ಹೊಸ ಆಯ್ಕೆಯಲ್ಲಿ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ಸ್ಮಾರ್ಟ್ 7; ವಿಶೇಷತೆ ಏನು?
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಇದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ನೀಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್‌ನ ಹೊಸ ಸ್ಟೋರೇಜ್ ವೇರಿಯೆಂಟ್ ಭಾರತಕ್ಕೆ ಲಗ್ಗೆ ಇಟ್ಟಿದೆ. ಇದು 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ.
ಹೌದು, ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಅನ್ನು ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಇದು ಪ್ರಾರಂಭದಲ್ಲಿ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯಲ್ಲಿ ಎಂಟ್ರಿ ನೀಡಿತ್ತು. ಆದರೆ ಹೊಸ ರೂಪಾಂತರವು ಕೂಡ ಇಂದಿನ ಸ್ಟೋರೇಜ್ ವೇರಿಯೆಂಟ್ ಹೊಂದಿದ್ದ ಫೀಚರ್ಸ್‌ಗಳನ್ನೇ ಹೊಂದಿದೆ. ಇದರ ಬೆಲೆ ಹಾಗೂ ಸ್ಟೋರೇಜ್ ಸಾಮರ್ಥ್ಯದಲ್ಲಿ ಮಾತ್ರ ಬದಲಾವಣೆಯನ್ನು ಕಾಣಬಹುದಾಗಿದೆ. ಹಾಗಾದ್ರೆ ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಹೊಸ ಸ್ಟೋರೇಜ್ ವೇರಿಯೆಂಟ್‌ನ ಬೆಲೆ ಎಷ್ಟಿದೆ? ಇದರ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇನ್ಫಿನಿಕ್ಸ್ ಸ್ಮಾರ್ಟ್ 7 ಡಿಸ್‌ಪ್ಲೇ ವಿನ್ಯಾಸ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 60Hz ರಿಫ್ರೆಶ್ ರೇಟ್ ಮತ್ತು 500 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಪ್ರೊಸೆಸರ್ ವಿವರ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಯುನಿಸೋಕ್ SC9863A1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ XOS 12 ಔಟ್-ಆಫ್-ದಿ-ಬಾಕ್ಸ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಹೊಸದಾಗಿ ಎಂಟ್ರಿ ನೀಡಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಕ್ಯಾಮೆರಾ ಸೆಟ್‌ಅಪ್
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪ್ರಾಥಮಿಕ AI ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಡ್ಯುಯಲ್ ಎಲ್ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ವೀಡಿಯೊ ಕರೆಗಳು ಮತ್ತು ಸೆಲ್ಫಿಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 7 ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಸಾಫ್ಟ್‌ವೇರ್ ಆಧಾರಿತ ಫೇಸ್ ಅನ್‌ಲಾಕ್ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, ಬ್ಲೂಟೂತ್ 4.2 ಮತ್ತು ಜಿಪಿಎಸ್ ಅನ್ನು ಒಳಗೊಂಡಿದೆ.
ಭಾರತದಲ್ಲಿ ಇನ್ಫಿನಿಕ್ಸ್ ಸ್ಮಾರ್ಟ್ 7 ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಸ್ಮಾರ್ಟ್ 7 ಸ್ಮಾರ್ಟ್‌ಫೋನಿನ ಹೊಸ ರೂಪಾಂತರವು 7,999ರೂ. ಬೆಲೆಯಲ್ಲಿ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ ಎಮರಾಲ್ಡ್ ಗ್ರೀನ್, ನೈಟ್ ಬ್ಲ್ಯಾಕ್ ಮತ್ತು ಅಜುರೆ ಬ್ಲೂ ಕಲರ್ ಆಯ್ಕೆಗಳಲ್ಲಿ ದೊರೆಯಲಿದೆ.
ಇನ್ನು ಇನ್ಫಿನಿಕ್ಸ್ ಕಂಪೆನಿ ಇತ್ತೀಚಿಗೆ ಇನ್ಫಿನಿಕ್ಸ್ ಹಾಟ್ 30 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ FHD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6020 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ ಕ್ವಾಡ್-ಎಲ್ಇಡಿ ಫ್ಲ್ಯಾಶ್ ಲೈಟ್ ಆಯ್ಕೆಯನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.


Click it and Unblock the Notifications








