Home
ಸುದ್ದಿಜಾಲ

ಶಿಯೋಮಿಯ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌!..120W ಹೈಪರ್‌ಚಾರ್ಜ್!

ಶಿಯೋಮಿ ಸಂಸ್ಥಯ ಭಿನ್ನ ಬೆಲೆಯಲ್ಲಿ ಹಲವು ಮೊಬೈಲ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳಲ್ಲಿ ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ನಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಶಿಯೋಮಿ 11T ಪ್ರೊ 5G ಫೋನ್‌ ಶೇ. 21% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆ 52,999ರೂ.ಗಳ ಬೆಲೆ ಪಡೆದಿದ್ದು, ಆದರೆ ಅಮೆಜಾನ್‌ ಆಫರ್‌ನಲ್ಲಿ 41,999ರೂ. ಗಳಿಗೆ ಲಭ್ಯ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಕೆಲವು ಆಫರ್‌ ಕೂಡಾ ಇದ್ದು, ಎಕ್ಸ್‌ಚೇಂಜ್ ಕೊಡುಗೆ ದೊರೆಯುತ್ತವೆ.

ಶಿಯೋಮಿಯ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌!..120W ಹೈಪರ್‌ಚಾರ್ಜ್!

ಅಂದಹಾಗೆ ಶಿಯೋಮಿ 11T ಪ್ರೊ 5G ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 108 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಇದೆ. ಇನ್ನುಳಿದಂತೆ ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.


ಡಿಸ್‌ಪ್ಲೇ ರಚನೆ ಹೀಗಿದೆ

ಶಿಯೋಮಿ 11T ಪ್ರೊ 5G ಮೊಬೈಲ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಹೊಂದಿದ್ದು, 10-ಬಿಟ್ ಟ್ರೂಲಿ ಕಲರ್‌ ಫ್ಲಾಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಜೊತೆಗೆ ಡಾಲ್ಬಿ ವಿಷನ್ ಸಪೋರ್ಟ್ ಇದ್ದು, 480Hz ವರೆಗೆ ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ಶಿಯೋಮಿಯ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌!..120W ಹೈಪರ್‌ಚಾರ್ಜ್!

ಪ್ರೊಸೆಸರ್‌ ಕಾರ್ಯವೈಖರಿ ಯಾವುದು

ಶಿಯೋಮಿ 11T ಪ್ರೊ 5G ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ ಸಪೋರ್ಟ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಅನ್ನು ಹೊಂದಿದೆ. ಇದರ ಜೊತೆಗೆ 3GB ವರ್ಚುವಲ್ RAM ವಿಸ್ತರಣೆಗೆ ಸಹ ಬೆಂಬಲಿಸಲಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ ಹೀಗಿದೆ

ಶಿಯೋಮಿಯ ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಮೊದಲ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಟೆಲಿಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್‌ಗಳು ಮತ್ತು ಆಡಿಯೊ ಜೂಮ್‌ನಂತಹ ಇತರೆ ಆಯ್ಕೆ ಇವೆ.

ಶಿಯೋಮಿಯ ಈ ದೈತ್ಯ ಫೋನಿಗೆ ಭರ್ಜರಿ ಡಿಸ್ಕೌಂಟ್‌!..120W ಹೈಪರ್‌ಚಾರ್ಜ್!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಶಿಯೋಮಿ 11T ಪ್ರೊ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 120W ಹೈಪರ್‌ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್‌ ಸೌಲಭ್ಯ ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS/ NavIC, NFC ಆಯ್ಕೆ ಇವೆ. ಹಾಗೆಯೇ ಸೆಲೆಸ್ಟಿಯಲ್ ಮ್ಯಾಜಿಕ್, ಮೆಟಿಯೊರೈಟ್ ಗ್ರೇ ಮತ್ತು ಮೂನ್‌ಲೈಟ್ ವೈಟ್ ಕಲರ್‌ನಲ್ಲಿ ಲಭ್ಯ.

Best Mobiles in India

English summary
Huge Price Drop on Xiaomi 11T Pro 5G Hyperphone on amazon website. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+