ಭಾರತ vs ಆಸ್ಟ್ರೇಲಿಯಾ: ಉಚಿತವಾಗಿ ಮ್ಯಾಚ್ ವೀಕ್ಷಿಸಲು ಏರ್‌ಟೆಲ್‌ನ ಈ ಪ್ಲ್ಯಾನ್ ಬೆಸ್ಟ್!
ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್ ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ಲ್ಯಾನ್ ಆಯ್ಕೆ ಪರಿಚಯಿಸಿದೆ. ಏರ್‌ಟೆಲ್ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಅದಾಗ್ಯೂ ಕೆಲವು ಪ್ಲ್ಯಾನ್‌ಗಳಲ್ಲಿ ಲೈವ್ ಕ್ರಿಕೆಟ್ ಮ್ಯಾಚ್ ವೀಕ್ಷಿಸಬಹುದು.
ಹೌದು, ಏರ್‌ಟೆಲ್ ಟೆಲಿಕಾಂನ 3359ರೂ. 839ರೂ. ಮತ್ತು 499ರೂ. ಪ್ರೀಪೇಯ್ಡ್ ಪ್ಲ್ಯಾನ್‌ಗಳು ಉಚಿತ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಪ್ರಯೋಜನ ಪಡೆದಿವೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟೆಸ್ಟ್ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.

ಹಾಗಾದ್ರೆ, ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದಿರುವ ಏರ್‌ಟೆಲ್‌ನ ಈ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಡೇಟಾ, ಅತ್ಯುತ್ತಮ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಇನ್ನುಳಿದಂತೆ ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಸೌಲಭ್ಯಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.
ಹಾಗೆಯೇ ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಹಾಗೂ ಏರ್‌ಟೆಲ್ ಆಪ್ಸ್‌ಗಳ ಸೇವೆಯ ಸೌಲಭ್ಯ ಸಹ ದೊರೆಯುತ್ತದೆ.

ಏರ್‌ಟೆಲ್ ಟೆಲಿಕಾಂನ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂ ನ 839 ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಈ ಯೋಜನೆ ಯಲ್ಲಿ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಹೊಂದಿದೆ.
ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.
ಏರ್‌ಟೆಲ್ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 499ರೂ ಪ್ರಿಪೇಯ್ಡ್ ಪ್ಲಾನ್ ಈ ಪ್ಲಾನ್ ಪ್ರತಿದಿನ 3 GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಹೊಂದಿದೆ.
ಇದರೊಂದಿಗೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.

ಏರ್‌ಟೆಲ್ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಹೊಂದಿದೆ.
ಇದರೊಂದಿಗೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.


Click it and Unblock the Notifications








