Home
ಸುದ್ದಿಜಾಲ

ಇನ್‌ಫಿನಿಕ್ಸ್‌ ಡೇ ಸೇಲ್‌: ಈ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರೀ ರಿಯಾಯಿತಿ ಲಭ್ಯ!

ಇನ್‌ಫಿನಿಕ್ಸ್‌ ಮೊಬೈಲ್‌ ಸಂಸ್ಥೆಯು ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಇದೀಗ ಆಕರ್ಷಕ ಕೊಡುಗೆ ಘೋಷಿಸಿದೆ. ಇಂದಿನಿಂದ ಪ್ರಾರಂಭವಾಗುವ ಡೀಲ್‌ಗಳು ಮತ್ತು ಕೊಡುಗೆಗಳನ್ನು ನೀಡುತ್ತಿದೆ. ಇನ್‌ಫಿನಿಕ್ಸ್‌ ಸ್ಮಾರ್ಟ್‌ಫೋನ್‌ಗಳ ಮೇಲಿನ ಕೊಡುಗೆಯು ಈಗ ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಈ ಕೊಡುಗೆಗಳು ಮತ್ತು ರಿಯಾಯಿತಿಗಳು ಫ್ಲಿಪ್‌ಕಾರ್ಟ್‌ನಲ್ಲಿನ ಇನ್ಫಿನಿಕ್ಸ್ ಡೇಸ್ ಮಾರಾಟದ ಒಂದು ಭಾಗವಾಗಿದೆ.

ಇನ್‌ಫಿನಿಕ್ಸ್‌ ಡೇ ಸೇಲ್‌: ಈ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರೀ ರಿಯಾಯಿತಿ ಲಭ್ಯ!

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಇನ್ಫಿನಿಕ್ಸ್ ಡೇಸ್ ಸೇಲ್‌ ಪ್ರಾರಂಭವಾಗಿದೆ. ಈ ಸೇಲ್‌ ಇದೇ ಜೂನ್ 1 ರಂದು ಆರಂಭವಾಗಿದ್ದು, ಇದೇ ಜೂನ್ 5ರ ವರೆಗೂ ಚಾಲ್ತಿ ಇರಲಿದೆ. ಮಾರಾಟದಲ್ಲಿ ಇನ್‌ಫಿನಿಕ್ಸ್‌ ಜಿರೋ 5G, ಇನ್‌ಫಿನಿಕ್ಸ್‌ ನೋಟ್ 11, ಇನ್‌ಫಿನಿಕ್ಸ್‌ ನೋಟ್ ಹಾಟ್‌ 11 ಸೇರಿದಂತೆ ಇತರೆ ಕೆಲವು ಜನಪ್ರಿಯ ಮಾಡೆಲ್‌ಗಳ ಮೇಲೆ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಈ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌
ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ XOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸಿದೆ. ಸೇಲ್‌ನಲ್ಲಿ ಈ 500ರೂ. ರಿಯಾಯಿತಿ ಪಡೆದಿದ್ದು, ಬೇಸ್‌ ವೇರಿಯಂಟ್‌ 9,499ರೂ.ಗೆ ಲಭ್ಯ.

ಇನ್‌ಫಿನಿಕ್ಸ್‌ ಡೇ ಸೇಲ್‌: ಈ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರೀ ರಿಯಾಯಿತಿ ಲಭ್ಯ!

ಇನ್ಪಿನಿಕ್ಸ್‌ ಜಿರೋ 5G ಸ್ಮಾರ್ಟ್‌ಫೋನ್‌
ಇನ್ಪಿನಿಕ್ಸ್‌ ಜಿರೋ 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LTPS ಡಿಸ್‌ಪ್ಲೇ ಹೊಂದಿದೆ. ಇದು 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಆಧಾರಿತ XOS 10 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಸೇಲ್‌ನಲ್ಲಿ ಈ ಫೋನ್‌ 2000ರೂ. ಬೆಲೆ ಕಡಿತ ಕಂಡಿದೆ.

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌
ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD + ಅಮೋಲೆಡ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಗ್ರಾಹಕರು ಎಸ್‌ಡಿ ಕಾರ್ಡ್‌ ಮೂಲಕ 512 GB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸೇಲ್‌ನಲ್ಲಿ ಈ ಫೋನ್ ಪ್ರಿ ಪೇಯ್ಡ್‌ ಕೊಡುಗೆಯಾಗಿ 1,500 ರೂ. ರಿಯಾಯಿತಿ ಪಡೆದಿದೆ.

Best Mobiles in India

English summary
Infinix Days Sale on Flipkart: Discounts on These Top Infinix Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+