Home
ಸುದ್ದಿಜಾಲ

ಈ ಲ್ಯಾಪ್‌ಟಾಪ್‌ಗಳ ಮೇಲೆ ಭಾರಿ ಡಿಸ್ಕೌಂಟ್‌! ಇನ್ಯಾಕೆ ತಡ ಇಂದೇ ಖರೀದಿಸಿ!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ನೀಡುತ್ತಾ ಬಂದಿದೆ. ಒಂದಿಲ್ಲೊಂದು ಸೇಲ್‌ಗಳ ಮೂಲಕ ಭರ್ಜರಿ ಡಿಸ್ಕೌಂಟ್‌ ನೀಡುವ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದು. ಇನ್ನು ನೀವು ಲ್ಯಾಪ್‌ಟಾಪ್‌ ಖರೀದಿಸಬೇಕೆಂದುಕೊಂಡರೆ ಅಮೆಜಾನ್‌ ವೇದಿಕೆಯಲ್ಲಿ ಭರ್ಜರಿ ಡಿಸ್ಕೌಂಟ್‌ ದೊರೆಯಲಿದೆ.

ಹೌದು, ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಗೇಮಿಂಗ್‌ ಲ್ಯಾಪ್‌ಟಾಪ್‌ಗಳು ಸೇರಿದಂತೆ ವಿದ್ಯಾರ್ಥಿಗಳಿಗೆ ಸೂಕ್ತ ಎನಿಸುವ ಹಲವು ಡಿವೈಸ್‌ಗಳ ಮೇಲೆ ಬಿಗ್‌ ಆಫರ್‌ ನೀಡಿದೆ. 30% ನಿಂದ 70% ವರೆಗೂ ಡಿಸ್ಕೌಂಟ್‌ ಲಭ್ಯವಾಗಲಿದೆ. ಹಾಗಾದ್ರೆ ಅಮೆಜಾನ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿರುವ ಲ್ಯಾಪ್‌ಟಾಪ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಈ ಲ್ಯಾಪ್‌ಟಾಪ್‌ಗಳ ಮೇಲೆ ಭಾರಿ ಡಿಸ್ಕೌಂಟ್‌! ಇನ್ಯಾಕೆ ತಡ ಇಂದೇ ಖರೀದಿಸಿ!

ಹೆಚ್‌ಪಿ ವಿಕ್ಟಸ್‌ ಗೇಮಿಂಗ್‌ ಲ್ಯಾಪ್‌ಟಾಪ್‌

ಹೆಚ್‌ಪಿ ವಿಕ್ಟಸ್‌ ಗೇಮಿಂಗ್‌ ಲೇಟೆಸ್ಟ್‌ AMD Ryzen 5 5600H ಪ್ರೊಸೆಸರ್ ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ ಬಿಗ್‌ ಆಫರ್‌ ಪಡೆದುಕೊಂಡಿದೆ. 71,343ರೂ. ಮೂಲ ಬೆಲೆಯ ಈ ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 53,990ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಲ್ಯಾಪ್‌ಟಾಪ್‌ 16.1 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಎಎಂಡಿ ರೈಜೆನ್‌ 5 5600H ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 512GB SSD ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಆಸುಸ್‌ ಟಫ್‌ ಗೇಮಿಂಗ್‌ A15

ಆಸುಸ್‌ ಟಫ್‌ ಗೇಮಿಂಗ್‌ A15 ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ ನೀವು ಊಹಿಸಲಾಗದ ರೀತಿಯ ಡಿಸ್ಕೌಂಟ್‌ ಪಡೆದುಕೊಂಡಿದೆ. 71,990ರೂ ಎಂ.ಆರ್‌.ಪಿ ಬೆಲೆಯ ಈ ಲ್ಯಾಪ್‌ಟಾಪ್‌ ರಿಯಾಯಿತಿ ದರದಲ್ಲಿ ಕೇವಲ 49,990ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಈ ಲ್ಯಾಪ್‌ಟಾಪ್‌ 15.6 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು AMD ರೈಜೆನ್‌ 54600H ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 512GB SSD ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಲ್ಯಾಪ್‌ಟಾಪ್‌ ಎನ್‌ವಿಡಿಯಾ ಜಿಫೋರ್ಸ್‌ GTX 1650 ಗ್ರಾಫಿಕ್ಸ್‌ ಕಾರ್ಡ್‌ ಅನ್ನು ಹೊಂದಿದೆ.

ಈ ಲ್ಯಾಪ್‌ಟಾಪ್‌ಗಳ ಮೇಲೆ ಭಾರಿ ಡಿಸ್ಕೌಂಟ್‌! ಇನ್ಯಾಕೆ ತಡ ಇಂದೇ ಖರೀದಿಸಿ!

MSI ಗೇಮಿಂಗ್ ಕಟಾನಾ GF66

ಅಮೆಜಾನ್‌ನಲ್ಲಿ MSI ಗೇಮಿಂಗ್ ಕಟಾನಾ GF66 ಲ್ಯಾಪ್‌ಟಾಪ್‌ ಮೇಲೆ ಭಾರಿ ರಿಯಾಯಿತಿ ಲಭ್ಯವಿದೆ. 1,45,990ರೂ. ಮೂಲ ಬೆಲೆಯ ಲ್ಯಾಪ್‌ಟಾಪ್‌ ನಿಮಗೆ ಕೇವಲ 1,01,990ರೂ. ಬೆಲೆಗೆ ದೊರೆಯಲಿದೆ. ಇದಲ್ಲದೆ ಹೆಚ್‌ಡಿಎಫ್‌ಸಿ ಕ್ರೆಡಿಟ್‌ ಕಾರ್ಡ್‌ ಬಳಸಿ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ. ಜೊತೆಗೆ ಕ್ಯಾಶ್‌ಬ್ಯಾಕ್‌ ಆಫರ್‌ ಕೂಡ ಲಭ್ಯವಾಗಲಿದೆ. ಇನ್ನು ಈ ಲ್ಯಾಪ್‌ಟಾಪ್‌ ಇಂಟೆಲ್‌ 12ನೇ ತಲೆಮಾರಿನ i7-12700H ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಆಸುಸ್‌ ಟಫ್‌ ಗೇಮಿಂಗ್‌ F15 (2021)

ಆಸುಸ್‌ ಟಫ್‌ ಗೇಮಿಂಗ್‌ F15 (2021) ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಇದನ್ನು ನೀವು ಕೇವಲ 54,990ರೂ. ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಲ್ಯಾಪ್‌ಟಾಪ್‌ 15.6 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇಂಟೆಲ್ ಕೋರ್ i5-10300H ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 10 ನೇ ಜನ್ GTX 1650 4GB ಗ್ರಾಫಿಕ್ಸ್ ಕಾರ್ಡ್‌ ಅನ್ನು ಒಳಗೊಂಡಿದೆ. ಹಾಗೆಯೇ 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ.

ಈ ಲ್ಯಾಪ್‌ಟಾಪ್‌ಗಳ ಮೇಲೆ ಭಾರಿ ಡಿಸ್ಕೌಂಟ್‌! ಇನ್ಯಾಕೆ ತಡ ಇಂದೇ ಖರೀದಿಸಿ!

ಏಸರ್‌ ಅಸ್ಪೈರ್‌ 5 ಗೇಮಂಗ್‌ ಲ್ಯಾಪ್‌ಟಾಪ್‌

ಏಸರ್‌ ಅಸ್ಪೈರ್‌ 5 ಗೇಮಂಗ್‌ ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ 27% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ 84,999ರೂ. ಬೆಲೆಯ ಲ್ಯಾಪ್‌ಟಾಪ್‌ ನಿಮಗೆ 61,990ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಇಂಟೆಲ್‌ ಕೋರ್‌ i5 12ನೇ ತಲೆಮಾರಿನ (12-Cores) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB ಮತ್ತು 512 GB ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಲ್ಯಾಪ್‌ಟಾಪ್‌ ಮೇಲೆ ಬ್ಯಾಂಕ್‌ ಆಫರ್‌ ಕೂಡ ಲಭ್ಯವಿದ್ದು, ಕ್ಯಾಶ್‌ಬ್ಯಾಕ್‌ ಕೂಡ ಲಭ್ಯವಾಗಲಿದೆ.

Best Mobiles in India

English summary
Huge Discount available For These Laptops on Amazon; details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+