Just In
Don't Miss
- Movies
'ತಲೆದಂಡ' ಸಿನಿಮಾಕ್ಕೆ ಅನ್ಯಾಯ: ಮನವಿ ಮಾಡಿದ ಸಂಚಾರಿ ವಿಜಯ್
- News
ಅಂತಾರಾಷ್ಟ್ರೀಯ ಮಹಿಳಾ ದಿನ; ಸವಾಲುಗಳೇ ಮಹಿಳೆಯ ಸಾಧನೆಯ ಮೆಟ್ಟಿಲು: ಡಾ.ಹೇಮಾ
- Automobiles
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
- Sports
ಸೌತಾಂಪ್ಟನ್ನಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
- Finance
ಚಿನ್ನದ ಬೆಲೆ ಏರಿಕೆ: ಮಾರ್ಚ್ 08ರ ಬೆಲೆ ಹೀಗಿದೆ
- Lifestyle
ಹೀಗೆ ಆಯ್ಕೆ ಮಾಡಿದರೆ ನೀವು ಬಯಸಿದಂಥ ಸಂಗಾತಿಯೇ ಸಿಗುವರು
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ಫಿನಿಕ್ಸ್ ಹಾಟ್ 10 4GB RAM ವೇರಿಯೆಂಟ್ ಸ್ಮಾರ್ಟ್ಫೋನ್ ಲಾಂಚ್!
ಇನ್ಫಿನಿಕ್ಸ್ ಸಂಸ್ಥೆ ತನ್ನ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಇನ್ಫಿನಿಕ್ಸ್ ಹಾಟ್ 10 ಸ್ಮಾರ್ಟ್ಫೋನ್ ಅನ್ನು ಪರಿಚಯಿಸಿದ್ದ ಇನ್ಫಿನಿಕ್ಸ್ ತನ್ನ ಮತ್ತೊಂದು ರೂಪಾಂತರವನ್ನು ಬಿಡುಗಡೆ ಮಾಡಿದೆ. ಲಾಂಚ್ ಸಂದರ್ಭದಲ್ಲಿ 6GB RAM ಮಾದರಿಯನ್ನ ಪರಿಚಯಿಸಿದ್ದ ಇನ್ಫಿನಿಕ್ಸ್ ಇದೀಗ ತನ್ನ ಶ್ರೇಣಿಗೆ 4GB RAM ವೇರಿಯೆಂಟ್ ಆಯ್ಕೆಯನ್ನು ಬಿಡುಗಡೆ ಮಾಡಿದ್ದು, ಇನ್ನು ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ.

ಹೌದು, ಇನ್ಫಿನಿಕ್ಸ್ ಸಂಸ್ಥೆ ತನ್ನ ಇನ್ಫಿನಿಕ್ಸ್ ಹಾಟ್ 10 ಸ್ಮಾರ್ಟ್ಫೋನ್ ಸರಣಿಯಲ್ಲಿ 6GB RAM ವೇರಿಯೆಂಟ್ ಆಯ್ಕೆಯನ್ನು ಭಾರತದಲ್ಲಿ ಬಿಡುಗಡೆ ಆಗಿದೆ. ಇದು 6.78-ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದ್ದು, 91.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್ ಅನ್ನು ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ವಿನ್ಯಾಸ
ಇನ್ಫಿನಿಕ್ಸ್ ಹಾಟ್ 10, 720x1,640 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.78-ಇಂಚಿನ TFT LCD ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20.5: 9 ರಚನೆಯ ಅನುಪಾತ ಹೊಂದಿದ್ದು, 480 ನಿಟ್ಸ್ ಗರಿಷ್ಠ ಬ್ರೈಟ್ನೆಶ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹೆಲಿಯೊ G70 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 XOS 7.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 6GB RAM ಮತ್ತು 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸಹ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ
ಇನ್ಫಿನಿಕ್ಸ್ ಹಾಟ್ 10 ಎಐ ಚಾಲಿತ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಸೆಲ್ಫಿ ವೀಡಿಯೊ ಚಾಟ್, ಸೆಲ್ಫಿ ಇಮೇಜ್ಗಳಲ್ಲಿ ಬೆಳಕನ್ನು ಹೆಚ್ಚಿಸಲು ಮುಂಭಾಗದಲ್ಲಿ ಡ್ಯುಯಲ್ ಸೆಲ್ಫಿ ಎಲ್ಇಡಿ ಫ್ಲ್ಯಾಷ್ಲೈಟ್ಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ, ಎಐ ಎಚ್ಡಿಆರ್, ಎಐ ಪೋರ್ಟ್ರೇಟ್, ಎಐ 3 ಡಿ ಫೇಸ್ ಬ್ಯೂಟಿ, ವೈಡ್ ಸೆಲ್ಫಿ, ಮತ್ತು ಎಆರ್ ಅನಿಮೋಜಿಯಂತಹ ಕೃತಕ ಬುದ್ಧಿಮತ್ತೆ (AI) ಬೆಂಬಲಿತ ಫೀಚರ್ಸ್ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 10 ಸ್ಮಾರ್ಟ್ಫೋನ್ 5,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ.ಇದು 18W ಚಾರ್ಜರ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಒಂದೇ ಚಾರ್ಜ್ನಲ್ಲಿ 23 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ತಲುಪಿಸಲು ರೇಟ್ ಮಾಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G, ಜಿಪಿಎಸ್, ಬ್ಲೂಟೂತ್, 3.5mm ಹೆಡ್ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್ ಹಾಟ್ 10 4GB ವೇರಿಯಂಟ್ ಅಯ್ಕೆಯ ಸ್ಮಾರ್ಟ್ಫೋನ್ ಬೆಲೆ ಪರಿಚಯಾತ್ಮಕ ಕೊಡುಗೆಯ ಭಾಗವಾಗಿ 8,999 ರೂ. ಆಗಿದೆ. ಇದು ಅಕ್ಟೋಬರ್ 29 ರಿಂದ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ. ಇದನ್ನು ಅಂಬರ್ ರೆಡ್, ಮೂನ್ಲೈಟ್ ಜೇಡ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಓಷನ್ ವೈಟ್ ಬಣ್ಣ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190