Home
ಸುದ್ದಿಜಾಲ

5000mAh ಬ್ಯಾಟರಿ ಇರುವ ಈ Redmi ಫೋನ್‌ ಬೆಲೆಯಲ್ಲಿ ಇಳಿಕೆ; ಅಗ್ಗದ ಬೆಲೆಗೆ ಲಭ್ಯ!

ಅತ್ಯುತ್ತಮ ರಿಯಾಯಿತಿ ಘೋಷಿಸುವ ಮೂಲಕ ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯ ಗ್ರಾಹಕರನ್ನು ಆಕರ್ಷಿಸಿದೆ. ಈ ಆನ್‌ಲೈನ್‌ ವೆಬ್‌ಸೈಟ್‌ ಎಲ್ಲ ಉತ್ಪನ್ನಗಳಿಗೂ ಏನಾದರೊಂದು ಡಿಸ್ಕೌಂಟ್‌ ಲಭ್ಯ ಮಾಡಿರುತ್ತದೆ. ಅದರಲ್ಲಿಯೂ ಮುಖ್ಯವಾಗಿ ಮೊಬೈಲ್‌ಗಳಿಗೂ ಸಹ ಬೊಂಬಾಟ್‌ ಡಿಸ್ಕೌಂಟ್‌ ಕೊಡುಗೆಗಳನ್ನು ನೀಡುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ರೆಡ್ಮಿ ಮೊಬೈಲ್‌ ಸಂಸ್ಥೆಯ ರೆಡ್ಮಿ A3X (Redmi A3X) ಫೋನ್‌ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಆಗಿದೆ.

ಹೌದು, ಇ ಕಾಮರ್ಸ್‌ ದಿಗ್ಗಜ ಎನಿಸಿರುವ ಫ್ಲಿಪ್‌ಕಾರ್ಟ್‌ ತಾಣದಲ್ಲಿ ರೆಡ್ಮಿ A3X (Redmi A3X) ಮೊಬೈಲ್‌ ಶೇ. 30% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ 3 GB RAM + 64 GB ವೇರಿಯಂಟ್‌ ಫೋನ್‌ ಅನ್ನು 6,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಈ ಫೋನಿಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಸಹ ಲಭ್ಯ ದೊರೆಯುತ್ತವೆ.

5000mAh ಬ್ಯಾಟರಿ ಇರುವ ಈ Redmi ಫೋನ್‌ ಬೆಲೆಯಲ್ಲಿ ಇಳಿಕೆ; ಅಗ್ಗದ ಬೆಲೆಗೆ ಲಭ್ಯ!

ರೆಡ್ಮಿ A3X ಮೊಬೈಲ್‌ನ ಮೊದಲ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಹಾಗೆಯೇ ಇದು Unisoc T603 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದರೇ ರೆಡ್ಮಿ A3X ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ A3X - ಫೀಚರ್ಸ್‌ ಹೀಗಿವೆ

ರೆಡ್ಮಿ A3X ಮೊಬೈಲ್‌ 6.71 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇನ್ನು ಡಿಸ್‌ಪ್ಲೇ IPS LCD ಸ್ಕ್ರೀನ್‌ ಸ್ಮಾರ್ಟ್‌ಫೋನ್‌ ಆಗಿದ್ದು, 90Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ರೆಡ್ಮಿ A3X ಮೊಬೈಲ್‌ Unisoc T603 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 3GB RAM + 64GB ಹಾಗೂ 4GB RAM + 128GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಆಯ್ಕೆ ಇದೆ.

ರೆಡ್ಮಿ A3X ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು 0.08 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಹ ಪಡೆದಿದೆ. ಅಲ್ಲದೇ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಇದರೊಂದಿಗೆ ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ನೀಡಲಾಗಿದೆ.

ರೆಡ್ಮಿ A3X ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಡ್ಯುಯಲ್ 4G VoLTE, Wi-Fi 802.11 b/g/n, ಬ್ಲೂಟೂತ್ 5.0, GPS, USB ಟೈಪ್- C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ 3.5mm ಆಡಿಯೋ ಜಾಕ್, FM ರೇಡಿಯೋ ಆಯ್ಕೆಗಳನ್ನು ಅನ್ನು ಒಳಗೊಂಡಿದೆ. ಇನ್ನು ಇದು ಅರೋರಾ ಗ್ರೀನ್, ಮಿಡ್ನೈಟ್ ಬ್ಲಾಕ್, ಮೂನ್ಲೈಟ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Huge Price Drop on Redmi A3X Phone in India. Check out price, offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+