ಇಂದು 'ಇನ್ಫಿನಿಕ್ಸ್ GT 10 ಪ್ರೊ' ಪ್ರಿ-ಆರ್ಡರ್‌ಗೆ ಲಭ್ಯ!..ನಥಿಂಗ್ ಫೋನಿನಂತೆ ಇದೆ!
ಇನ್ಫಿನಿಕ್ಸ್ ಸಂಸ್ಥೆಯು ಇತ್ತೀಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇದೀಗ ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಪ್ರಿ-ಆರ್ಡರ್‌ಗೆ ಅವಕಾಶ ಪ್ರಾರಂಭವಾಗಲಿದ್ದು, ಖರೀದಿದಾರರು ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಮೂಲಕ ಪ್ರಿ-ಆರ್ಡರ್ ಮಾಡಬಹುದಾಗಿದೆ.
ಹೌದು, ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನ್ ಇಂದು ಸಂಜೆ 4 ಗಂಟೆಯಿಂದ ಪ್ರಿ-ಆರ್ಡರ್‌ಗೆ ಲಭ್ಯ ಇದೆ. ಅಂದಹಾಗೆ ಈ ಫೋನ್ 8GB RAM ಮತ್ತು 256GB ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಫೋನಿನ ಆರಂಭಿಕ ಬೆಲೆಯು 19,999ರೂ. ಆಗಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.

ಇನ್ನು ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಆಗಿದೆ. ಇನ್ನುಳಿದಂತೆ ಇನ್ಫಿನಿಕ್ಸ್ GT 10 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಇನ್ಫಿನಿಕ್ಸ್ GT 10 ಪ್ರೊ ಡಿಸೈನ್ ಮಾಹಿತಿ : ಇನ್ಫಿನಿಕ್ಸ್ GT 10 ಪ್ರೊ ಮೊಬೈಲ್ ಡಿಸೈನ್ ಅನ್ನು ಹೊಂದಿದ್ದು, ಇದರ ರಚನೆ ನಥಿಂಗ್ ಫೋನ್ ಮಾದರಿ ಹೋಲುತ್ತದೆ. ಇದು ಸೈಬರ್‌ಪಂಕ್ ಶೈಲಿಯ ರಿಯರ್ ಶೆಲ್ ಅನ್ನು ಪಡೆದಿದ್ದು, ಕಸ್ಟಮೈಸ್ ಮಾಡಬಹುದಾದ ಮಿನಿ-ಎಲ್ಇಡಿ ಸೂಚಕವನ್ನು ಪಡೆದುಕೊಂಡಿದೆ. ಇದು ನೋಟಿಫೀಕೇಶನ್‌ಗಳು, ಚಾರ್ಜಿಂಗ್ ಮತ್ತು ಗೇಮಿಂಗ್ಗಾಗಿ ಗ್ಲೋ ಆಗಲಿದೆ.
ಇನ್ಫಿನಿಕ್ಸ್ GT 10 ಪ್ರೊ ಡಿಸ್‌ಪ್ಲೇ ರಚನೆ ಮಾಹಿತಿ : ಇನ್ಫಿನಿಕ್ಸ್ GT 10 ಪ್ರೊ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 10-ಬಿಟ್ ಅಮೋಲೆಡ್ ಮಾದರಿಯಲ್ಲಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡುತ್ತದೆ. ಹಾಗೆಯೇ ಇದು ಡಿಸ್‌ಪ್ಲೇ 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದಿದೆ. ಅಲ್ಲದೇ ಡಿಸ್‌ಪ್ಲೇ 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ಇನ್ಫಿನಿಕ್ಸ್ GT 10 ಪ್ರೊ ಪ್ರೊಸೆಸರ್ ಪವರ್ ಯಾವುದು : ಇನ್ಫಿನಿಕ್ಸ್ GT 10 ಪ್ರೊ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಇದೆ. ಜೊತೆಗೆ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಇದಲ್ಲದೆ ಲಭ್ಯವಿರುವ ಸ್ಟೋರೇಜ್ ಬಳಸಿಕೊಂಡು RAM ಅನ್ನು ವರ್ಚುವಲ್ 16GB ವರೆಗೆ ವಿಸ್ತರಿಸಬಹುದಾಗಿದೆ.
ಇನ್ಫಿನಿಕ್ಸ್ GT 10 ಪ್ರೊ ಕ್ಯಾಮೆರಾ ರಚನೆ : ಇನ್ಫಿನಿಕ್ಸ್ GT 10 ಪ್ರೊ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ ಕೂಡ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಪಡೆದಿದೆ.
ಇನ್ಫಿನಿಕ್ಸ್ GT 10 ಪ್ರೊ ಬ್ಯಾಟರಿ ಮತ್ತು ಇತರೆ ಆಯ್ಕೆಗಳು : ಇನ್ಫಿನಿಕ್ಸ್ GT 10 ಪ್ರೊ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಗಾಗಿ 5G, NFC, 3.5mm ಆಡಿಯೋ ಜ್ಯಾಕ್, FM ರೇಡಿಯೋ, GPS, USB ಟೈಪ್-ಸಿ ಪೋರ್ಟ್, ಬ್ಲೂಟೂತ್, ಮತ್ತು Wi-Fi a/b/g/n/ac/x ಸೌಲಭ್ಯ ಹೊಂದಿದೆ.


Click it and Unblock the Notifications








