ಅಗ್ಗದ ಬೆಲೆಯ ಈ ಮೊಬೈಲ್ ಈಗ ಮತ್ತಷ್ಟು ಸಸ್ತಾ ಬೆಲೆಗೆ ಲಭ್ಯ!
ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಬಿಲಿಯನ್ ಡೇಸ್ ಸೇಲ್ ಅತ್ಯುತ್ತಮ ಕೊಡುಗೆಗಳ ಮೂಲಕ ಸದ್ದು ಮಾಡಿದೆ. ದಸರಾ ಪ್ರಯುಕ್ತ ಅಂಗವಾಗಿ ಪ್ರಾರಂಭವಾಗಿರುವ ಈ ಸೇಲ್ ಮೇಳದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 7 HD ಮೊಬೈಲ್ ಇದೀಗ ಗ್ರಾಹಕರು OMG ಎನ್ನುವಂತಹ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 7 HD ಮೊಬೈಲ್ ಶೇ. 25% ರಷ್ಟು ವಿನಾಯ್ತಿ ಪಡೆದಿದ್ದು, 2 GB RAM + 64 GB ವೇರಿಯಂಟ್ ಫೋನ್ 5,999 ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆಗಳು ಕೂಡಾ ಗ್ರಾಹಕರಿಗೆ ಸಿಗಲಿವೆ. ಈ ನಿಟ್ಟಿನಲ್ಲಿ ಮತ್ತಷ್ಟು ರಿಯಾಯಿತಿ ಬೆಲೆಗೆ ಫೋನ್ ಖರೀದಿಸಬಹುದು.

ಅಂದಹಾಗೆ ಇನ್ಫಿನಿಕ್ಸ್ ಸ್ಮಾರ್ಟ್ 7 HD ಫೋನ್ ಯುನಿಸೋಕ್ SC9863A1 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಅವಕಾಶ ಪಡೆದಿದೆ. 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಇದೆ. ಹಾಗಾದರೇ ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್
ಇನ್ಫಿನಿಕ್ಸ್ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಿದೆ. ಇದರ ಜೊತೆಗೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಪೋರ್ಟ ಮಾಡಲಿದೆ.
ಪ್ರೊಸೆಸರ್ ಕಾರ್ಯವೈಖರಿ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಫೋನ್ ಆಕ್ಟಾ-ಕೋರ್ ಯುನಿಸೋಕ್ SC9863A1 SoC ಪ್ರೊಸೆಸರ್ ಪಡೆದಿದ್ದು, ಇದು ಆಂಡ್ರಾಯ್ಡ್ 12 (ಗೋ ಎಡಿಷನ್) ಆಧಾರಿತ XOS 12 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಇದಲ್ಲದೆ RAM ಅನ್ನು ವಾಸ್ತವಿಕವಾಗಿ 4GB ವರೆಗೆ ವಿಸ್ತರಿಸಬಹುದು. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಬಹುದು.
ಡ್ಯುಯಲ್ ಕ್ಯಾಮೆರಾ ರಚನೆ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಮೊಬೈಲ್ AI-ಬೆಂಬಲಿತ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ ಸೆಲ್ಫಿ ಪ್ರಿಯರಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ಇದರ ಸೆಲ್ಫಿ ಕ್ಯಾಮೆರಾದ ಜೊತೆಗೆ ಎಲ್ಇಡಿ ಫ್ಲ್ಯಾಷ್ ಸೌಲಭ್ಯ ಪಡೆದಿದೆ.
ಬಿಗ್ ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಸ್ಮಾರ್ಟ್ 7 HD ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಅಧಿಕ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ. ಇದರಲ್ಲಿ ಅಲ್ಟ್ರಾ ಪವರ್ ಸೇವಿಂಗ್ ಮೋಡ್ ಅನ್ನು ಸಹ ನೀಡಲಾಗಿದ್ದು, ಇದರಿಂದ ಬ್ಯಾಟರಿಯು 5% ಗಿಂತ ಕಡಿಮೆ ಇದ್ದಾಗಲೂ ಸಹ 2 ಗಂಟೆಗಳ ಕಾಲ ಕಾಲ್ ಟೈಂ ಅನ್ನು ಒದಗಿಸಲಿದೆ.
ಕನೆಕ್ಟಿವಿಟಿ ಫೀಚರ್ಸ್ ಹೀಗಿವೆ
ಇನ್ಫಿನಿಕ್ಸ್ ಸ್ಮಾರ್ಟ್ 7 HD ಮೊಬೈಲ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, USB ಟೈಪ್-C ಪೋರ್ಟ್, ಬ್ಲೂಟೂತ್ 4.2, OTG ಮತ್ತು Wi-Fi ಅನ್ನು ಸಪೋರ್ಟ್ ಇದೆ. ಇದರ ಜೊತೆಗೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಪಡೆದುಕೊಂಡಿದೆ.


Click it and Unblock the Notifications








