50ಎಂಪಿ ಕ್ಯಾಮೆರಾ ಇರುವ ಈ ಫೋನ್ ಈಗ ಸಸ್ತಾ ಬೆಲೆಗೆ ಲಭ್ಯ!
ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳು ಹಬ್ಬದ ಅಂಗವಾಗಿ ಭರ್ಜರಿ ರಿಯಾಯತಿ ಘೋಷಿಸಿವೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಸಹ ಆಯ್ದ ಮೊಬೈಲ್‌ಗಳಿಗೆ ಸಖತ್ ಡಿಸ್ಕೌಂಟ್ ಲಭ್ಯ ಮಾಡಿದೆ. ಆ ಪೈಕಿ ಶಿಯೋಮಿ ಸಂಸ್ಥೆಯು ರೆಡ್ಮಿ 13C (REDMI 13C) ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ. ಇನ್ನು ಈ ಫೋನ್ 8GB RAM + 128 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅಗಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ದೀಪಾವಳಿ ಹಬ್ಬದ ಸೇಲ್‌ನಲ್ಲಿ ರೆಡ್ಮಿ 13C (REDMI 13C) ಫೋನ್ ಶೇ. 40% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 7,199ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಸಹ ಪಡೆಯಬಹುದಾಗಿದೆ.

ಇನ್ನು ರೆಡ್ಮಿ 13C ಫೋನಿನ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಅನ್ನು ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಸಬಹುದು. ಇನ್ನುಳಿದಂತೆ ರೆಡ್ಮಿ 13C (REDMI 13C) ಫೋನಿನ ಇತರೆ ಫೀಚರ್ಸ್ ಮುಂದೆ ನೋಡೋಣ ಬನ್ನಿರಿ.
ರೆಡ್ಮಿ 13C ಫೀಚರ್ಸ್ ಹೀಗಿವೆ
ರೆಡ್ಮಿ 13C ಮೊಬೈಲ್ 6.74 ಇಂಚಿನ HD+ ಡಿಸ್‌ಪ್ಲೇ ಸೌಲಭ್ಯ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಹ ಪಡೆದಿದೆ. ಇದರ ಜೊತೆಗೆ ಡಿಸ್‌ಪ್ಲೇ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ 13C ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಎಸ್‌ಡಿ ಮೆಮೊರಿ ಕಾರ್ಡ್ ಸಪೋರ್ಟ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.
ರೆಡ್ಮಿ 13C ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13C ಮೊಬೈಲ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಸಪೋರ್ಟ್ ಮಾಡುತ್ತದೆ ಮತ್ತು 18W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ.
ರೆಡ್ಮಿ 13C (REDMI 13C) ಮೊಬೈಲ್ ಎರಡು ಕಲರ್ ಆಯ್ಕೆ ಪಡೆದಿದೆ. ಅವುಗಳು ಕ್ರಮವಾಗಿ ಸ್ಟಾರ್ಡಸ್ಟ್ ಕಪ್ಪು ಮತ್ತು ಸ್ಟಾರ್ ಶೈನ್ ಗ್ರೀನ್ ಕಲರ್ ಆಯ್ಕೆಗಳು ಆಗಿವೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5G ಮಾದರಿಯಲ್ಲಿಯು ಕೂಡ ಲಭ್ಯವಿದೆ.


Click it and Unblock the Notifications








