Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Redmi Note 13 Pro ಬೆಲೆಯಲ್ಲಿ ಭಾರೀ ಇಳಿಕೆ!

ಅಮೆಜಾನ್‌ ಆಯೋಜಿಸಿರುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಅನ್ನು ಘೋಷಿಸಿದ್ದು, ಈ ಹಬ್ಬದ ವಿಶೇ‍ಷ ಮಾರಾಟವು ಇದೇ ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಲಿದೆ. ಈ ಸೇಲ್‌ನ ಕಿಕ್‌ಸ್ಟಾರ್ಟ್‌ರ್ ಡೀಲ್‌ನಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್‌ ಡಿಸ್ಕೌಂಟ್‌ ಪಡೆದುಕೊಂಡಿವೆ. ಅವುಗಳ ಪೈಕಿ ರೆಡ್ಮಿ ನೋಟ್ 13 ಪ್ರೊ (Redmi Note 13 Pro) ಮೊಬೈಲ್‌ ಸಖತ್‌ ರಿಯಾಯಿತಿ ಪಡೆದಿದೆ.

ಹೌದು, ಅಮೆಜಾನ್‌ ತಾಣದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನ ಕಿಕ್‌ಸ್ಟಾರ್ಟ್‌ರ್ ಡೀಲ್‌ನಲ್ಲಿ ರೆಡ್ಮಿ ನೋಟ್ 13 ಪ್ರೊ (Redmi Note 13 Pro) ಫೋನ್ ಶೇ. 14% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB RAM + 128GB ವೇರಿಯಂಟ್‌ 24,998ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಗ್ರಾಹಕರು ಬ್ಯಾಂಕ್‌, ಎಕ್ಸ್‌ಚೇಂಜ್ ಹಾಗೂ ಇತರೆ ಆಫರ್‌ ಸಹ ಖರೀದಿಸಬಹುದಾಗಿದೆ.

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Redmi Note 13 Pro ಬೆಲೆಯಲ್ಲಿ ಭಾರೀ ಇಳಿಕೆ!

ಸ್ನ್ಯಾಪ್‌ಡ್ರಾಗನ್‌ 7s Gen 2 ಪ್ರೊಸೆಸರ್ ಪವರ್‌ ಪಡೆದಿರುವ ಈ ಫೋನಿನ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 5100 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಇನ್ನುಳಿದಂತೆ ರೆಡ್ಮಿ ನೋಟ್ 13 ಪ್ರೊ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರೆಡ್ಮಿ ನೋಟ್‌ 13 ಪ್ರೊ 5G - ಫೀಚರ್ಸ್‌

ರೆಡ್ಮಿ ನೋಟ್‌ 13 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್‌ ಪಡೆದಿದ್ದು, ಇದು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ಹೊಂದಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಆಯ್ಕೆ ಒಳಗೊಂಡಿದೆ.

ರೆಡ್ಮಿ ನೋಟ್‌ 13 ಪ್ರೊ ಫೋನ್‌ ಸ್ನ್ಯಾಪ್‌ಡ್ರಾಗನ್‌ 7s Gen 2 ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಅದೇ ರೀತಿ 6GB RAM + 128 GB ಹಾಗೂ 8GB RAM+ 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಕೂಡಾ ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಸಪೋರ್ಟ್‌ ಜೊತೆಗೆ ಹೆಚ್ಚುವರಿ ಸ್ಟೋರೇಜ್‌ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ.

ರೆಡ್ಮಿ ನೋಟ್‌ 13 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ರೆಡ್ಮಿ ನೋಟ್‌ 13 ಪ್ರೊ ಮೊಬೈಲ್‌ 5100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಅನ್ನು ಇದು ಸಪೋರ್ಟ್‌ ಮಾಡುತ್ತದೆ.

Best Mobiles in India

English summary
Huge Price Drop on Redmi Note 13 Pro on Amazon Great Indian Festival Sale. Check offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+