Home
ಸುದ್ದಿಜಾಲ

ಭಾರತದ ಮೊದಲ 32 ಇಂಚಿನ QLED ಟಿವಿ ಪರಿಚಯಿಸಲು ಇನ್ಫಿನಿಕ್ಸ್‌ ತಯಾರಿ!

ಇನ್ಫಿನಿಕ್ಸ್‌ ಕಂಪೆನಿ ಸ್ಮಾರ್ಟ್‌ಟಿವಿ ವಲಯದಲ್ಲಿಯೂ ಕೂಡ ಸೈ ಎನಿಸಿಕೊಂಡಿದೆ. ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಮೊದಲ 32 ಇಂಚಿನ QLED ಡಿಸ್‌ಪ್ಲೇ ಟೆಕ್ನಾಲಜಿಯನ್ನು ಒಳಗೊಂಡ ಸ್ಮಾರ್ಟ್‌ಟಿವಿ ಪರಿಚಯಿಸಲು ಮುಂದಾಗಿದೆ. ಇನ್ನು ಸ್ಮಾರ್ಟ್‌ಟಿವಿ ಇನ್ಫಿನಿಕ್ಸ್‌ WebOS ಮೂಲಕ ರನ್‌ ಆಗಲಿದೆ.

ಹೌದು, ಇನ್ಫಿನಿಕ್ಸ್‌ ಕಂಪೆನಿ ಶೀಘ್ರದಲ್ಲೇ 32 ಇಂಚಿನ QLED ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಟಿವಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಟಿವಿ ಕೈ ಗೆಟಕುವ ಬೆಲೆಯಲ್ಲಿ ಲಭ್ಯವಾಗಲಿದೆ ಎಂಬ ಸುಳಿವನ್ನು ಇನ್ಫಿನಿಕ್ಸ್‌ ಕಂಪೆನಿ ನೀಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಟಿವಿ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದ ಮೊದಲ 32 ಇಂಚಿನ QLED ಟಿವಿ ಪರಿಚಯಿಸಲು ಇನ್ಫಿನಿಕ್ಸ್‌ ತಯಾರಿ!

ಇನ್ಫಿನಿಕ್ಸ್‌32 QLED ಟಿವಿ ಫೀಚರ್ಸ್‌ ವಿವರ: ಇನ್ಫಿನಿಕ್ಸ್‌ 32 ಇಂಚಿನ QLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು HD ರೆಸಲ್ಯೂಶನ್ (720p) ನಲ್ಲಿ ಬರಲಿದೆ ಎನ್ನಲಾಗಿದೆ. ಇದಲ್ಲದೆ ಸ್ಮಾರ್ಟ್‌ಟಿವಿಯು WebOS ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ ಬಳಕೆದಾರ ಸ್ನೇಹಿ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ. ಇದಲ್ಲದೆ ಈ ಸ್ಮಾರ್ಟ್‌ಟಿವಿಯು ಸ್ಲಿಮ್ ಬಾಡಿಯೊಂದಿಗೆ ಫ್ರೇಮ್‌ಲೆಸ್ ವಿನ್ಯಾಸವನ್ನು ನೀಡುತ್ತದೆ ಎನ್ನಲಾಗಿದೆ.

ಇನ್ನು ಇನ್ಫಿನಿಕ್ಸ್‌ 32 ಇಂಚಿನ ಟಿವಿಯ ಜೊತೆಗೆ 43 ಇಂಚಿನ ಆಯ್ಕೆಯಲ್ಲಿಯು ಸಹ ಎಂಟ್ರಿ ನೀಡಲಿದೆ ಎನ್ನಲಾಗಿದೆ. ಇನ್ನು ಇನ್ಫಿನಿಕ್ಸ್‌ ಪರಿಚಯಿಸಲಿರುವ ಹೊಸ ಸ್ಮಾರ್ಟ್‌ಟಿವಿಯ ಬೆಲೆ 12,000ರೂ. ಅಡಿಯಲ್ಲಿದೆ ಎಂಬ ಸುಳಿವನ್ನು ಕಂಪೆನಿಯೇ ನೀಡಿದೆ. ಈ ಮೂಲಕ QLED ಡಿಸ್‌ಪ್ಲೇ ಟೆಕ್ನಾಲಜಿಯ ಸ್ಮಾರ್ಟ್‌ಟಿವಿ ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ.

ಇನ್ಫಿನಿಕ್ಸ್‌ ಕಂಪೆನಿಯ ಇತ್ತೀಚಿನ ಸುದ್ದಿಗಳನ್ನು ಗಮನಿಸುವುದಾದರೆ ಕೆಲ ದಿನಗಳ ಹಿಂದೆ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ. ಜೊತೆಗೆ 580 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಆಕ್ಟಾ-ಕೋರ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13-ಆಧಾರಿತ XOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಕಂಪೆನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದ್ದು, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ದಿಕ್ಸೂಚಿ, ಗೈರೊಸ್ಕೋಪ್, ಲೈಟ್‌ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಇನ್ನು ಇನ್ಫಿನಿಕ್ಸ್‌ ಕಂಪೆನಿಯ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB + 128GB RAM ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 14,999ರೂ. ಬೆಲೆಯನ್ನು ಹೊಂದಿದೆ. ಆದರೆ 8GB + 128GB ರೂಪಾಂತರದ 15,999ರೂ. ಬೆಲೆಯನ್ನು ಪಡೆದುಕೊಂಡಿದೆ.

Best Mobiles in India

English summary
Infinix company plan India’s first 32 inch QLED TV launch to soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+