Home
ಸುದ್ದಿಜಾಲ

ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಇದರ ಡಿಸೈನ್‌ ಸೂಪರ್!

ಭಾರತೀಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಸಂಸ್ಥೆಯು ಆಕರ್ಷಕ ಫೀಚರ್ಸ್‌ ಸೌಲಭ್ಯದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಗುರುತಿಸಿಕೊಂಡಿದೆ. ರಿಯಲ್‌ಮಿ ಸಂಸ್ಥೆ ಭಿನ್ನ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದ್ದು, ಆ ಪೈಕಿ ರಿಯಲ್‌ಮಿ 10 ಪ್ರೊ+ 5G ಫೋನ್‌ ಸಹ ಆಕರ್ಷಕ ಎನಿಸಿದೆ. ಇದೀಗ ಈ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ.

ಹೌದು, ರಿಯಲ್‌ಮಿ 10 ಪ್ರೊ+ 5G ಫೋನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಇದೀಗ ಕೊಡುಗೆಯಲ್ಲಿ 24,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ ಕೊಡುಗೆ ಕೂಡಾ ಲಭ್ಯ ಆಗಲಿವೆ.

ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಇದರ ಡಿಸೈನ್‌ ಸೂಪರ್!

ಹಾಗೆಯೇ ಈ ಮೊಬೈಲ್‌ ಕರ್ವ್‌ ಡಿಸ್‌ಪ್ಲೇ ಪಡೆದಿರುವುದು ಪ್ರಮುಖ ಹೈಲೈಟ್‌ ಆಗಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದರ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಸಹ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ಇನ್ನುಳಿದಂತೆ ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಇದರ ಡಿಸೈನ್‌ ಸೂಪರ್!

ರಿಯಲ್‌ಮಿ 10 ಪ್ರೊ+ 5G - ಫೀಚರ್ಸ್‌ ಹೀಗಿವೆ

ರಿಯಲ್‌ಮಿ 10ಪ್ರೊ + 5G ಮೊಬೈಲ್‌ 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 2,160Hz PWM ಡಿಮ್ಮಿಂಗ್‌ ಪಡೆದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೋರ್ಟ್‌ ಅನ್ನು ಪಡೆದಿದೆ.

ಹಾಗೆಯೇ ರಿಯಲ್‌ಮಿ 10ಪ್ರೊ + 5G ಫೋನ್‌ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಆಯ್ಕೆ ಹೊಂದಿದೆ. ಇದಲ್ಲದೆ ಡೈನಾಮಿಕ್ RAM ವಿಸ್ತರಣೆ ಮೂಲಕ 16GB ವರೆಗೆ RAM ಅನ್ನು ವಿಸ್ತರಿಸುವ ಅವಕಾಶ ಸಹ ನೀಡಲಾಗಿದೆ.

ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಇದರ ಡಿಸೈನ್‌ ಸೂಪರ್!

ಇನ್ನು ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಸಪೋರ್ಟ್‌ ಮಾಡುತ್ತದೆ. ಹೀಗಾಗಿ 47 ನಿಮಿಷಗಳಲ್ಲಿ ಶೇ. 100% ಫೋನ್‌ ಚಾರ್ಜ್‌ ಮಾಡಬಹುದಾಗಿದೆ. ಇನ್ನು ಈ ಫೋನ್‌ ಡ್ಯುಯಲ್-ಬ್ಯಾಂಡ್ Wi-Fi ಸಪೋರ್ಟ್ ಇದ್ದು, ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ 10 ಪ್ರೊ 5G - ಫೀಚರ್ಸ್‌ ಹೀಗಿವೆ

ಈ ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Huge Price Drop on realme 10 Pro+ 5G on flipkart. check offers, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+