ಈ ಸ್ಟೈಲಿಶ್ ಫೋನ್ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಬೆಲೆ ಇಳಿಕೆ!
ಆನ್‌ಲೈನ್‌ನಲ್ಲಿ ಮೊಬೈಲ್ ಖರೀದಿಸುವ ಗ್ರಾಹಕರಿಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಕೂಡಾ ಒಂದು ಆಕರ್ಷಕ ಪ್ಲಾಟ್‌ಫಾರ್ಮ್ ಎನಿಸಿದೆ. ಕೊಡುಗೆ ನೀಡುವ ಮೂಲಕ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ಸಂಸ್ಥೆಯು ಎಲ್ಲ ಮಾದರಿಯ ಫೋನ್‌ಗಳಿಗೆ ಬೊಂಬಾಟ್ ಆಫರ್ ಕಾಣಬಹುದಾಗಿದೆ. ಇದೀಗ ಐಟೆಲ್ S23 ಕೂಡಾ ಸಖತ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಭಾರೀ ಸಂತಸ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಐಟೆಲ್ S23 ಮೊಬೈಲ್ ಶೇ.27% ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಅನ್ನು 6,870ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇನ್ನು ಈ ಫೋನ್ ಯುನಿಸೋಕ್ T606 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ.

ಈ ಫೋನ್ ಯುನಿಸೊಕ್ T606 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಸೌಲಭ್ಯ ಕೂಡಾ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ರಚನೆ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಟೆಲ್ S23 ಮೊಬೈಲ್ - ಫೀಚರ್ಸ್
ಐಟೆಲ್ ಸಂಸ್ಥೆಯ ಈ ಮೊಬೈಲ್ 6.6 ಇಂಚಿನ HD+ ಐಪಿಎಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಫೋನ್ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ.

ಐಟೆಲ್ S23 ಫೋನ್ ಆಕ್ಟಾ ಕೋರ್ 12nm ಯುನಿಸೊಕ್ T606 SoC ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 12 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೊರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಅಲ್ಲದೇ ವರ್ಚುವಲ್ RAM ಬಳಸುವುದಕ್ಕೆ ಕೂಡ ಅವಕಾಶ ಪಡೆದಿದೆ. ಜೊತೆಗೆ ಇದರಿಂದ ಆನ್‌ಬೋರ್ಡ್ ಮೆಮೊರಿಯನ್ನು 16 GB ವರೆಗೆ ವಿಸ್ತರಿಸಬಹುದು.
ಐಟೆಲ್ S23 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಸೌಲಭ್ಯ ಕೂಡಾ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್ LED ಫ್ಲ್ಯಾಷ್ ಸೌಲಭ್ಯ ಸಹ ಕಾಣಿಸಿಕೊಂಡಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಕೂಡಾ ಪಡೆದಿದೆ. ಕ್ಯಾಮೆರಾ ರಚನೆ ವೃತ್ತಾಕಾರ ಮಾದರಿಯಲ್ಲಿ ಇದೆ.
ಐಟೆಲ್ S23 ಮೊಬೈಲ್ 10W ವೈರ್ಡ್ ಚಾರ್ಜಿಂಗ್‌ಗೆ ಸಪೋರ್ಟ್ ಒದಗಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 15 ಗಂಟೆಗಳ ಬ್ಯಾಟರಿ ಅವಧಿ ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಈ ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ಐಟೆಲ್ ಕಂಪನಿಯ ಈ ಸ್ಮಾರ್ಟ್‌ಫೊನ್ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಮೊಬೈಲ್ ಅನ್ನು ಖರೀದಿದಾರರು ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಕೊಂಡುಕೊಳ್ಳಬಹುದಾಗಿದೆ.


Click it and Unblock the Notifications








