ಶಿಯೋಮಿಯ ಈ ಹೈ ಎಂಡ್ ಫೋನಿನ ಆಫರ್ ತಿಳಿದ್ರೆ, OMG ಅಂತೀರಾ!
ದೇಶೀಯ ಮಾರುಕಟ್ಟೆಯಲ್ಲಿ ಶಿಯೋಮಿ ಸಂಸ್ಥೆಯು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಆ ಪೈಕಿ ಸಂಸ್ಥೆಯ ಮಿ 11X ಪ್ರೊ 5G ಸ್ಮಾರ್ಟ್‌ಫೋನ್ ಹೈ ಎಂಡ್ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಮಿ 11X ಪ್ರೊ 5G ಫೋನ್ ಖರೀದಿಸುವ ಗ್ರಾಹಕರಿಗೆ ಕಾದಿದೆ ಗುಡ್‌ನ್ಯೂಸ್.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮಿ 11X ಪ್ರೊ 5G ಫೋನ್ ಶೇ. 17% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128GB ವೇರಿಯಂಟ್ ಬೆಲೆಯು 47,999ರೂ. ಆಗಿದ್ದು, ಆದರೆ ಅಮೆಜಾನ್ ಆಫರ್‌ನಲ್ಲಿ 39,999ರೂ. ಗಳಿಗೆ ಗ್ರಾಹಕರು ಖರೀದಿಸಬಹುದಾಗಿದೆ. ಇತರೆ ಬ್ಯಾಂಕ್ ಕೊಡುಗೆಗಳು ಸಹ ಲಭ್ಯ ಇವೆ.

ಮಿ 11X ಪ್ರೊ 5G ಮೊಬೈಲ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸೆನ್ಸಾರ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಅಲ್ಲದೇ ಇದು 4,520mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ಮಿ 11X ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮಿ 11X ಪ್ರೊ 5G ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ :
ಮಿ 11X ಪ್ರೊ 5G ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಹೊಂದಿವೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇಯು ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಪಡೆದುಕೊಂಡಿದೆ.
ಮಿ 11X ಪ್ರೊ 5G ಪ್ರೊಸೆಸರ್ ಪವರ್ :
ಮಿ 11X ಪ್ರೊ 5G ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಇದರ ಜೊತೆಗೆ ಈ ಫೋನ್ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಮಿ 11X ಪ್ರೊ 5G ಕ್ಯಾಮೆರಾ ಸೆನ್ಸಾರ್ ಮಾಹಿತಿ :
ಮಿ 11X ಪ್ರೊ 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್, ತೃತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಪಡೆದಿದೆ. ಇನ್ನು ಈ ಫೋನ್‌ಗೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ವನ್ನು ಒದಗಿಸಲಾಗಿದೆ.
ಮಿ 11X ಪ್ರೊ 5G ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ :
ಮಿ 11X ಪ್ರೊ 5G ಫೋನ್ 4,520mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಈ ಫೋನ್ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಪಡೆಯುತ್ತವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ ಬ್ಯಾಂಡ್ ವೈ ಫೈ, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್ ಮಾಡುತ್ತದೆ.
ಮಿ 11X ಪ್ರೊ 5G ಮೆಮೊರಿ ಹಾಗೂ ಕಲರ್ :
ಮಿ 11X ಪ್ರೊ 5G ಮೊಬೈಲ್ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಕಲರ್‌ಗಳಲ್ಲಿ ಖರೀದಿಗೆ ದೊರೆಯುತ್ತದೆ.


Click it and Unblock the Notifications








