Home
ಸುದ್ದಿಜಾಲ

ಹುವಾವೇ Y9s ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ!

ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋ ನ್‌ಗಳ ಭರಾಟೆ ಜೋರಾಗಿಯೇ ಇದೆ. ಕೋವಿಡ್‌-19 ಪರಿಣಾಮ ಬಹುತೇಕ ರಾಷ್ಟ್ರಗಳಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ ಆದೇಶ ನಿಧಾನವಾಗಿ ರಿಲೀಫ್‌ ನಿಡುತ್ತಿದ್ದಂತೆ ಮಾರುಕಟ್ಟೆಗೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿಯೇ ಇದೆ. ಅದರಲ್ಲೂ ಭಾರತದ ಮಾರುಕಟ್ಟೆಗೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿದ್ದು, ಇದೀಗ ಚೀನಾದ ಟೆಕ್‌ ದೈತ್ಯ ಹುವಾವೇ ಕೂಡ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.

ಚೀನಾದ

ಹೌದು, ಚೀನಾದ ಟೆಕ್‌ ದೈತ್ಯ ಎನಿಸಿಕೊಂಡಿರುವ ಹುವಾವೇ ತನ್ನ ಹೊಸ ಹುವಾವೇ Y9s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು ಹೊಸ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಗ್ಲಾಸ್ ಬಾಡಿ ಹೊಂದಿದೆ. ಇದು ಆಕ್ಟಾ-ಕೋರ್ ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಇನ್ನು ಯಾವೆಲ್ಲ ಫೀಚರ್ಸ್‌ ಅನ್ನು ಈ ಸ್ಮಾರ್ಟ್‌ಫೋನ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಹುವಾವೇ Y9s ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, ಎಲ್‌ಸಿಡಿ ಫುಲ್‌ವ್ಯೂ ಡಿಸ್‌ಪ್ಲೇ ಇದಾಗಿದೆ. ಜೊತೆಗೆ ಈ ಡಿಸ್‌ಪ್ಲೇಯು 391PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕಿರಿನ್ 710 ಎಫ್ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128 GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಅಲ್ಲದೆ ಸೆಲ್ಫಿ ಕ್ಯಾಮೆರಾ ಪಾಪ್-ಅಪ್ ವಿನ್ಯಾಸವನ್ನು ಹೊಂದಿದ್ದು, ಫುಲ್‌ ಸ್ಕ್ರೀನ್‌ ಡಿಸ್ಪ್ಲೇ ಅನ್ನು ನೀಡಲಿದೆ. ಇದರಲ್ಲಿ ಯಾವುದೇ ಮಾದರಿಯ ಪಂಚ್‌ಹೋಲ್‌ ಇಲ್ಲ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಹುವಾವೇ Y9s ಸ್ಮಾರ್ಟ್‌ಫೋನ್‌ 4,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 10w ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ , 4G LTE, ಬ್ಲೂಟೂತ್ 4.2, GPS, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫೋನ್‌ನಲ್ಲಿರುವ ಸೆನ್ಸಾರ್‌ನಲ್ಲಿ ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಕಂಪಾಸ್ ಮತ್ತು ಗ್ರಾವಿಟಿ ಸೆನ್ಸಾರ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ನಲ್ಲಿ ಸೈಡ್ ಮೌಂಟೆಡ್ ಫಿಂಗರ್‌ ಪ್ರಿಂಟ್‌ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಹುವಾವೇ Y9s ಸ್ಮಾರ್ಟ್‌ಫೋನ್‌ 19,990 ರೂ. ಬೆಲೆಯನ್ನ ಹೊಮದಿದೆ. ಈ ಸ್ಮಾರ್ಟ್‌ಫೋನ್‌ ಬ್ರೀಥಿಂಗ್ ಕ್ರಿಸ್ಟಲ್ ಮತ್ತು ಮಿಡ್ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದ್ದು, ಇದೇ ಮೇ 19 ರಿಂದ ಅಮೆಜಾನ್ ಮೂಲಕ ಪ್ರತ್ಯೇಕವಾಗಿ ಮಾರಾಟವಾಗಲಿದೆ.

Best Mobiles in India

English summary
Huawei Y9s has a single 6GB RAM and 128GB storage options that is priced at Rs. 19,990.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+