ವಿವೋದ ಈ ಫೋನಿಗೆ ಬೇಡಾ ಅಂದ್ರೂ, ಬಿಗ್ ಡಿಸ್ಕೌಂಟ್ ಖಚಿತ!
ಮಾರುಕಟ್ಟೆಯಲ್ಲಿ ಜನಪ್ರಿಯ ಮೊಬೈಲ್ ಕಂಪನಿಗಳಲ್ಲಿ ಒಂದಾದ ವಿವೋ ಸಂಸ್ಥೆಯು ಈಗಾಗಲೇ ಭಿನ್ನ ಶ್ರೇಣಿಯ ಮೊಬೈಲ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಅವುಗಳಲ್ಲಿ ಕೆಲವು ಫ್ಲ್ಯಾಗ್‌ಶಿಪ್ ಮಾದರಿಯ ಫೋನ್‌ಗಳು ಸದ್ದು ಮಾಡಿವೆ. ಆ ಪೈಕಿ ವಿವೋ X80 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಟ್ರೆಂಡಿ ಎನಿಸಿದೆ. ಆದ್ರೆ, ಈ ಮೊಬೈಲ್ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ ಕಂಡಿದೆ.
ಹೌದು, ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ ಕಂಪೆನಿಯ ವಿವೋ X80 ಪ್ರೊ ಮೊಬೈಲ್ ಬೆಲೆಯಲ್ಲಿ ಈಗ 33% ರಷ್ಟು ಇಳಿಕೆ ಆಗಿದೆ. ಈ ಮೊಬೈಲ್‌ನ 12 GB RAM + 256 GB ವೇರಿಯಂಟ್ ಬೆಲೆಯು 86,999ರೂ. ಆಗಿದ್ದು, ಸದ್ಯ ಫ್ಲಿಪ್‌ಕಾರ್ಟ್ ಕೊಡುಗೆಯಲ್ಲಿ 57,890ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಆಕ್ಟಾ-ಕೋರ್ ಡೈಮೆನ್ಸಿಟಿ 1200 CPU ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದೆ.

ಇನ್ನು ವಿವೋ X80 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಹಾಗೆಯೇ ಮುಂಭಾಗದಲ್ಲಿ ಈ ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದುಕೊಂಡಿದೆ. ಹಾಗಾದರೇ ವಿವೋ X80 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ X80 ಪ್ರೊ ಮೊಬೈಲ್ ಡಿಸ್‌ಪ್ಲೇ ಮಾಹಿತಿ : ವಿವೋ X80 ಪ್ರೊ ಫೋನ್ 6.56 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಪಡೆದಿದ್ದು, ಇದು 1080 x 2400 ಪಿಕ್ಸೆಲ್‌ನ ಫುಲ್ ಹೆಚ್‌ಡಿ+ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 401 PPI ಪಿಕ್ಸೆಲ್ ಸಾಂದ್ರತೆ ಹೊಂದಿದ್ದು, 20: 9 ಆಕಾರ ಅನುಪಾತ ಇದೆ. ಇದರ ಜೊತೆಗೆ ಕ್ಯಾಮೆರಾ ಉದ್ದೇಶಕ್ಕೆ ಪಂಚ್-ಹೋಲ್ ವಿನ್ಯಾಸ ಪಡೆದಿದೆ.
ವಿವೋ X80 ಪ್ರೊ ಮೊಬೈಲ್ ಪ್ರೊಸೆಸರ್ ಯಾವುದು : ವಿವೋ X80 ಪ್ರೊ ಫೋನ್ ಆಕ್ಟಾ-ಕೋರ್ ಡೈಮೆನ್ಸಿಟಿ 1200 CPU ಬಲ ಪಡೆದಿದ್ದು, ಮಾಲಿ G77 MC9 GPU ಗ್ರಾಫಿಕ್ಸ್ ಆಯ್ಕೆ ಸಹ ಪಡೆದುಕೊಂಡಿದೆ. ಇದರೊಂದಿಗೆ 12GB RAM ಹಾಗೂ 256GB ಸ್ಟೋರೇಜ್ ಸಾಮರ್ಥ್ಯ ಹೊಂದಿದ್ದು, ಇದಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸ್ಟೋರೇಜ್ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು.
ವಿವೋ X80 ಪ್ರೊ ಮೊಬೈಲ್ ಕ್ಯಾಮೆರಾ ಸೆನ್ಸಾರ್ ಹೇಗಿದೆ : ವಿವೋ X80 ಪ್ರೊ ಫೋನ್ ಕ್ವಾಡ್ ಕ್ಯಾಮೆರಾ ರಚನೆಯೊಂದಿಗೆ ಕಾಣಿಸಿಕೊಂಡಿದ್ದು, 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಆಗಿದ್ದು, ನಾಲ್ಕನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಲೆನ್ಸ್ ಆಯ್ಕೆ ಒದಗಿಸಲಾಗಿದೆ. ಹಾಗೆಯೇ ಇದರೊಂದಿಗೆ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.
ವಿವೋ X80 ಪ್ರೊ ಮೊಬೈಲ್ ಬ್ಯಾಟರಿ ಹಾಗೂ ಇತರೆ ಆಯ್ಕೆಗಳು : ವಿವೋ X80 ಪ್ರೊ ಫೋನ್ 4,700mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ 5G, 4G VoLTE, ವೈ ಫೈ 802.11 b/g/n/ac, ಬ್ಲೂಟೂತ್ ಆವೃತ್ತಿ v5.2, ಜಿಪಿಎಸ್, ಓಟಿಜಿ ಬೆಂಬಲ, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಯ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.


Click it and Unblock the Notifications








