ಫೇಸ್‌ಬುಕ್ CEO ಜುಕರ್ ಬರ್ಗ್ ವಾರ್ನಿಂಗ್ ಕೊಟ್ಟ ಭಾರತ ಸರ್ಕಾರ: ಯಾಕೆ..?
ಸಾಮಾಜಿಕ ಜಾಲತಾಣದ ದೈತ್ಯ ಫೇಸ್‌ಬುಕ್‌ನ 5 ಕೋಟಿಗೂ ಹೆಚ್ಚು ಬಳಕೆದಾರ ಮಾಹಿತಿಯೂ ಲೀಕ್ ಆಗಿದ್ದು, ಇದನ್ನು ರಾಜಕೀಯ ಉದ್ದೇಶಗಳಿಗಾಗಿ ಖಾಸಗಿ ಸಂಸ್ಥೆಯೊಂದು ಬಳಕೆ ಮಾಡಿಕೊಂಡಿದೆ ಎನ್ನುವ ವಿಚಾರ ಜಾಗತಿಕವಾಗಿ ಭಾರೀ ಕೋಲಾಹಲವನ್ನು ಉಂಟು ಮಾಡಿದೆ. ಅದರಲ್ಲಿಯೂ ಅಮೇರಿಕಾ ಮತ್ತು ಬ್ರಿಟನ್ ನಲ್ಲಿ ಈ ವಿಚಾರ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಭಾರತ ಸರಕಾರವೂ ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಕುರಿತು ಫೇಸ್‌ಬುಕ್‌ಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಕೇಂಬ್ರಿಜ್ ಅನಲಿಟಿಕಾ ಎಂಬ ರಾಜಕೀಯ ವಿಶ್ಲೇಷಣೆ ಮಾಡುವ ಸಂಸ್ಥೆ ಅಮೆರಿಕಾದಲ್ಲಿ ನಡೆದ ಅಧ್ಯಕೀಯ ಚುನಾವಣೆಯಲ್ಲಿ ಟ್ರಂಪ್ ಪರ ಅಲೆಯನ್ನು ಹುಟ್ಟಿಸುವ ಸಲುವಾಗಿ ಫೇಸ್‌ಬುಕ್ ಬಳಕೆದಾರರ ಮಾಹಿತಿಯನ್ನು ಅನಧಿಕೃತವಾಗಿ ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ಇದು ಅಂತರಾಷ್ಟ್ರೀಯ ಮಟ್ಟದ ದೊಡ್ಡ ಹಗರಣವಾಗಿದೆ. ಪ್ರಮುಖ ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಫೇಸ್‌ಬುಕ್ ಪ್ರಚಾರವೂ ಹೆಚ್ಚಿನ ಮಹತ್ವವನ್ನು ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಪ್ರಕರಣ ಹೆಚ್ಚು ಕಾವು ಪಡೆದುಕೊಳ್ಳುತ್ತಿದೆ.
ಓದಿರಿ: ಜಿಯೋ ಫೋನ್ ಬಳಕೆದಾರರಿಗೆ ವಾಟ್ಸ್‌ಆಪ್ ಉಡುಗೊರೆ ಕೊಟ್ಟ ಅಂಬಾನಿ: ಸ್ಮಾರ್ಟ್‌ಫೋನ್ ಮಾರುಕಟ್ಟೆ ತಲ್ಲಣ..!
ಲಂಡನ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಅಮೆರಿಕಾ ಮತ್ತು ಬ್ರಿಟನ್ ಚುನಾವಣೆಯಲ್ಲಿ ಈ ಫೇಸ್‌ಬುಕ್ ಡೇಟಾವನ್ನು ದುರ್ಬಳಕೆ ಮಾಡಿಕೊಂಡ ಆರೋಪವನ್ನು ಎದುರಿಸುತ್ತಿದ್ದು, ಇದು ಫೇಸ್‌ಬುಕ್ ಬುಡಕ್ಕೂ ತಾಕಿದೆ. ಈ ಹಿನ್ನಲೆಯಲ್ಲಿ ಬ್ರಿಟನ್ ಸಂಸತ್ತು ಫೇನ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಅವರನ್ನು ವಿಚಾರಣೆಯನ್ನು ನಡೆಸಲು ಮುಂದಾಗಿದೆ. ಆದರೆ ಮಾರ್ಕ್ ಮಾಧ್ಯಮದ ಮುಂದೆ ಇದುವರೆಗೂ ಕಾಣಿಸಿಕೊಂಡಿಲ್ಲ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ದೇಶದಲ್ಲಿ ನಡೆಯುವ ಚುನಾವಣೆಯಲ್ಲಿಯೂ ಫೇಸ್‌ಬುಕ್ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ಈ ಹಿನ್ನಲೆಯಲ್ಲಿ ಮಾಹಿತಿ ಸೋರಿಕೆ ಪ್ರಕರಣವೂ ರಾಷ್ಟ್ರದ ಭದ್ರತೆಯ ವಿಷಯವೇ ಆಗಿರುವುದರಿಂದ ಭಾರತ ಸರಕಾರವೂ ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಕಾನೂನು ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ಈ ಕುರಿತು ತುರ್ತು ಪತ್ರಿಕಾಗೋಷ್ಠಿ ನಡೆಸಿ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಐದು ಕೋಟಿ ಫೇಸ್‌ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿ ರಾಜಕೀಯ ಕಾರಣಗಳಿಗಾಗಿ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದು. ಇದರಲ್ಲಿ ಭಾರತೀಯರ ಮಾಹಿತಿ ಸೋರಿಕೆಯಾಗಿದ್ದರೆ ನಾವು ಕ್ಷಮಿಸುವುದಿಲ್ಲ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಭಾರತೀಯರ ಯಾವುದೇ ಮಾಹಿತಿ ಸೋರಿಕೆಯಾಗಿದ್ದರೆ ನಾವು ಸಹಿಸಿಕೊಳ್ಳುವುದಿಲ್ಲ. ಭಾರತ ಐಟಿ ಕಾಯ್ದೆಯಡಿ ಕಠಿಣವಾದ ನಿಯಮಗಳನ್ನು ಹೊಂದಿದೆ. ಅಗತ್ಯ ಬಿದ್ದರೆ ನಿಮ್ಮನ್ನು ನೇರವಾಗಿ ಇಲ್ಲಿಗೇ ಕರೆಸಬಹುದು ಎಂದು ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಓದಿರಿ: ಲೀಕ್ ಆಯ್ತು ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಫೋಟೋ: ಐಫೋನ್ X ಮಾದರಿಯಲ್ಲಿಯೇ ಇದೇ ಡಿಸ್‌ಪ್ಲೇ..!


Click it and Unblock the Notifications








