Home
ಸುದ್ದಿಜಾಲ

ಈ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಈಗ ಭಾರೀ ಅಗ್ಗದ ಬೆಲೆಗೆ ಲಭ್ಯ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ (Flipkart) ಆನ್‌ಲೈನ್‌ ಗ್ರಾಹಕರಿಗೆ ಅತ್ಯುತ್ತಮ ತಾಣವಾಗಿ ಗುರುತಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್ ಪ್ರಮುಖವಾಗಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ಕೊಡುಗೆ ಘೋಷಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಮೊಟೊರೊಲಾ ಸಂಸ್ಥೆಯ ಎಂಟ್ರಿ ಲೆವೆಲ್‌ ಮೊಟೊರೊಲಾ G04s (Motorola g04s) ಸ್ಮಾರ್ಟ್‌ಫೋನ್‌ ಭರ್ಜರಿ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಖುಷಿ ಎನಿಸಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊಟೊರೊಲಾ G04s (Motorola g04s) ಮೊಬೈಲ್‌ ಶೇ. 30% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ನ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ 6,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಆಯ್ದ ಬ್ಯಾಂಕ್‌ ಆಫರ್‌ಗಳು ಕೂಡಾ ಗ್ರಾಹಕರಿಗೆ ಲಭ್ಯ ಆಗಲಿವೆ.

ಈ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಈಗ ಭಾರೀ ಅಗ್ಗದ ಬೆಲೆಗೆ ಲಭ್ಯ!

ಹಾಗೆಯೇ ಮೊಟೊ G04s ಫೋನ್‌ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದೆ. ಹಾಗೆಯೇ ಇದು ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಮೊಟೊ G04s ಫೋನಿನ ಇತರೆ ಫೀಚರ್ಸ್‌ ಯಾವುವು ಹಾಗೂ ಆಫರ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ G04s - ಫೀಚರ್ಸ್‌

ಮೊಟೊರೊಲಾ G04s ಮೊಬೈಲ್‌ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. 90Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ, ಗೊರಿಲ್ಲಾ ಗ್ಲಾಸ್‌ 3 ರಕ್ಷಣೆ ಸಹ ಪಡೆದುಕೊಂಡಿದೆ. ಅಲ್ಲದೇ ಇದು 7.99 mm ತೆಳ್ಳನೆಯ ರಚನೆ ಪಡೆದಿದ್ದು, 178 ಗ್ರಾಂ ತೂಕವನ್ನು ಪಡೆದುಕೊಂಡಿದೆ.

ಮೊಟೊರೊಲಾ G04s ಮೊಬೈಲ್‌ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಓಎಸ್ ಅನ್ನು ಬೆಂಬಲ ಸಹ ಪಡೆದಿದೆ. ಇದರೊಂದಿಗೆ 4 GB RAM + 64 GB ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು 1 TB ವರೆಗೆ ಸ್ಟೋರೇಜ್‌ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಮೊಟೊರೊಲಾ G04s ಫೋನ್‌ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಅದು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್‌ ಲೈಟ್ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನಿನ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 5 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಒದಗಿಸಲಾಗಿದೆ.

ಮೊಟೊರೊಲಾ G04s ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದ್ದು, ಇದರ ಜೊತೆಗೆ 15W ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್‌ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Huge Price Drop on Motorola g04s phone. now available at affordable price on flipkart website. know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+