Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಇರುವ ಈ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ಮಾಹಿತಿ!

ಲೀಡಿಂಗ್ ಇ ಕಾಮರ್ಸ್‌ ಎಂದೇ ಬಿಂಬಿತವಾಗಿರುವ ಅಮೆಜಾನ್‌ ತಾಣವು ಮೊಬೈಲ್‌ಗಳಿಗೆ ಒಂದಿಲ್ಲೊಂದು ರಿಯಾಯಿತಿ ಲಭ್ಯ ಮಾಡುತ್ತಾ ಸಾಗಿದೆ. ಈ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾದರಿಯ ಫೋನ್‌ ಸೇರಿದಂತೆ ಇತರೆ ಹೈ ಎಂಡ್‌ ಮೊಬೈಲ್‌ಗಳಿಗೂ ಭಾರೀ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಐಕ್ಯೂ Z7 ಪ್ರೊ 5G ಮೊಬೈಲ್‌ ಅತ್ಯುತ್ತಮ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು OMG ಎನ್ನುವಂತಾಗಿದೆ. ಅಂದಹಾಗೆ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ ಸೌಲಭ್ಯ ಪಡೆದಿದೆ.

ಹೌದು, ಐಕ್ಯೂ Z7 ಪ್ರೊ 5G ಫೋನ್‌ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಶೇ. 14% ರಷ್ಟು ಭರ್ಜರಿ ಡಿಸ್ಕೌಂಟ್‌ ದರದಲ್ಲಿ ಕಾಣಬಹುದಾಗಿದೆ. ಈ ಮೊಬೈಲ್‌ನ 8GB RAM + 256GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ 23,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಗ್ರಾಹಕರು ಆಯ್ದ ಕೆಲವು ಬ್ಯಾಂಕ್‌ಗಳ ಆಫರ್‌ ಕೂಡಾ ಪಡೆಯಲು ಅವಕಾಶ ಇದೆ.

ವೇಗದ ಪ್ರೊಸೆಸರ್‌ ಇರುವ ಈ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ಮಾಹಿತಿ!

ಅಂದಹಾಗೆ ಈ ಐಕ್ಯೂ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದುಕೊಂಡಿದೆ. ಹಾಗಾದರೇ ಐಕ್ಯೂ Z7 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಐಕ್ಯೂ Z7 ಪ್ರೊ 5G ಮೊಬೈಲ್‌ - ಫೀಚರ್ಸ್‌

ಐಕ್ಯೂ Z7 ಪ್ರೊ 5G ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ದಲ್ಲಿ ಇದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್‌ ಸ್ಯಾಂಪಲಿಂಗ್‌ ರೇಟ್‌ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಒದಗಿಸಲಾಗಿದೆ.

ಐಕ್ಯೂ Z7 ಪ್ರೊ 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್‌ ಪವರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಐಕ್ಯೂ Z7 ಪ್ರೊ 5G ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಪಡೆದಿದೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಫ್ಲಾಶ್, ಪನೋರಮಾ, HDR ಅನ್ನು ಪಡೆದುಕೊಂಡಿದೆ.

ಐಕ್ಯೂ Z7 ಪ್ರೊ 5G ಫೋನ್‌ 4,600mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 66W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, USB ಟೈಪ್-C 2.0, OTG ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಅಂಡರ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದರ ಜೊತೆಗೆ ಅಕ್ಸೆಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಕಂಪಾಸ್‌ ಸೌಲಭ್ಯಗಳನ್ನು ಕೂಡಾ ಪಡೆದಿದೆ.

Best Mobiles in India

English summary
Huge Price Cut on iQOO Z7 Pro 5G on Amazon website. check other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+