ಭಾರತ ಸರ್ಕಾರದ ಪ್ಲಾನ್‌ ಕೇಳಿ ಬೆಸ್ತುಬಿದ್ದ ಅಮೆಜಾನ್‌!

|

ಪ್ರಸ್ತುತ ದಿನಗಳಲ್ಲಿ ಭಾರತದಲ್ಲಿ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಆನ್‌ಲೈನ್‌ ಮೂಲಕ ಶಾಪಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಇದೇ ಕಾರಣಕ್ಕೆ ಅಮೆಜಾನ್‌, ವಾಲ್‌ಮಾರ್ಟ್‌ನಂತಹ ಪ್ಲಾಟ್‌ಫಾರ್ಮ್‌ಗಳು ಇ-ಕಾಮರ್ಸ್‌ ವಲಯದಲ್ಲಿ ಸಾಕಷ್ಟು ಪ್ರಾಬಲ್ಯವನ್ನು ಸಾಧಿಸಿವೆ. ಇದೇ ಕಾರಣಕ್ಕೆ ಭಾರತದಲ್ಲಿ ಯುಎಸ್‌ ಮೂಲದ ಅಮೆಜಾನ್‌ ಮತ್ತು ವಾಲ್‌ಮಾರ್ಟ್‌ನಂತಹ ಕಂಪೆನಿಗಳ ಪ್ರಾಬಲ್ಯವನ್ನು ಕೊನೆಗೊಳಿಸಲು ಭಾರತ ಸರ್ಕಾರ ಮುಂದಾಗಿದೆ.

ಅಮೆಜಾನ್

ಹೌದು, ಭಾರತ ಸರ್ಕಾರ ಅಮೆಜಾನ್ ಮತ್ತು ವಾಲ್‌ಮಾರ್ಟ್‌ ಕಂಪನಿಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದೆ. ಇದಕ್ಕಾಗಿ ಭಾರತ ಸರ್ಕಾರವು ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ಪರಿಚಯಿಸಲು ಸಿದ್ಧತೆ ನಡೆಸಿದೆ. ಇನ್ನು ಈ ONDC ಪ್ಲಾಟ್‌ಫಾರ್ಮ್ ಮೂಲಕ ಖರೀದಿದಾರರು ಮತ್ತು ಮಾರಾಟಗಾರರು ಪರಸ್ಪರ ಸಂವಹನ ನಡೆಸಲು ಮತ್ತು ಆನ್‌ಲೈನ್‌ನಲ್ಲಿ ವಹಿವಾಟು ನಡೆಸಲು ಅವಕಾಶ ಸಿಗಲಿದೆ. ಹಾಗಾದ್ರೆ ಭಾರತ ಸರ್ಕಾರ ONDC ಪ್ಲಾಟ್‌ಫಾರ್ಮ್‌ ಪ್ರಾರಂಭಿಸಲು ಕಾರಣ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆನ್‌ಲೈನ್‌

ಭಾರತ ಸರ್ಕಾರ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಅನ್ನು ಪ್ರಾರಂಭಿಸಿದೆ. ಈ ಸೈಟ್‌ನಲ್ಲಿ ಆನ್‌ಲೈನ್‌ ಶಾಪಿಂಗ್‌ ಪ್ರಿಯರು ಮಾರಾಟಗಾರರ ಜೊತೆ ಸಂವಹನ ನಡೆಸಬಹುದು. ಅಲ್ಲದೆ ತಮಗೆ ಬೇಕಾದ ಪ್ರಾಡಕ್ಟ್‌ಗಳನ್ನು ಖರೀದಿಸುವುದಕ್ಕೆ ಸಾಧ್ಯವಾಗಲಿದೆ. ಇದಲ್ಲದೆ ಎಲೆಕ್ಟ್ರಾನಿಕ್ ನೆಟ್‌ವರ್ಕ್‌ಗಳ ಮೂಲಕ ಸರಕು ಮತ್ತು ಸೇವೆಗಳ ವಿನಿಮಯಕ್ಕಾಗಿ ಮುಕ್ತ ವೇದಿಕೆಯನ್ನು ಉತ್ತೇಜಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇನ್ನು ಈ ಪ್ಲಾಟ್‌ಫಾರ್ಮ್‌ ಅನ್ನು ದೆಹಲಿ ಎನ್‌ಸಿಆರ್, ಬೆಂಗಳೂರು, ಭೋಪಾಲ್, ಶಿಲ್ಲಾಂಗ್ ಮತ್ತು ಕೊಯಮತ್ತೂರು ಸೇರಿದಂತೆ ದೇಶದ ಪ್ರಮುಖ ಐದು ನಗರಗಳಲ್ಲಿ ಪ್ರಾರಂಬಿಸುವ ಪ್ಲಾನ್‌ ಸರ್ಕಾರದ ಮುಂದಿದೆ ಎನ್ನಲಾಗಿದೆ.

ONDC

ಭಾರತದ ONDC ಪ್ಲಾನ್‌ ಭಾರತದಲ್ಲಿ 30 ಮಿಲಿಯನ್ ಮಾರಾಟಗಾರರು ಮತ್ತು 10 ಮಿಲಿಯನ್ ವ್ಯಾಪಾರಿಗಳನ್ನು ಆನ್‌ಲೈನ್‌ ವೇದಿಕೆಗೆ ತರುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ. ಅಲ್ಲದೆ ಆಗಸ್ಟ್ ತಿಂಗಳ ವೇಳೆಗೆ ಕನಿಷ್ಠ 100 ನಗರಗಳು ಮತ್ತು ಪಟ್ಟಣಗಳಲ್ಲಿ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಅನ್ನು ವಿಸ್ತರಿಸುವ ಪ್ಲಾನ್‌ ಮಾಡಿಕೊಳ್ಳಲಾಗಿದೆ. ಇದಲ್ಲದೆ ಈ ಪ್ಲಾಟ್‌ಫಾರ್ಮ್‌ನಲ್ಲಿ ಖರೀದಿದಾರರು ಮತ್ತು ಮಾರಾಟಗಾರರಿಗೆ ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗ್ತಿದೆ ಎಂದು ವರದಿಯಾಗಿದೆ.

ಭಾರತ

ಇನ್ನು ಭಾರತ ಸರ್ಕಾರದ ಈ ಯೋಜನೆಗ ಬಗ್ಗೆ ಅಮೆಜಾನ್‌ ಹಾಗೂ ಇತರೆ ಇ-ಕಾಮರ್ಸ್ ಸೈಟ್‌ಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಚಿಲ್ಲರೆ ವ್ಯಾಪಾರಿಗಳು ಮತ್ತು ಸಾಹಸೋದ್ಯಮ ಬಂಡವಾಳ ಸಂಸ್ಥೆಗಳು ONDC ಯೋಜನೆಗೆ ಬೆಂಬಲವನ್ನು ನೀಡಿವೆ ಎಂದು ಸರ್ಕಾರವು ತನ್ನ ದಾಖಲೆಯಲ್ಲಿ ಬಹಿರಂಗಪಡಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾದಂತಹ ಬ್ಯಾಂಕ್‌ಗಳು ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ನಲ್ಲಿ ಈಗಾಗಲೇ 2.55 ಶತಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಬದ್ಧವಾಗಿವೆ ಎಂದು ಹೇಳಲಾಗಿದೆ.

Best Mobiles in India

English summary
Indian government is all set to launch an Open Network for Digital Commerce

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X