Motorola: ಹೊಸ ಮೊಟೊರೊಲಾ g24 ಪವರ್ ಸ್ಮಾರ್ಟ್‌ಫೋನ್‌ಗೆ ಭರ್ಜರಿ ಡಿಸ್ಕೌಂಟ್...
ಮೊಟೊರೊಲಾ ಫೋನ್‌ಗಳು (Motorola phone) ಭಾರತದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದು, ಅದರಲ್ಲೂ ಬಜೆಟ್ ಬೆಲೆಯ ಫೋನ್‌ಗಳನ್ನು ಇಲ್ಲಿ ಜನರು ಮುಗಿಬಿದ್ದು ಖರೀದಿ ಮಾಡುತ್ತಾರೆ. ಈ ಬೆಳವಣಿಗೆ ನಡುವೆ ಈ ವರ್ಷದ ಆರಂಭದಲ್ಲಿ ಲಾಂಚ್ ಆದ ಹೊಸ ಮೊಟೊರೊಲಾ g24 ಪವರ್‌ಗೆ ಪವರ್‌ಫುಲ್ ಆಫರ್ ನೀಡಲಾಗಿದೆ.
ಹೌದು, ಮೊಟೊರೊಲಾ g24 ಪವರ್ ಸ್ಮಾರ್ಟ್‌ಫೋನ್ (Motorola g24 power smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹಾಗೂ 6000 mAh ಸಾಮರ್ಥ್ಯದ ಬ್ಯಾಟರಿ ಲಭ್ಯ ಇದೆ. ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ನ ಆಫರ್ ಬೆಲೆ ಎಷ್ಟು?, ಇದರ ಪ್ರಮುಖ ಫೀಚರ್ಸ್ ಏನು ಅನ್ನೋ ಮಾಹಿತಿ ಇಲ್ಲಿದೆ ನೋಡಿ.

ಮೊಟೊರೊಲಾ g24 ಪವರ್ ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆ ವಿಭಾಗದಲ್ಲಿ ಈಗಾಗಲೇ ದೊಡ್ಡ ಕ್ರಾಂತಿ ಉಂಟು ಮಾಡಿದೆ. ಇದು 11,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 7,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಅಂದರೆ ಫ್ಲಿಪ್‌ಕಾರ್ಟ್ ವಿಶೇಷ 33% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಖರೀದಿ ಮಾಡಬಹುದಾಗಿದೆ.
ಬ್ಯಾಂಕ್ ಆಫರ್ ವಿಚಾರಕ್ಕೆ ಬಂದರೆ ಫ್ಲಿಪ್‌ಕಾರ್ಟ್ ಯುಪಿಐ ಟಿಎಕ್ಸ್‌ಎನ್‌ಎಸ್‌ನಲ್ಲಿ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿನಲ್ಲಿ ಬ್ಯಾಂಕ್ ಆಫರ್, ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಹಿವಾಟುಗಳ ಮೇಲೆ ಬ್ಯಾಂಕ್ 1000 ರೂ.ಗಳ ರಿಯಾಯಿತಿ, ಕಾಂಬೊ ಮೊಬೈಲ್ ಮತ್ತು ಕೇಸ್ ಕವರ್‌ನಲ್ಲಿ ಹೆಚ್ಚುವರಿ 10% ರಿಯಾಯಿತಿ, ಫ್ಲಿಪ್‌ಕಾರ್ಟ್‌ಗೆ ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ನಂತರ ಪೇ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಮೊಟೊರೊಲಾ g24 ಪವರ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.56 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್ ಹಾಗೂ 537 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ 269 ppi ಸಾಂದ್ರತೆ, 84.9% ಸ್ಕ್ರೀನ್-ಟು-ಬಾಡಿ ಅನುಪಾತ ಹೊಂದಿದೆ.
ಮೊಟೊರೊಲಾ g24 ಪವರ್ ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಇನ್ನು ಈ ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ರನ್ ಆಗಲಿದ್ದು, ಮೀಡಿಯಾಟೆಕ್ MT6769Z ಹಿಲಿಯೊ G85 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G52 MC2 ಜಿಪಿಯು ಬಲದೊಂದಿಗೆ ಕೆಲಸ ಮಾಡಲಿದ್ದು, ಮೈಕ್ರೋ ಎಸ್‌ಡಿಕಾರ್ಡ್ ಸೌಲಭ್ಯ ಸಹ ಪಡೆದಿದೆ. ಹಾಗೆಯೇ ಆಫರ್ ಬೆಲೆಗೆ ಲಭ್ಯ ಇರುವ ಫೋನ್ 128GB + 4GB RAM ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ.
ಮೊಟೊರೊಲಾ g24 ಪವರ್ ಕ್ಯಾಮೆರಾ ರಚನೆ: ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದಿದ್ದು, ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ಮೊಟೊರೊಲಾ g24 ಪವರ್ ಬ್ಯಾಟರಿ ಹಾಗೂ ಇತರೆ: ಇನ್ನು ಈ ಫೋನ್ 6000 mAh ಸಾಮರ್ಥದ ಬ್ಯಾಟರಿ ಆಯ್ಕೆ ಪಡೆದಿದ್ದು, ಇದು 30W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ಪಡೆದುಕೊಂಡಿದೆ. ಹಾಗೆಯೇ ಸ್ಟೀರಿಯೋ ಸ್ಪೀಕರ್‌ಗಳೊಂದಿಗೆ 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, LE
ಜಿಪಿಎಸ್, ಗೆಲಿಲಿಯೋ, ಗ್ಲೋನಾಸ್ ಸ್ಥಾನೀಕರಣ, ಎನ್‌ಎಫ್‌ಸಿ (ಮಾರುಕಟ್ಟೆ/ಪ್ರದೇಶ ಅವಲಂಬಿತ), ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0 ಪೋರ್ಟ್ ಆಯ್ಕೆ ಪಡೆದುಕೊಂಡಿದೆ.


Click it and Unblock the Notifications








