ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಇನ್ಫಿನಿಕ್ಸ್‌ ಹಾಟ್‌ 20 ಸರಣಿ! ಏನೆಲ್ಲಾ ನಿರೀಕ್ಷೆ?

|

ಇನ್ಫಿನಿಕ್ಸ್‌ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಬಜೆಟ್‌ ಬೆಲೆಯಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ನೀಡುವ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿದೆ. ಇದೇ ಕಾರಣಕ್ಕೆ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಬೇಕೆಂದವರು ಇನ್ಫಿನಿಕ್ಸ್‌ ಫೋನ್‌ಗಳ ಕಡೆ ಗಮನ ಹರಿಸುತ್ತಾರೆ. ಅದಕ್ಕೆ ತಕ್ಕಂತೆ ಇನ್ಫಿನಿಕ್ಸ್‌ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಶೀಘ್ರದಲ್ಲೇ ತನ್ನ ಹೊಸ ಇನ್ಫಿನಿಕ್ಸ್‌ ಹಾಟ್‌ 20 ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಶೀಘ್ರದಲ್ಲೇ ಇನ್ಫಿನಿಕ್ಸ್‌ ಹಾಟ್‌ 20 ಸರಣಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸರಣಿಯಲ್ಲಿ ಇನ್ಫಿನಿಕ್ಸ್‌ ಹಾಟ್‌ 20 ಪ್ಲೇ, ಇನ್ಫಿನಿಕ್ಸ್‌ ಹಾಟ್‌ 20i, ಇನ್ಫಿನಿಕ್ಸ್‌ ಹಾಟ್‌ 20, ಇನ್ಫಿನಿಕ್ಸ್‌ ಹಾಟ್‌ 20S ಮತ್ತು ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಸರಣಿ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸುಳಿವು ನೀಡಿದೆ. ಹಾಗಾದ್ರೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಹೇಗಿರಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಏನಿರಲಿದೆ?

ಡಿಸ್‌ಪ್ಲೇ ರಚನೆ ಏನಿರಲಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, ಸ್ಕ್ರೀನ್‌ ಟು ಬಾಡಿ ಅನುಪಾತ 82.0% ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 810 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ ಆಧಾರಿತ ಕಂಪನಿಯ ಸ್ವಂತ XOS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ನಲ್ ಸ್ಟೋರೇಜ್ ಪಡೆದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಣೆಗೆ ಅವಕಾಶ ನೀಡಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸ್ಯಾಮ್‌ಸಂಗ್ JN1 ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಐ ಟ್ರ್ಯಾಕಿಂಗ್, ಪೋರ್ಟ್ರೇಟ್ ಮೋಡ್, ಶಾರ್ಟ್ ವಿಡಿಯೋ ಮೋಡ್ ಮತ್ತು ಸೂಪರ್ ನೈಟ್ ಮೋಡ್ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಇನ್ಫಿನಿಕ್ಸ್‌ ಹಾಟ್‌ 20 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18 ವ್ಯಾಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ 5 ವ್ಯಾಟ್ ರಿವರ್ಸ್‌ ಚಾರ್ಜಿಂಗ್ ಫೀಚರ್ಸ್‌ ಅನ್ನು ಕೂಡ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್, 3.5mm ಆಡಿಯೊ ಜ್ಯಾಕ್, ಡ್ಯುಯಲ್ ಸಿಮ್, 5G, Wi-Fi 802.11ac, ಬ್ಲೂಟೂತ್ 5.1, GPS, NFC ಮತ್ತು GPS ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ ?

ಬೆಲೆ ಮತ್ತು ಲಭ್ಯತೆ ?

ಇನ್ನು ಈ ಸ್ಮಾರ್ಟ್‌ಫೋನ್‌ ಸರಣಿ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಹಾಗೂ ಮಧ್ಯಮ ಬೆಲೆ ವಿಭಾಗದಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಈ ಫೋನ್‌ ಕಲರ್‌ ಆಯ್ಕೆಗಳ ವಿವರಗಳು ಬಿಡುಗಡೆಯ ದಿನಾಂಕ ಹತ್ತಿರವಿದ್ದಾಗ ಬಹಿರಂಗವಾಗುವ ಸಾಧ್ಯತೆಯಿದೆ.

Best Mobiles in India

English summary
Infinix company is set to launch the Infinix Hot 20 series in India soon

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X