Home
ಸುದ್ದಿಜಾಲ

ಸ್ಟೈಲಿಶ್‌ ಲುಕ್‌ ಇರುವ ಈ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಜನಪ್ರಿಯ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾದ ರಿಯಲ್‌ಮಿಯು ಕೆಲವು ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಅವುಗಳಲ್ಲಿ ಬಜೆಟ್‌ ಲೆವೆಲ್‌ ಫೋನ್‌ಗಳು ಸಹ ಬೊಂಬಾಟ್‌ ಫೀಚರ್ಸ್ ಮೂಲಕ ಗಮನ ಸೆಳೆದಿವೆ. ಆ ಪೈಕಿ ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ ಇದೀಗ ಭಾರೀ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಮಾಡಿದೆ.

ಹೌದು, ದೈತ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ ಶೇ. 16% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಗ್ರಾಹಕರು ಆಫರ್‌ನಲ್ಲಿ ಈಗ 13,999ರೂ. ಗಳ ಬೆಲೆಯಲ್ಲಿ ಖರೀದಿಸಬಹುದು. ಇದರೊಂದಿಗೆ ಲಭ್ಯವಿರುವ ಇತರೆ ಕೊಡುಗೆ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಲು ಅವಕಾಶ ಇದೆ.

ಸ್ಟೈಲಿಶ್‌ ಲುಕ್‌ ಇರುವ ಈ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಇನ್ನು ರಿಯಲ್‌ಮಿ 11X 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಅಂದಹಾಗೆ ಈ ಫೋನ್‌ 6GB + 128GB ವೇರಿಯಂಟ್‌ ಹಾಗೂ 8GB + 128GB ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಫೋನ್‌ ಮೀಡ್‌ನೈಟ್‌ ಬ್ಲ್ಯಾಕ್‌ ಹಾಗೂ ಪರ್ಪಲ್‌ ಕಲರ್‌ ಆಯ್ಕೆ ಪಡೆದಿದೆ. ಹಾಗಾದರೆ ರಿಯಲ್‌ಮಿ 11X 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಟೈಲಿಶ್‌ ಲುಕ್‌ ಇರುವ ಈ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ರಿಯಲ್‌ಮಿ 11X 5G ಫೋನ್‌ - ಫೀಚರ್ಸ್‌

ರಿಯಲ್‌ಮಿ 11X 5G ಸ್ಮಾರ್ಟ್‌ ಫೋನ್‌ 6.72 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಹಾಗೆಯೇ ತನ್ನ ವರ್ಗದಲ್ಲೇ ಉತ್ತಮ ಪಿಕ್ಸಲ್‌ ರೆಸಲ್ಯೂಶನ್‌ ಪಡೆದಿದೆ. ಈ ಮೊಬೈಲ್‌ನ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಸಹ ಮಾಡುತ್ತದೆ.

ರಿಯಲ್‌ಮಿ ಸಂಸ್ಥೆಯ ಈ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಇದು 6 GB RAM ಮತ್ತು 128 GB ಹಾಗೂ 6 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇದೆ.

ಹಾಗೆಯೇ ರಿಯಲ್‌ಮಿ 11X 5G ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಪೋರ್ಟ್ರೇಟ್ ಲೆನ್ಸ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ರಿಯಲ್‌ಮಿ 11X 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಅನ್ನು ಕೂಡಾ ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ 5G, 4G, ವೈ ಫೈ, ಬ್ಲೂಟೂತ್ ಸೇರಿದಂತೆ ಇತರೆ ಅಗತ್ಯ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ. ಇನ್ನು ಈ ಫೋನ್‌ ಮೀಡ್‌ನೈಟ್‌ ಬ್ಲ್ಯಾಕ್‌ ಹಾಗೂ ಪರ್ಪಲ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Huge Price Cut on realme 11x 5G Phone in india. check offer price and other all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+