Home
ಸುದ್ದಿಜಾಲ

ಈ ಫೋನಿಗೆ ಬಿಗ್‌ ಆಫರ್‌!..ಇದರ ಡಿಸೈನ್‌ ಹಾಗೂ ಫೀಚರ್ಸ್‌ಗೆ ಪಕ್ಕಾ ಫಿದಾ ಆಗ್ತೀರಾ!

ಸ್ವದೇಶಿ ಮೂಲದ ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ ಎನಿಸಿರುವ ಲಾವಾ ಅಗ್ಗದ ಹಾಗೂ ಬಜೆಟ್‌ ಬೆಲೆಯಲ್ಲಿ ಫೋನ್‌ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ಲಾಂಚ್ ಮಾಡಿರುವ ಲಾವಾ ಯುವ 2 ಪ್ರೊ ಮೊಬೈಲ್‌ ಇದೀಗ ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಲಾವಾ ಯುವ 2 ಪ್ರೊ ಮೊಬೈಲ್‌ ಶೇ. 22% ರಷ್ಟು ನೇರ ವಿನಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ 9,999ರೂ. ಪ್ರೈಸ್‌ಟ್ಯಾಗ್‌ ಅನ್ನು ಪಡೆದುಕೊಂಡಿದ್ದು, ಆಫರ್‌ನಲ್ಲಿ ಈ ಫೋನ್‌ 7,823ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್‌ ಆಫರ್‌ ಕೊಡುಗೆಗಳು ಸಹ ಲಭ್ಯ ಆಗಲಿವೆ.

ಈ ಫೋನಿಗೆ ಬಿಗ್‌ ಆಫರ್‌!..ಇದರ ಡಿಸೈನ್‌ ಹಾಗೂ ಫೀಚರ್ಸ್‌ಗೆ ಪಕ್ಕಾ ಫಿದಾ ಆಗ್ತೀರಾ!

ಲಾವಾ ಯುವ 2 ಪ್ರೊ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸೆನ್ಸಾರ್‌ ನಲ್ಲಿದ್ದು, ಇದು 5ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗಾದರೇ ಲಾವಾ ಯುವ 2 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಲಾವಾ ಯುವ 2 ಪ್ರೊ ಮೊಬೈಲ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 269 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 60Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯ ವಿನ್ಯಾಸವನ್ನು ಹೊಂದಿದೆ.

ಈ ಫೋನಿಗೆ ಬಿಗ್‌ ಆಫರ್‌!..ಇದರ ಡಿಸೈನ್‌ ಹಾಗೂ ಫೀಚರ್ಸ್‌ಗೆ ಪಕ್ಕಾ ಫಿದಾ ಆಗ್ತೀರಾ!

ಪ್ರೊಸೆಸರ್‌ ಪವರ್ ಯಾವುದು

ಲಾವಾ ಯುವ 2 ಪ್ರೊ ಮೊಬೈಲ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 12 OS ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ 3 GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.

ಕ್ಯಾಮೆರಾ ರಚನೆಯ ಮಾಹಿತಿ

ಲಾವಾ ಯುವ 2 ಪ್ರೊ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ, HDR, ನೈಟ್‌ಮೋಡ್‌, ಫೋರ್ಟ್ರೆಟ್‌ ಮೋಡ್, AI, ಪ್ರೊ, ಪನೋರಮಾ, ಸ್ಲೋ ಮೋಷನ್, ಫಿಲ್ಟರ್‌ಗಳು, GIF, ಟೈಮ್‌ಲ್ಯಾಪ್ಸ್‌ ನಂತಹ ಫೀಚರ್ಸ್‌ ಗಳನ್ನು ಪಡೆದಿದೆ.

ಈ ಫೋನಿಗೆ ಬಿಗ್‌ ಆಫರ್‌!..ಇದರ ಡಿಸೈನ್‌ ಹಾಗೂ ಫೀಚರ್ಸ್‌ಗೆ ಪಕ್ಕಾ ಫಿದಾ ಆಗ್ತೀರಾ!

ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಲಾವಾ ಯುವ 2 ಪ್ರೊ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಇದು USB-C ಪೋರ್ಟ್ ಮೂಲಕ 10W ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಬೆಂಬಲ, 4G VoLTE, Wi-Fi 802.11ac, ಬ್ಲೂಟೂತ್ 5.1, GPS, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ ಅನ್ನು ಪಡೆದಿದೆ.

ಕಲರ್ ಹಾಗೂ ಮೆಮೊರಿ ಆಯ್ಕೆ

ಲಾವಾ ಯುವ 2 ಪ್ರೊ ಮೊಬೈಲ್‌ 4 GB RAM ಮತ್ತು 64 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Huge Price Drop on Lava Yuva 2 Pro on amazon. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+