ಕಡಿಮೆ ಬೆಲೆಗೆ ಹೊಸ ಫೋನ್ ಖರೀದಿಸಲು ಇದುವೇ ಸೂಪರ್ ಟೈಮ್!
ಜನಪ್ರಿಯ ಮೊಬೈಲ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಒಪ್ಪೋ ಕಂಪನಿಯ ಕೆಲವು ಮಾಡೆಲ್‌ಗಳು ಮಾರುಕಟ್ಟೆಯಲ್ಲಿ ಗಮನ ಸೆಳೆದಿವೆ. ಅದರಲ್ಲಿಯೂ ಸಂಸ್ಥೆಯ K ಸರಣಿಯ ಫೋನ್‌ಗಳು ಆಕರ್ಷಕ ಫೀಚರ್ಸ್ ಹಾಗೂ ಬೆಲೆಯಿಂದ ಹೆಚ್ಚಿನ ಗಮನ ಸೆಳೆದಿವೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ K12x 5G ( OPPO K12x 5G ) ಮೊಬೈಲ್ ಆಕರ್ಷಕ ಬೆಲೆ ಇಳಿಕೆ ಕಂಡಿದ್ದು, ಕಡಿಮೆ ಬೆಲೆಯಲ್ಲಿ ಫೋನ್ ಖರೀದಿಸಬೇಕು ಎಂದಿರುವ ಗ್ರಾಹಕರ ಖುಷಿ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ( Flipkart ) ಇ ಕಾಮರ್ಸ್ ತಾಣದಲ್ಲಿ ಸದ್ಯ ಒಪ್ಪೋ K12x 5G ( OPPO K12x 5G ) ಮೊಬೈಲ್ ಶೇ. 23% ರಷ್ಟು ಆಫರ್ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ವೇರಿಯಂಟ್ 12,999ರೂ. ಗಳ ಬೊಂಬಾಟ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಮತ್ತಷ್ಟು ಕಡಿಮೆ ಬೆಲೆಯಲ್ಲಿ ಫೋನ್ ಖರೀದಿಸಬಹುದು.

ಒಪ್ಪೋ ಸಂಸ್ಥೆಯ ಈ ಫೋನ್ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಸಬಹುದು. ಇನ್ನು ಈ ಫೋನಿನ ಮೊದಲ ಕ್ಯಾಮೆರಾವು 32 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ಒಪ್ಪೋ K12x 5G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ K12x 5G - ಫೀಚರ್ಸ್
ಒಪ್ಪೋ K12x 5G ಫೋನ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್ ಮತ್ತು 1000 nits ಬ್ರೈಟ್ನೆಸ್ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಒಪ್ಪೋ K12x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಸಪೋರ್ಟ್ ಸಹ ಪಡೆದಿದೆ. ಇದರ ಜೊತೆಗೆ ಇದು 6 + 128GB ಹಾಗೂ 8 + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಒಪ್ಪೋ K12x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಮುಖ್ಯ ಕ್ಯಾಮೆರಾವು 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ಹಾಗೆಯೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಒದಗಿಸಲಾಗಿದೆ.
ಒಪ್ಪೋ K12x 5G ಫೋನ್ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W SuperVOOC ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್ - ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ ಬ್ರೀಜ್ ಬ್ಲೂ, ಪಿಂಕ್ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








