Home
ಸುದ್ದಿಜಾಲ

ಇನ್ಫಿನಿಕ್ಸ್‌ GT 20 ಪ್ರೊ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗ: ಏನೆಲ್ಲಾ ನಿರೀಕ್ಷೆ

ಇನ್ಫಿನಿಕ್ಸ್‌ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್‌ Infinix GT 20 Proನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ ಅನ್ನು ಹಲವು ವೆಬ್‌ಸೈಟ್‌ಗಳಲ್ಲಿ ದೃಢೀಕರಿಸಲಾಗಿದೆ. ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ಸ್ಮಾರ್ಟ್‌ಫೋನಿನ ವಿವಿಧ ಫೀಚರ್ಸ್‌ಗಳು ಬಹಿರಂಗವಾಗಿದೆ. ಅದರಂತೆ ಈ ಫೋನ್‌ ಡೈಮೆನ್ಸಿಟಿ 8200SoC ಪ್ರೊಸೆಸರ್‌ನಲ್ಲಿ ಬರಲಿದೆ ಎನ್ನಲಾಗಿದೆ.

ಹೌದು, Infinix GT 20 Pro ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ಪ್ರಮಾಣೀಕರಿಸಲ್ಪಟ್ಟಿವೆ. ಈ ಸ್ಮಾರ್ಟ್‌ಫೋನ್‌ Geekbench ನ ಸಿಂಗಲ್-ಕೋರ್ ಮತ್ತು ಮಲ್ಟಿ-ಕೋರ್ ಪರೀಕ್ಷಾ ಫಲಿತಾಂಶಗಳಲ್ಲಿ, ಸಾಧನವು ಕ್ರಮವಾಗಿ 1,005 ಮತ್ತು 3,311 ಅಂಕಗಳನ್ನು ಗಳಿಸಿಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಇನ್ಫಿನಿಕ್ಸ್‌GT 20 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್‌ GT 20 ಪ್ರೊ  ಫೋನ್‌ನ ಫೀಚರ್ಸ್‌ ಬಹಿರಂಗ: ಏನೆಲ್ಲಾ ನಿರೀಕ್ಷೆ

Infinix GT 20 Pro ಫೀಚರ್ಸ್‌ ನಿರೀಕ್ಷೆ ಏನು?
Infinix GT 20 Pro ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇಯು 409 ಪಿಪಿಐ ಸಾಂದ್ರತೆಯನ್ನು ಹೊಂದಿರಲಿದ್ದು, 120Hz ರಿಫ್ರೆಶ್‌ ರೇಟ್‌ನಲ್ಲಿ ಬರಬಹುದು ಎಂದು ವರದಿಯಾಗಿದೆ.

Infinix GT 20 Pro ಪ್ರೊಸೆಸರ್‌ ಯಾವುದು?
Infinix GT 20 Pro ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ.

Infinix GT 20 Pro ಕ್ಯಾಮೆರಾ ಸೆಟಪ್‌ ಏನಿದೆ?
Infinix GT 20 Pro ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ನೊಂದಿಗೆ ಬರಲಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

Infinix GT 20 Pro ಬ್ಯಾಟರಿ ಮತ್ತು ಇತರೆ
Infinix GT 20 Pro ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇದು 67W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

Infinix GT 20 Pro ಬೆಲೆ ಮತ್ತು ಲಭ್ಯತೆ
Infinix GT 20 Pro ಸ್ಮಾರ್ಟ್‌ಫೋನ್‌ ಭಾರತದಲ್ಲಿ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇದರ ಬಿಡುಗಡೆ ದಿನಾಂಕ ಬಂದಾಗ ಬೆಲೆ ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ.

ಇದಲ್ಲದೆ ಭಾರತದ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್‌ ಕಂಪೆನಿ ಇತ್ತೀಚಿಗೆ Infinix HOT 40i ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Infinix GT 20 Pro Smartphone Surfaces On Geekbench: Expected Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+