Home
ಸುದ್ದಿಜಾಲ

ಹುವಾವೆ Y8p ಬಜೆಟ್‌ ಸ್ಮಾರ್ಟ್‌ಫೋನ್‌ ಲಾಂಚ್!..48ಎಂಪಿ ಕ್ಯಾಮೆರಾ!

ಚೀನಾ ಮೂಲದ ಜನಪ್ರಿಯ ಮೊಬೈಲ್ ಸಂಸ್ಥೆ ಹುವಾವೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಇದೀಗ ಹುವಾವೆ ಹೊಸದಾಗಿ ಹುವಾವೆ Y8p ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಈ ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಫೋನ್ ಪ್ರಿಯರನ್ನು ಅಟ್ರ್ಯಾಕ್ಟ್‌ ಮಾಡಿದೆ. ತ್ರಿವಳಿ ಕ್ಯಾಮೆರಾ ಹಾಗೂ 4,000mAh ಬ್ಯಾಟರಿ ಪ್ಲಸ್‌ ಪಾಯಿಂಟ್ ಆಗಿದೆ.

 ಹುವಾವೆ Y8p

ಹೌದು, ಹುವಾವೆ ಸಂಸ್ಥೆಯು ನೂತನವಾಗಿ ಹುವಾವೆ Y8p ಸ್ಮಾರ್ಟ್‌ಫೋನ್‌ ಅನ್ನು ಸಂಸ್ಥೆಯ ಗ್ಲೋಬಲ್‌ ವೆಬ್‌ಸೈಟ್‌ನಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಕಿರಿನ್‌710F SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಜೊತೆಗೆ ವಿಡಿಯೊ ಕಾಲಿಂಗ್‌ಗಾಗಿ ಹುವಾವೆ ಮೀಟ್‌ಟೈಮ್ ಹೆಸರಿನ ಆಪ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫಿಚರ್ಸ್‌ ಅನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಹುವಾವೆ Y8p ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.3 ಇಂಚಿನ OLED ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್ ಇನ್-ಸ್ಕ್ರೀನ್ ಫಿಂಗರ್‌ ಪ್ರಿಂಟ್ ರೀಡರ್ ಅನ್ನು ಸಹ ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಹುವಾವೆ Y8p ಸ್ಮಾರ್ಟ್‌ಫೋನ್‌ EMUI 10.1 ಬೆಂಬಲದೊಂದಿಗೆ ಕಿರಿನ್‌710F SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್‌ 4GB/6GB RAM ಸಾಮರ್ಥ್ಯದ ಆಯ್ಕೆಯೊಂದಿಗೆ 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದರೊಂದಿಗೆ ಬಾಹ್ಯ ಮೆಮೊರಿಗಾಗಿ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೂ ವಿಸ್ತರಿಸುವ ಅವಕಾಶ ನೀಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಹುವಾವೆ Y8p ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದ್ದು, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇನ್ನು ಮೂರನೇ ಹಾಗೂ ನಾಲ್ಕನೇ ಕ್ಯಾಮೆರಾಗಳು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿವೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಹುವಾವೆ Y8p ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 10W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಪಡೆದಿದೆ. ಇದರೊಂದಿಗೆ ಅಗತ್ಯ ಕನೆಕ್ಟಿವಿಟಿ ಆಯ್ಕೆಗಳನ್ನು ಹೊಂದಿದ್ದು, ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, RYYB ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಚೀನಾದಲ್ಲಿ ಲಾಂಚ್ ಆಗಿರುವ ಹುವಾವೆ Y8p ಸ್ಮಾರ್ಟ್‌ಫೋನ್‌ ಬೆಲೆಯು ಯುರೋಪ್‌ನಲ್ಲಿ $270 ಆಗಿದೆ. ಭಾರತದಲ್ಲಿ ಈ ಫೋನ್ ಬೆಲೆಯು 20,500ರೂ. ಎಂದು ಅಂದಾಜಿಸಲಾಗಿದೆ. ಇನ್ನು ಈ ಫೋನ್ ಬ್ರಿಥಿಂಗ್ ಕ್ರಿಸ್ಟಲ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎರಡು ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
huawei Y8p listing on its global website. The company has launched this phone in two color options – Breathing Crystal and Midnight Black.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+