನ್ಸಾರ್‌, ಹಾಗೂ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 159.81x76.13x8.13 ಮಿಮೀ ಅಳತೆ ಹೊಂದಿದ್ದು, ಇದು 176 ಗ್ರಾಂ ತೂಕವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹುವಾವೇ Y7P ಸ್ಮಾರ್ಟ್‌ಫೋನ್ ಥೈಲ್ಯಾಂಡ್‌ ಮಾರುಕಟ್ಟೆಯಲ್ಲಿ ಇದರ ಬೆಲೆ ಟಿಎಚ್‌ಬಿ 4,999 (ಸುಮಾರು 11,500 ರೂ.) ಆಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಥೈಲ್ಯಾಂಡ್‌ ದೇಶದ ಇ-ಕಾಮರ್ಸ್‌ ತಾಣಗಳಾದ ಲಾಜಾಡಾ, ಜೆಡಿ ಸೆಂಟ್ರಲ್ ಮತ್ತು ಶೋಪಿ ಸೈಟ್‌ಗಳಲ್ಲಿ ಫೋನ್‌ ಅನ್ನು ಖರೀದಿಸಲು ಬುಕ್ಕಿಂಗ್‌ ಮಾಡಬಹುದಾಗಿದ್ದು, ಈ ತಿಂಗಳ ಕೊನೆಯಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Huawei will be selling the mid-range Y7p device with a price tag of THB 4,999.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+