Just In
- 2 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 2 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 3 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 4 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Movies
Lakshana Serial: ಭೂಪತಿ ಕೊಟ್ಟ ಸಪ್ರೈಸ್ ನೋಡಿ ಶಾಕ್ ಆದ ಶ್ವೇತ!
- News
ಉದ್ಯಾನವನಕ್ಕೆ ಇಟ್ಟಿದ್ದ ಟಿಪ್ಪು ಸುಲ್ತಾನ್ ಹೆಸರು ತೆಗೆದ ಮಹಾರಾಷ್ಟ್ರ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸದ್ಯ ಹೊಸ 5G ಸ್ಮಾರ್ಟ್‌ಫೋನ್ ಖರೀದಿಸ್ತಾ ಇದ್ರೆ, ಈ ಅವಕಾಶ ತಪ್ಪಿಸಿಕೊಳ್ಳಬೇಡಿ!
ಪ್ರಸ್ತುತ ನೀವೇನಾದರೂ ಹೊಸದಾಗಿ 5G ಸ್ಮಾರ್ಟ್‌ಫೋನ್ ಖರೀದಿ ಮಾಡುವ ಪ್ಲ್ಯಾನ್ ಮಾಡಿದ್ದರೆ, ಅದಕ್ಕೆ ಇದೀಗ ಸೂಕ್ತ ಸಮಯ ಕೂಡಿ ಬಂದಿದೆ. ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಅಮೆಜಾನ್ ಕೆಲವು ಪ್ರಮುಖ 5G ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯ ಮಾಡಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆದಿದೆ.

ಹೌದು, ಅಮೆಜಾನ್ ತಾಣವು ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ (Amazon Fab Phones Fest) ಮಾರಾಟ ಮೇಳವನ್ನು ಆಯೋಜಸಿದೆ. ಈ ಸೇಲ್ ಈಗಾಗಲೇ ಲೈವ್ ಇದ್ದು, ಇದೇ ನವೆಂಬರ್ 29 ರಂದು ಮುಕ್ತಾಯಗೊಳ್ಳಲಿದೆ. ಇನ್ನು ಈ ಮಾರಾಟದಲ್ಲಿ, ಕೆಲವು ಮುಖ್ಯ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳನ್ನು ಅತ್ಯುತ್ತಮ ರಿಯಾಯಿತಿಯಲ್ಲಿ ಕಾಣಿಸಿಕೊಂಡಿವೆ. ಹೀಗಾಗಿ ನೂತನ 5G ಫೋನ್ ಖರೀದಿಸುವ ಗ್ರಾಹಕರಿಗೆ ಇದು ಬೊಂಬಾಟ್ ಟೈಮ್ ಆಗಿದೆ. ಹಾಗಾದರೆ ಅತ್ಯುತ್ತಮ ಡಿಸ್ಕೌಂಟ್ ಪಡೆದ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ ಮಿ 11 ಲೈಟ್ NE 5G
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನ್ ಅನ್ನು 25,000ರೂ. ಒಳಗೆ ಖರೀದಿಸಬಹುದಾಗಿದೆ.

ರೆಡ್ಮಿ K50i ಸ್ಮಾರ್ಟ್‌ಫೋನ್
ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್ ಮಾಡೆಲ್‌ಗಳಲ್ಲಿ ಕಾಣಿಸಿಕೊಂಡಿದೆ. ಅವುಗಳು ಕ್ರಮವಾಗಿ 8GB + 256GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಗಿವೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇನ್ನು ಈ ಫೋನ್ ಕೊಡುಗೆಯಲ್ಲಿ 23,999ರೂ. ಗಳಿಗೆ ಲಭ್ಯವಾಗಲಿದೆ.

ಒನ್‌ಪ್ಲಸ್ ನಾರ್ಡ್ CE 2 5G
ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಫೋನ್ ಕೊಡುಗೆಯಲ್ಲಿ 18,999 ರೂ. ಗಳಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಸೇಲ್‌ನಲ್ಲಿ 18,999ರೂ. ಗಳಿಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470