Just In
Don't Miss
- Automobiles
ಐಷಾರಾಮಿ ಪೋರ್ಷೆ ಎಲೆಕ್ಟ್ರಿಕ್ ಕಾರು ಟೆಸ್ಟ್ ಡ್ರೈವ್ ಮಾಡಿದ ಮೆಗಾಸ್ಟಾರ್ ಮಮ್ಮುಟ್ಟಿ
- Sports
RR vs CSK: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು
- Lifestyle
ಸಂಖ್ಯಾಶಾಸ್ತ್ರ: ಈ ಜನ್ಮ ಸಂಖ್ಯೆ ಹೊಂದಿರುವವರ ದಾಂಪಾತ್ಯದಲ್ಲಿ ಸಮಸ್ಯೆಗಳೇ ಹೆಚ್ಚು
- News
ಹೈಕಮಾಂಡ್ ಬುಲಾವ್, ಸಿಎಂ ದೆಹಲಿಗೆ ದೌಡು: ಈ 3 ಕಾರಣಕ್ಕೆ?
- Movies
ಡ್ರಾಮಾ ಜ್ಯೂನಿಯರ್ಸ್ ವೇದಿಕೆಯಲ್ಲಿ 'ಪದ್ಮಶ್ರೀ' ಜೋಗತಿ ಮಂಜಮ್ಮ, ಮಕ್ಕಳ ಅಭಿನಯಕ್ಕೆ ಫಿದಾ
- Education
IOCL Recruitment 2022 : 43 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿತ ಮಾಡುವುದು ಹೇಗೆ?
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪದ್ಮ ಪ್ರಶಸ್ತಿ 2022: ಸತ್ಯ ನಾಡೆಲ್ಲಾ ಮತ್ತು ಸುಂದರ್ ಪಿಚೈ ಪ್ರಶಸ್ತಿಗೆ ಭಾಜನ
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಪ್ರಸಕ್ತ 2022 ಸಾಲಿನಲ್ಲಿ ಒಟ್ಟು 128 ಜನರಿಗೆ ಪದ್ಮಶ್ರೀ, ಪದ್ಮ ಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಂತ್ರಜ್ಞಾನ ವಲಯದಲ್ಲಿ ಭಾರತೀಯ ಮೂಲದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದಲ್ಲಿ ಪದ್ಮ ಪ್ರಶಸ್ತಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಈ ಮೂರು ವಿಭಾಗಗಳಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಸೇರಿದಂತೆ ಒಟ್ಟು 128 ಸಾಧಕರಿಗೆ ಪ್ರಶಸ್ತಿ ಗೌರವ ಸಿಗಲಿದೆ.
ಹಾಗೆಯೇ ಎಸ್ಐಐ ಎಂಡಿ ಸೈರಸ್ ಪೂನವಾಲಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಒಲಿಂಪಿಯನ್ ನೀರಜ್ ಚೋಪ್ರಾ, ಪ್ರಮೋದ್ ಭಗತ್, ವಂದನಾ ಕಟಾರಿಯಾ ಮತ್ತು ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ - ವಿಜ್ಞಾನ ಮತ್ತು ಎಂಜಿನಿಯರಿಂಗ್, ಎಚ್. ಆರ್. ಕೇಶವಮೂರ್ತಿ - ಧಾರವಾಡದ ಕೂರಿಗೆ ತಜ್ಞ ಕಲೆ, ಅಬ್ದುಲ್ ಖಾದರ್ ನಡಕಟ್ಟಿನ್ ಅವರಿಗೆ ಪದ್ಮಶ್ರೀ ಒಲಿದು ಬಂದಿದೆ. ನಡಕಟ್ಟಿನ್ ಅವರು ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ನಿವಾಸಿ. ಬಿತ್ತನೆ ಕೂರಿಗೆ ಸಂಶೋಧನೆ ಮಾಡಿದ್ದರು.
ಕಳೆದ ವರ್ಷ ನಿಧನರಾದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರು ಸಾರ್ವಜನಿಕ ವ್ಯವಹಾರಗಳಿಗಾಗಿ ಪದ್ಮವಿಭೂಷಣ ಸ್ವೀಕರಿಸಲಿದ್ದಾರೆ. ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ನಾಗರಿಕ ಸೇವೆಗಾಗಿ ಪದ್ಮವಿಭೂಷಣ ಸ್ವೀಕರಿಸಲಿದ್ದಾರೆ. ಹಾಗೂ ಹಿಂದೂಸ್ತಾನೀ ಸಂಗೀತಕ್ಕೆ ವಿದುಷಿ ಪ್ರಭಾ ಅತ್ರ ಅವರಿಗೆ ಪದ್ಮವಿಭೂಷಣ ಪುರಸ್ಕಾರ ನೀಡಲಾಗುತ್ತಿದೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಸಾರ್ವಜನಿಕ ವ್ಯವಹಾರಗಳಿಗಾಗಿ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999