ಕೈಗೆಟಕುವ ಬೆಲೆಯಲ್ಲಿ 5G ಸ್ಮಾರ್ಟ್‌ಫೋನ್‌ ಪರಿಚಯಿಸಿದ ಸ್ವದೇಶಿ ಬ್ರ್ಯಾಂಡ್‌ ಲಾವಾ!

|

ಸ್ವದೇಶಿ ಸ್ಮಾರ್ಟ್‌ಫೋನ್‌ ತಯಾರಕ ಲಾವಾ ಕಂಪೆನಿ ಹೊಸ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಸ್ವದೇಶಿ ಬ್ರ್ಯಾಂಡ್‌ಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್‌ ಲಾವಾದ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ್ದಾರೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಲಾವಾ ಬ್ಲೇಜ್ 5G ಎಂದು ಹೆಸರಿಸಲಾಗಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 700SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಭಾರತೀಯ

ಹೌದು, ಭಾರತೀಯ ಸ್ಮಾರ್ಟ್‌ಫೋನ್ ತಯಾರಕ ಲಾವಾ ಕಂಪೆನಿ ಭಾರತದಲ್ಲಿ ಹೊಸ ಲಾವಾ ಬ್ಲೇಜ್ 5G ಫೋನ್‌ ಬಿಡುಗಡೆ ಮಾಡಿದೆ. ಭಾರತದಲ್ಲಿ ನಡೆಯುತ್ತಿರುವ ಇಂಡಿಯನ್ ಮೊಬೈಲ್ ಕಾಂಗ್ರೆಸ್ (IMC) 2022ರಲ್ಲಿ ಈ ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗಾದ್ರೆ ಸ್ವದೇಶಿ ಬ್ರ್ಯಾಂಡ್‌ ಲಾವಾ ಪರಿಚಯಿಸಿರುವ ಲಾವಾ ಬ್ಲೇಜ್ 5G ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೆ ವಿನ್ಯಾಸ ಹೇಗಿದೆ?

ಡಿಸ್‌ಪ್ಲೆ ವಿನ್ಯಾಸ ಹೇಗಿದೆ?

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್ 6.5 ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1600×720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ಸ್ಕ್ರೀನ್ ರಿಫ್ರೆಶ್ ರೇಟ್‌ ಹೊಂದಿದ್ದು 2.5D ಕರ್ವ್ಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ WidevineL1 ಪ್ರಮಾಣೀಕರಣವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12OS ನಲ್ಲಿ ರನ್‌ ಆಗಲಿದೆ. ಇದಕ್ಕೆ ಪೂರಕವಾಗಿ 2.2GHz ಕ್ಲಾಕ್‌ ಸ್ಪೀಡ್‌ ಅನ್ನು ಹೊಂದಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದ್ದು, 3GB ವರ್ಚುವಲ್ RAM ಗೆ ಬೆಂಬಲವನ್ನು ಸಹ ನೀಡಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಸಹ ಪಡೆದುಕೊಂಡಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದ ಕ್ಯಾಮೆರಾಗಳು ಡೆಪ್ತ್‌ ಹಾಗೂ ಮ್ಯಾಕ್ರೋ ಲೆನ್ಸ್‌ ಅನ್ನು ನೀಡಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, ವೈ-ಫೈ 6, ಬ್ಲೂಟೂತ್ 5.1, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಬೆಂಬಲಿಸಲಿದೆ. ಈ ಫೋನ್‌ ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇದಲ್ಲದೆ ಲಾವಾ ಬ್ಲೇಜ್ 5G ಫೋನ್‌ ಎಲ್ಲಾ ಪ್ರಮುಖ 5G ಬ್ಯಾಂಡ್‌ಗಳನ್ನು ಹರಾಜಿನಲ್ಲಿ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 10,000ರೂ. ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಪ್ರಿ ಬುಕ್ಕಿಂಗ್‌ ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಾರಂಭವಾಗಲಿದೆ ಎಂದು ಲಾವಾ ಕಂಪೆನಿ ಹೇಳಿದೆ. ಇನ್ನು ಇದೇ ಸಮಯದಲ್ಲಿ ಲಾವಾ ಕಂಪೆನಿ 'ಫ್ರೀ ಸರ್ವಿಸ್‌ ಅಟ್‌ ಹೋಮ್‌ ಸೇವೆ'ಯನ್ನು ಒದಗಿಸುತ್ತಿದೆ. ಈ ಸೇವೆಯನ್ನು ಫೋನ್‌ನ ವಾರಂಟಿ ಅವಧಿಯೊಳಗೆ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಸರ್ವಿಸ್‌ ಸೆಂಟರ್‌ಗಳಿಗೆ ಹೋಗಬೇಕಾದ ಅಗತ್ಯವಿಲ್ಲ ಎನ್ನಲಾಗಿದೆ.

Best Mobiles in India

English summary
Indian smartphone maker Lava launched a new 5G-enabled smartphone in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X