Home
ಸುದ್ದಿಜಾಲ

ರಿಯಲ್‌ಮಿ ನಾರ್ಜೊ 60x 5G ಫೋನ್‌ ಬೆಲೆಯಲ್ಲಿ ಭಾರೀ ರಿಯಾಯಿತಿ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಇ ಕಾಮರ್ಸ್‌ ತಾಣವಾಗಿ ಗುರುತಿಸಿಕೊಂಡಿರುವ ಅಮೆಜಾನ್‌ನಲ್ಲಿ ಕ್ರಿಸ್‌ಮಸ್ ಅಂಗವಾಗಿ ವಿಶೇಷ ಸೇಲ್‌ ಆಯೋಜಿಸಿದ್ದು, ಗ್ರಾಹಕರನ್ನು ಸೆಳೆದಿದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಫೋನ್‌ಗಳು ಅತ್ಯುತ್ತಮ ರಿಯಾಯಿತಿ ಪಡೆದಿದ್ದು, ಅವುಗಳ ಪೈಕಿ ರಿಯಲ್‌ಮಿ ನಾರ್ಜೊ 60x 5G ಸ್ಮಾರ್ಟ್‌ಫೋನ್‌ ಸಹ ಒಂದು.

ಹೌದು, ಜನಪ್ರಿಯ ಅಮೆಜಾನ್‌ ಪ್ಲಾಟ್‌ಫರ್ಮ್‌ನಲ್ಲಿ ರಿಯಲ್‌ಮಿ ನಾರ್ಜೊ 60x ಫೋನ್‌ ಶೇ. 10% ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಫರ್‌ ನಲ್ಲಿ ಸದ್ಯ 17,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಕೆಲವು ಬ್ಯಾಂಕ್‌ ಕೊಡುಗೆ ಸೇರಿದಂತೆ ಇತರೆ ಕೆಲವು ರಿಯಾಯಿತಿಗಳು ಸಹ ಲಭ್ಯವಾಗಲಿವೆ.

ರಿಯಲ್‌ಮಿ ನಾರ್ಜೊ 60x 5G ಫೋನ್‌ ಬೆಲೆಯಲ್ಲಿ ಭಾರೀ ರಿಯಾಯಿತಿ!

ಇನ್ನು ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಮೊಬೈಲ್‌ 8GB RAM + 128 GB ಮತ್ತು 8GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 60x ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಹಾಗೂ ವಿನ್ಯಾಸ

ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ 6.74 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಸಹ ಒಳಗೊಂಡಿದೆ.

ಪ್ರೊಸೆಸರ್‌ ಬಲ ಹೇಗಿದೆ?

ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಬಲದೊಂದಿಗೆ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ಸಪೋರ್ಟ್‌ ಇದೆ. ಹಾಗೆಯೇ ಇದು 8GB RAM + 128 GB ಹಾಗೂ 8GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಆಯ್ಕೆ ಇದೆ.

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ರಿಯಲ್‌ಮಿ ನಾರ್ಜೊ 60x ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಪಡೆದಿದೆ. ಅಲ್ಲದೇ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ

ರಿಯಲ್‌ಮಿ ನಾರ್ಜೊ 60x ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯ ಸಹ ಒಳಗೊಂಡಿದೆ.

ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆ ಹೀಗಿವೆ

ರಿಯಲ್‌ಮಿ ನಾರ್ಜೊ 60x ಮೊಬೈಲ್‌8GB RAM + 128 GB ಮತ್ತು 8GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಬ್ಲೂ ಮತ್ತು ಪರ್ಪಲ್‌ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Huge price cut on realme narzo 60 5G phone on amazon. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+