Home
ಸುದ್ದಿಜಾಲ

ಒನ್‌ಪ್ಲಸ್‌ನ ಈ ದೈತ್ಯ 5G ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಗ್ಯಾರಂಟಿ!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಆಯ್ದ ಮೊಬೈಲ್‌ ಒಂದಿಲ್ಲೊಂದು ವಿಶೇಷ ಡಿಸ್ಕೌಂಟ್‌ ಲಭ್ಯ ಮಾಡಿರುತ್ತದೆ. ಹೀಗೆ ಈ ವೆಬ್‌ಸೈಟ್‌ನಲ್ಲಿ ಕೆಲವು ಜನಪ್ರಿಯ ಮೊಬೈಲ್‌ಗಳು ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇವೆ. ಅವುಗಳ ಪೈಕಿ ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 11R 5G ಮೊಬೈಲ್‌ ಸಹ ಭಾರೀ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 11R 5G ಮೊಬೈಲ್‌ ಶೇ. 18% ರಷ್ಟು ಬೊಂಬಾಟ್‌ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ನ 16 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಕೊಡುಗೆಯಲ್ಲಿ 36,788ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಇತರೆ ಆಫರ್‌ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ ಪ್ರೈಸ್‌ನಲ್ಲಿ ಖರೀದಿ ಮಾಡಬಹುದು.

ಒನ್‌ಪ್ಲಸ್‌ನ ಈ ದೈತ್ಯ 5G ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಗ್ಯಾರಂಟಿ!

ಅಂದಹಾಗೆ ಒನ್‌ಪ್ಲಸ್‌ನ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಪಡೆದಿದ್ದು, ಹಾಗೆಯೇ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದ್ದು, 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಇದೆ. ಇನ್ನುಳಿದಂತೆ ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್‌ 11R ಫೋನ್‌ - ಫೀಚರ್ಸ್‌

ಒನ್‌ಪ್ಲಸ್‌ 11R ಫೋನ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸಪೋರ್ಟ್ ಇದೆ.

ಒನ್‌ಪ್ಲಸ್‌ನ ಈ ದೈತ್ಯ 5G ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!..ಉಳಿತಾಯ ಗ್ಯಾರಂಟಿ!

ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಕಾರ್ಯವೈಖರಿ ಅನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲದಲ್ಲಿ ಕಾರ್ಯ ಮಾಡಲಿದೆ. ಇದಲ್ಲದೇ ಈ ಫೋನ್‌ 8GB RAM + 256 GB ಹಾಗೂ 16GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳನ್ನು ಸಹ ಪಡೆದುಕೊಂಡಿದೆ.

ಒನ್‌ಪ್ಲಸ್‌ನ ಈ ಮೊಬೈಲ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ನ ಈ ಜನಪ್ರಿಯ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G, Wi-Fi, ಬ್ಲೂಟೂತ್ 5.3 ಕೂಡಾ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಸೌಲಭ್ಯಗಳ ಆಯ್ಕೆ ಕೂಡಾ ಹೊಂದಿದೆ.

ಒನ್‌ಪ್ಲಸ್‌ ಸಂಸ್ಥೆಯ ಈ ಸ್ಟೈಲಿಶ್‌ ಮೊಬೈಲ್‌ ದೇಶಿಯ ಮಾರುಕಟ್ಟೆಯಲ್ಲಿ 8GB + 256GB ಹಾಗೂ 16GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಮೊಬೈಲ್‌ ಸೋನಿಕ್‌ ಬ್ಲ್ಯಾಕ್‌ ಮತ್ತು ಗಾಲಾಟಿಕ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಸಬಹುದು.

Best Mobiles in India

English summary
Huge Price Cut on OnePlus 11R 5G on Flipkart website. Know more about offer price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+