ಎಂಟ್ರಿಯಲ್ಲೇ ಧೂಳೆಬ್ಬಿಸಿದ ಇನ್ಫಿನಿಕ್ಸ್ GT 10 ಪ್ರೊ; ಡಿಫರೆಂಟ್ ಡಿಸೈನ್‌ಗೆ ಫಿದಾ ಆಗೋದು ಗ್ಯಾರಂಟಿ!
ತನ್ನ ಡಿಸೈನ್ ಮೂಲಕವೇ ಗಮನಸೆಳೆದಿರುವ ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಇದೀಗ ಭಾರತದಲ್ಲಿ ಅನಾವರಣಗೊಂಡಿದೆ. ಭಾರತದ ಮೊಬೈಲ್ ಮಾರುಕಟ್ಟೆಗೆ ಎಂಟ್ರಿ ನೀಡ್ತಿದ್ದ ಹಾಗೇ ಭಾರಿ ಹಲ್‌ಚಲ್ ಎಬ್ಬಿಸಿದೆ. ಇದು ಇನ್ಫಿನಿಕ್ಸ್ ಕಂಪೆನಿ ಮೊದಲ GT-ಸರಣಿಯ ಗೇಮಿಂಗ್ ಸ್ಮಾರ್ಟ್‌ಫೋನ್ ಆಗಿದೆ. ಇದನ್ನು ಯುವಜನರ ಆಶಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಿದೆ.
ಹೌದು, ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ 120Hz AMOLED ಡಿಸ್‌ಪ್ಲೇ, ಬ್ಲೋಟ್‌ವೇರ್-ಮುಕ್ತ ಅನುಭವವನ್ನು ನೀಡಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ GT 10 ಪ್ರೊ ಡಿಸೈನ್ ಹೇಗಿದೆ?
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಅತ್ಯಾಕರ್ಷಕವಾದ ಡಿಸೈನ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಥೇಟ್ ನಥಿಂಗ್ ಫೋನ್ ಮಾದರಿಯಲ್ಲಿ ಕಾಣಲಿದೆ. ಏಕೆಂದರೆ ಇದು ಸೈಬರ್‌ಪಂಕ್ ಶೈಲಿಯ ರಿಯರ್ ಶೆಲ್ ಅನ್ನು ಹೊಂದಿದ್ದು, ಕಸ್ಟಮೈಸ್ ಮಾಡಬಹುದಾದ ಮಿನಿ-ಎಲ್ಇಡಿ ಸೂಚಕವನ್ನು ಹೊಂದಿದೆ. ಇದು ಅಧಿಸೂಚನೆಗಳು, ಚಾರ್ಜಿಂಗ್ ಮತ್ತು ಗೇಮಿಂಗ್ಗಾಗಿ ಗ್ಲೋ ಆಗಲಿದೆ.
ಇನ್ಫಿನಿಕ್ಸ್ GT 10 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 10-ಬಿಟ್ ಅಮೋಲೆಡ್ ಡಿಸ್‌ಪ್ಲೇಯಾಗಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದ್ದು, DCIP ಕಲರ್ ಗ್ಯಾಮಟ್ 100% ರೇಂಜ್ ತಲುಪಿಸಲು ರೇಟ್ ಮಾಡಲಾಗಿದೆ.
ಇನ್ಫಿನಿಕ್ಸ್ GT 10 ಪ್ರೊ ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್13 ಆಧಾರಿತ XOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಲಭ್ಯವಿರುವ ಸ್ಟೋರೇಜ್ ಬಳಸಿಕೊಂಡು RAM ಅನ್ನು ವಾಸ್ತವಿಕವಾಗಿ 16GB ವರೆಗೆ ವಿಸ್ತರಿಸಬಹುದಾಗಿದೆ.
ಇನ್ಫಿನಿಕ್ಸ್ GT 10 ಪ್ರೊ ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ಫಿನಿಕ್ಸ್ GT 10 ಪ್ರೊ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, NFC, 3.5mm ಆಡಿಯೋ ಜ್ಯಾಕ್, FM ರೇಡಿಯೋ, GPS, USB ಟೈಪ್-ಸಿ ಪೋರ್ಟ್, ಬ್ಲೂಟೂತ್, ಮತ್ತು Wi-Fi a/b/g/n/ac/x ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಲೈಟ್ ಸೆನ್ಸಾರ್, ಇ-ದಿಕ್ಸೂಚಿ, ಜಿ-ಸೆನ್ಸರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ನೊಂದಿಗೆ ಬರಲಿದೆ.
ಭಾರತದಲ್ಲಿ ಇನ್ಫಿನಿಕ್ಸ್ GT 10 ಪ್ರೊ ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 19,999ರೂ. ಬೆಲೆ ಹೊಂದಿದೆ. ಇದು ಸೈಬರ್ ಬ್ಲಾಕ್ ಮತ್ತು ಮಿರಾಜ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಇಂದಿನಿಂದಲೇ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.
ಲಾಂಚ್ ಆಫರ್ ಏನಿದೆ?
ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಅನ್ನು ಐಸಿಐಸಿಐ ಮತ್ತು ಕೋಟಕ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000ರೂ. ತ್ವರಿತ ರಿಯಾಯಿತಿ ಸಿಗಲಿದೆ. ಇನ್ನು ಫ್ಲಿಪ್‌ಕಾರ್ಟ್ ಆರು ತಿಂಗಳ ನೊ-ಕಾಸ್ಟ್ ಇಎಂಐ ಆಯ್ಕೆಗಳನ್ನು ಒದಗಿಸುತ್ತಿದೆ.


Click it and Unblock the Notifications