ಹುವಾವೇ Y9a ಸ್ಮಾರ್ಟ್‌ಫೋನ್ ಬಿಡುಗಡೆ! ಕ್ವಾಡ್ ಕ್ಯಾಮೆರಾ ಹೈಲೈಟ್!
ಪ್ರತಿಷ್ಠಿತ ಸ್ಮಾರ್ಟ್‌ಫೋನ್ ಕಂಪನಿಗಳಲ್ಲಿ ಒಂದಾದ ಹುವಾವೇ ಹಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಹುವಾವೇ ಇದೀಗ Y ಸರಣಿಯಲ್ಲಿ ಹೊಸದಾಗಿ ಹುವಾವೇ Y9a ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ನಂತಹ ಫ್ಲ್ಯಾಗ್‌ಶಿಪ್ ಮಾದರಿಯ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.

ಹೌದು, ಹುವಾವೇ ಕಂಪೆನಿಯು ನೂತನವಾಗಿ ಹುವಾವೇ Y9a ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದ್ದು, ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಕಾರ್ಯವೈಖರಿಯನ್ನು ಹೊಂದಿದೆ. ಇನ್ನುಳಿದಂತೆ ಹುವಾವೇ Y9a ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಹುವಾವೇ Y9a ಸ್ಮಾರ್ಟ್‌ಫೋನ್ 1080 x 2310 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.63 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 20:9ರಷ್ಟಾಗಿದೆ.

ಯಾವ ಪ್ರೊಸೆಸರ್
ಹುವಾವೇ Y9a ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಜೊತೆಗೆ Mali-G52 MC2 GPU ಪಡೆದಿದೆ. ಹಾಗೆಯೇ ಆಂಡ್ರಾಯ್ಡ್ 10 ಬೆಂಬಲ ಪಡೆದಿರುವ ಈ ಫೋನ್ 6GB RAM ಮತ್ತು 8GB RAM ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಹುವಾವೇ Y9a ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿವೆ. ಹಾಗೆಯೇ ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಪಾಪ್-ಅಪ್ ಕ್ಯಾಮೆರಾ ರಚನೆ ಇದೆ.

ಬ್ಯಾಟರಿ ಮತ್ತು ಇತರೆ
ಹುವಾವೇ Y9a ಸ್ಮಾರ್ಟ್‌ಫೋನ್ 4,300mAh ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಹೊಂದಿದ್ದು, 40W ಹುವಾವೇ ಸೂಪರ್‌ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE,ವೈ-ಫೈ ಡ್ಯುಯಲ್-ಬ್ಯಾಂಡ್, ಬ್ಲೂಟೂತ್ 5.0, ಡ್ಯುಯಲ್-ಫ್ರೀಕ್ವೆನ್ಸಿ ಜಿಪಿಎಸ್, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್, ಆಕ್ಸಿಲರೊಮೀಟರ್, ಸೆನ್ಸಾರ್‌ಗಳನ್ನು ಸಹ ಒಳಗೊಂಡಿದೆ.


Click it and Unblock the Notifications




