Home
ಸುದ್ದಿಜಾಲ

ಹೊಸ ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಭರ್ಜರಿ ಖುಷಿ ಸಂಗತಿ!

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ ಸರಣಿಯಲ್ಲಿ ಹಲವು ರೇಂಜ್‌ನ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿ ಮಾರುಕಟ್ಟೆ ಗಮನ ಸೆಳೆದಿದೆ. ಅವುಗಳಲ್ಲಿ ಬಜೆಟ್‌ ಬೆಲೆಯಲ್ಲಿ ಹೆಚ್ಚು ಡಿಮ್ಯಾಂಡ್‌ ಪಡೆದಿವೆ. ಇದೀಗ ಸಂಸ್ಥೆಯ ಗ್ಯಾಲಕ್ಸಿ 14 5G, ಗ್ಯಾಲಕ್ಸಿ F14 5G, ಗ್ಯಾಲಕ್ಸಿ M04 ಹಾಗೂ ಗ್ಯಾಲಕ್ಸಿ F04 ಸ್ಮಾರ್ಟ್‌ಫೊನ್‌ಗಳು ಭರ್ಜರಿ ಬೆಲೆ ಇಳಿಕೆ ಪಡೆದಿವೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ತನ್ನ ಇದೀಗ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ 14 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನ್‌ಗಳ ಬೆಲೆಯಲ್ಲಿ ಸಖತ್ ಇಳಿಕೆ ಮಾಡಿದ್ದು, ಗ್ರಾಹಕರಿಗೆ ಭರ್ಜರಿ ಖುಷಿ ನೀಡಿದೆ.

ಹೊಸ ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಭರ್ಜರಿ ಖುಷಿ ಸಂಗತಿ!

ಸ್ಯಾಮ್‌ಸಂಗ್‌ ಸಂಸ್ಥೆಯು ಗ್ಯಾಲಕ್ಸಿ 14 5G ಫೋನಿನ ಬೆಲೆಯಲ್ಲಿ 1000ರೂ, ಗ್ಯಾಲಕ್ಸಿ F14 5G ಫೋನಿನ ಬೆಲೆಯಲ್ಲಿ 2,500ರೂ, ಗ್ಯಾಲಕ್ಸಿ M04 ಫೋನಿನ ಬೆಲೆಯಲ್ಲಿ 500ರೂ ಹಾಗೂ ಗ್ಯಾಲಕ್ಸಿ F04 ಫೋನಿನ ಬೆಲೆಯಲ್ಲಿ 1500ರೂ. ಗಳ ಇಳಿಕೆ ತಿಳಿಸಿದೆ. ಹಾಗಾದರೆ ಸ್ಯಾಮ್‌ಸಂಗ್‌ನ ಈ ನಾಲ್ಕು ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25 W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಹೊಸ ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಭರ್ಜರಿ ಖುಷಿ ಸಂಗತಿ!

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ 6.6 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು ಹೆಚ್‌ಡಿ ಪ್ಲಸ್‌ LCD ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ ಇದು ಆಕ್ಟಾ ಕೋರ್ Exynos 1330 ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇತ್ತೀಚಿನ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ. ಜೊತೆಗೆ ಈ ಫೋನ್‌ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದರೊಂದಿಗೆ 25W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ P35 ಪ್ರೊಸೆಸರ್ ಪವರ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

Best Mobiles in India

English summary
Samsung Galaxy M14 5G, Galaxy F14 5G, Galaxy M04, Galaxy F04 Prices drop in India. check all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+