Home
ಸುದ್ದಿಜಾಲ

ಒಪ್ಪೋ ಫೈಂಡ್‌ N3 ಫ್ಲಿಪ್ ಬೆಲೆಯಲ್ಲಿ ದಿಢೀರ್ ಇಳಿಕೆ!..ಗ್ರಾಹಕರಿಗೆ ಅಚ್ಚರಿ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒಪ್ಪೋ ಸಂಸ್ಥೆಯು ಹಲವು ಭಿನ್ನ ಸ್ಮಾರ್ಟ್‌ ಉತ್ಪನ್ನಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಒಪ್ಪೋ ಸಂಸ್ಥೆಯು ಫೋನ್‌ಗಳಲ್ಲಿ ಫ್ಲಿಪ್‌ ಮಾದರಿಯ ಫೋನ್‌ಗಳು ಸದ್ದು ಮಾಡಿವೆ. ಸಂಸ್ಥೆಯ ಒಪ್ಪೋ ಫೈಂಡ್‌ N3 ಫ್ಲಿಪ್ ಮೊಬೈಲ್‌ ಡಿಸೈನ್‌ ಭಾರೀ ಆಕರ್ಷಕ ಎನಿಸಿದ್ದು, ಈ ಫೋನ್‌ ಇದೀಗ ಭಾರೀ ಬೆಲೆ ಇಳಿಕೆ ಪಡೆದಿದೆ.

ಹೌದು, ಒಪ್ಪೋ ಸಂಸ್ಥೆಯ ಒಪ್ಪೋ ಫೈಂಡ್‌ N3 ಫ್ಲಿಪ್ ಫೋನ್‌ (Oppo Find N3 Flip 5G) ಅಮೆಜಾನ್‌ ತಾಣದಲ್ಲಿ ಶೇ. 15% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 99,999ರೂ. ಆಗಿದ್ದು, ಆದ್ರೆ, ಕೊಡುಗೆಯಲ್ಲಿ ಇದು 84,990ರೂ. ಗಳ ಬೆಲೆಯಲ್ಲಿ ಲಭ್ಯ ಇದೆ.

ಒಪ್ಪೋ ಫೈಂಡ್‌ N3 ಫ್ಲಿಪ್ ಬೆಲೆಯಲ್ಲಿ ದಿಢೀರ್ ಇಳಿಕೆ!..ಗ್ರಾಹಕರಿಗೆ ಅಚ್ಚರಿ!

ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9200SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಲ್ಲದೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹಾಗೂ ಡಿಸೈನ್‌

ಒಪ್ಪೋ ಫೈಂಡ್‌ N3 ಫ್ಲಿಪ್ ಫೋನ್‌ 6.8 ಇಂಚಿನ ಫುಲ್‌ HD LTPO AMOLED ಇನರ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, 1,080x2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 1Hz ಮತ್ತು 120Hz ನಡುವಿನ ಡೈನಾಮಿಕ್ ರಿಫ್ರೆಶ್ ರೇಟ್‌ ಹೊಂದಿದ್ದು, ಇನ್ನು ಮೊಬೈಲ್‌ 3.26 ಇಂಚಿನ ಕವರ್‌ ಡಿಸ್‌ಪ್ಲೇಯನ್ನು ಸಹ ಹೊಂದಿದೆ. ಹಾಗೆಯೇ ಕವರ್‌ ಡಿಸ್‌ಪ್ಲೇಯು ಅಮೋಲೆಡ್‌ ಪ್ಯಾನಲ್‌ ಅನ್ನು ಹೊಂದಿದ್ದು, 900 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ.

ಒಪ್ಪೋ ಫೈಂಡ್‌ N3 ಫ್ಲಿಪ್ ಬೆಲೆಯಲ್ಲಿ ದಿಢೀರ್ ಇಳಿಕೆ!..ಗ್ರಾಹಕರಿಗೆ ಅಚ್ಚರಿ!

ಯಾವ ಪ್ರೊಸೆಸರ್‌ ಪವರ್ ಇದೆ

ಒಪ್ಪೋದ ಈ ಮೊಬೈಲ್‌ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಒಪ್ಪೋದ ColorOS 13.2 ಸ್ಕಿನ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಹಾಗೆಯೇ ARM ಇಮ್ಮಾರ್ಟಲಿಸ್-G715 MC11 GPU ಅನ್ನು ಪಡೆದಿರುವ ಜೊತೆಗೆ 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಒಪ್ಪೋ ಫೈಂಡ್‌ N3 ಫ್ಲಿಪ್ ಬೆಲೆಯಲ್ಲಿ ದಿಢೀರ್ ಇಳಿಕೆ!..ಗ್ರಾಹಕರಿಗೆ ಅಚ್ಚರಿ!

ಟ್ರಿಪಲ್‌ ಕ್ಯಾಮೆರಾ ರಚನೆ

ಒಪ್ಪೋ ಫೈಂಡ್‌ N3 ಫ್ಲಿಪ್ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಪಡೆದಿದೆ. ತೃತೀಯ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಒಪ್ಪೋ ಫೈಂಡ್‌ N3 ಫ್ಲಿಪ್ ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 44W SuperVOOC ಚಾರ್ಜಿಂಗ್‌ಗೆ ಸಪೋರ್ಟ್ ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ 5G, 4G LTE, Wi-Fi 7, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಕೂಡಾ ಪಡೆದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಗೈರೊಸ್ಕೋಪ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ ಈ ಫೋನ್‌ ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಪೀಕರ್ ರಚನೆ ಹೊಂದಿದೆ.

ಕಲರ್‌ ಆಯ್ಕೆ ಹಾಗೂ ಮೆಮೊರಿ ಎಷ್ಟು

ಒಪ್ಪೋದ ಈ ಮೊಬೈಲ್‌ 12GB + 256GB RAM ವೇರಿಯಂಟ್‌ ಆಯ್ಕೆ ಪಡೆದಿದೆ. ಇನ್ನು ಈ ಫೋನ್‌ ಕ್ರೀಮ್ ಗೋಲ್ಡ್, ಮಿಸ್ಟಿ ಪಿಂಕ್, ಸ್ಲೀಕ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಫೋನ್‌ ಅನ್ನು ಒಪ್ಪೋದ ಅಧಿಕೃತ ಆನ್‌ಲೈನ್ ಸ್ಟೋರ್, ಅಮೆಜಾನ್‌ ಸ್ಟೋರ್‌ಗಳಲ್ಲಿ ಖರೀದಿ ಮಾಡಬಹುದು.

Best Mobiles in India

English summary
Huuge price cut on Oppo Find N3 Flip 5G on amazon india. check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+