ನೀವು ಬೇಡಾ ಅಂದ್ರೂ, ಈ ದೈತ್ಯ ಫೋನಿಗೆ ಭಾರೀ ಡಿಸ್ಕೌಂಟ್ ಸಿಗುತ್ತೆ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಡಿಸ್ಕೌಂಟ್‌ಗಳ ಮೇಳಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ನೆಚ್ಚಿನ ತಾಣವಾಗಿದೆ. ಇದೀಗ ಹಬ್ಬದ ಪ್ರಯುಕ್ತ ಅಮೆಜಾನ್ ಸಂಸ್ಥೆಯು ಕೆಲವು ಫೋನ್‌ಗಳಿಗೆ ಸಖತ್ ರಿಯಾಯಿತಿ ನೀಡಿದ್ದು, ಅವುಗಳಲ್ಲಿ ದೈತ್ಯ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಸ್ಮಾರ್ಟ್‌ಫೋನ್ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ.
ಹೌದು, ದೈತ್ಯ ಇ ಕಾಮರ್ಸ್ ಅಮೆಜಾನ್ ತಾಣದಲ್ಲಿ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಮೊಬೈಲ್ ಶೇ. 29% ರಷ್ಟು ಕೊಡುಗೆ ಹೊಂದಿದ್ದು, 12GB RAM + 256GB ಸ್ಟೋರೇಜ್ ವೇರಿಯಂಟ್ 78,499ರೂ. ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಲಭ್ಯಿರುವ ಇತರೆ ಆಫರ್ ಸೇರಿ ಈ ಫೋನ್ ಅನ್ನು 77,999ರೂ. ಗಳಿಗೆ ಖರೀದಿಸುವ ಅವಕಾಶ ಸಹ ಇದೆ.

ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಈ ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆಯನ್ನು ಪಡೆದಿದೆ. ಹಾಗಾದರೆ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಗಾತ್ರ ಹಾಗೂ ಪಿಕ್ಸೆಲ್ ರೆಸಲ್ಯೂಶನ್
ಈ ಫೋಲ್ಡಬಲ್ ಫೋನ್ 6.42 ಇಂಚಿನ LTPO ಔಟರ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು FHD+ ಪ್ಯಾನೆಲ್ ಹೊಂದಿದೆ. ಹಾಗೆಯೇ 2296 X 2000 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 7.65 ಇಂಚಿನ 2K LTPO ಅಮೋಲೆಡ್ ಫೋಲ್ಡಬಲ್ ಡಿಸ್‌ಪ್ಲೇ ಇದ್ದು, ಅಟೋಮ್ಯಾಟಿಕ್ ಆಗಿ 10Hz ನಿಂದ 120Hz ನಡುವೆ ರಿಫ್ರೆಶ್ ರೇಟ್ ಅನ್ನು ಬದಲಾಯಿಸಿಕೊಳ್ಳುತ್ತದೆ.

ವೇಗದ ಪ್ರೊಸೆಸರ್ ಸೌಲಭ್ಯ
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುವ ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇದರಲ್ಲಿ ಗಮನಿಸಬೇಕಾದ ವಿಷಯ ಎಂದರೆ ಫೋನ್ ಹೊಸದಾದರೂ ಈ ಸ್ಟೋರೇಜ್ ಆವೃತ್ತಿ ಮಾತ್ರ ಹಳೆಯದಾಗಿದೆ.
ಕ್ಯಾಮೆರಾ ಸೆನ್ಸಾರ್ ರಚನೆ ಮಾಹಿತಿ
ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್ ಮತ್ತು 50 ಮೆಗಾಪಿಕ್ಸೆಲ್ 2x ಪೋಟ್ರೇಟ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಡಿವೈಸ್ ಅನ್ನು ಓಪನ್ ಮಾಡಿದಾಗ ಹೊರಗಿನ ಡಿಸ್‌ಪ್ಲೇನಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ, ಇನ್ನುಳಿದಂತೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಎಷ್ಟು
ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ನೊಂದಿಗೆ ಪ್ಯಾಕ್ ಆಗಿದ್ದು, 45W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ಒದಗಿಸುತ್ತದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಹೊಂದಿದ್ದು, ಇದರಲ್ಲಿನ ಸ್ಟೀರಿಯೋ ಸ್ಪೀಕರ್ ಬಳಕೆದಾರರಿಗೆ ಅತ್ಯುತ್ತಮವಾದ ಅನುಭವ ಲಭ್ಯ. ಇದು ಏರೋಸ್ಪೇಸ್-ಗ್ರೇಡ್ ನವೀನ ಡ್ರಾಪ್ ಆಕಾರದ ಹಿಂಜ್ ಅನ್ನು ಪಡೆದಿದ್ದು, ಈ ಮೂಲಕ ಮೃದುವಾಗಿ ಮಡಿಸಬಹುದಾಗಿದೆ.
ಮೆಮೊರಿ, ಕಲರ್ ಹಾಗೂ ಲಭ್ಯತೆ
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಬಣ್ಣದ ಆಯ್ಕೆ ಪಡೆದಿದ್ದು, ಅಂದಹಾಗೆ ಈ ಫೋನ್ 12 GB RAM + 256 GB ವೇರಿಯಂಟ್ ಆಯ್ಕೆ ಸಹ ಪಡೆದಿದೆ. ಅಮೆಜಾನ್ ತಾಣದಲ್ಲಿ ಖರೀದಿಗೆ ಲಭ್ಯ.


Click it and Unblock the Notifications








