ಇತ್ತೀಚಿಗೆ ಬಿಡುಗಡೆ ಆದ ಈ 5G ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ಲಾವಾ ಮೊಬೈಲ್ ಸಂಸ್ಥೆಯು ಮಾರುಕಟ್ಟೆಯಲ್ಲಿ ಅಗ್ಗದ ಹಾಗೂ ಬಜೆಟ್ ದರದ ಫೋನ್‌ಗಳ ಮೂಲಕ ಗಮನ ಸೆಳೆದಿದೆ. ಆ ಪೈಕಿ ಲಾವಾ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಲಾವಾ ಸ್ಟಾರ್ಮ್ 5G ಸ್ಮಾರ್ಟ್‌ಫೋನ್ ಡಿಸೈನ್ ಹಾಗೂ ಬೆಲೆಯಿಂದ ಆಕರ್ಷಕ ಎನಿಸಿದೆ. ಸದ್ಯ ಅಮೆಜಾನ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಲಾವಾ ಸಂಸ್ಥೆಯ ಲಾವಾ ಸ್ಟಾರ್ಮ್ 5G ಸ್ಮಾರ್ಟ್‌ಫೋನ್ ಶೇ. 17% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128GB ವೇರಿಯಂಟ್ 12,499ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಆಗಲಿದೆ. ಅಲ್ಲದೇ ಅಮೆಜಾನ್ ತಾಣದಲ್ಲಿ ಇತರೆ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್ ಸಹ ಲಭ್ಯ ಆಗಲಿದೆ.

ಇನ್ನು ಲಾವಾ ಸ್ಟಾರ್ಮ್ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇನ್ನು ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಹಾಗಾದರೆ ಲಾವಾ ಸ್ಟಾರ್ಮ್ 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ ಸ್ಟಾರ್ಮ್ 5G - ಫೀಚರ್ಸ್
ಲಾವಾ ಸ್ಟಾರ್ಮ್ 5G ಮೊಬೈಲ್ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 396ppi ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದೆ. ಇದು Widevine L1 ಪ್ರಮಾಣೀಕರಣವನ್ನು ಬೆಂಬಲಿಸುತ್ತದೆ.

ಲಾವಾ ಸ್ಟಾರ್ಮ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು 2.4GHz ನಲ್ಲಿ ಎರಡು ಕಾರ್ಟೆಕ್ಸ್ A76 ಕೋರ್‌ಗಳನ್ನು ಪಡೆದಿದೆ. 2.0GHz ನಲ್ಲಿ ಆರು ಕಾರ್ಟೆಕ್ಸ್ A55 ಕೋರ್‌ಗಳು ಮತ್ತು ಮಾಲಿ G57 MP2 GPU ಹೊಂದಿದೆ. ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 13 ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಲಾವಾ ಸ್ಟಾರ್ಮ್ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸಪೋರ್ಟ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸಲ್ ಅಲ್ಟ್ರಾವೈಡ್ ಲೆನ್ಸ್ ಜೊತೆಗೆ LED ಫ್ಲ್ಯಾಶ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಸ್ಕ್ರೀನ್ ಫ್ಲ್ಯಾಶ್ಡ್ಯುಯಲ್ ವೈಯಕ್ತಿಕ ಕ್ಯಾಮೆರಾ ರಿಂಗ್‌ಗಳನ್ನು ಮತ್ತು ಹಿಂಭಾಗದಲ್ಲಿ ಎಲ್‌ಇಡಿ ಫ್ಲ್ಯಾಷ್‌ಗಾಗಿ ಪ್ರತ್ಯೇಕ ರಿಂಗ್ ಅನ್ನು ಪಡೆದಿದೆ.
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಇದರಿಂದ ಫೋನ್ ಅನ್ನು 82 ನಿಮಿಷಗಳಲ್ಲಿ 0 ರಿಂದ 100 ವರೆಗೆ ಚಾರ್ಜ್ ಮಾಡಬಹುದು ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಒಟಿಜಿ ಸಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.0, ಅನ್ನು ಬೆಂಬಲಿಸಲಿದೆ. ಇದು ಲಾವಾ ಥಂಡರ್ ಬ್ಲಾಕ್ ಮತ್ತು ಗೇಲ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








