Just In
Don't Miss
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- News
ಪೆಟ್ರೋಲ್ ಪಂಪ್ಗಳಿಂದ ಪ್ರಧಾನಿ ಮೋದಿ ಫೋಟೊ ತೆರವಿಗೆ ಚುನಾವಣಾ ಆಯೋಗ ಸೂಚನೆ
- Movies
ಬಿಗ್ಬಾಸ್: ಕೊಡಲಿ ಬಳಸಿ ನಾಮಿನೇಷನ್ ಕತ್ತಿಯಿಂದ ಬಚಾವಾದ ಗೀತಾ ಭಟ್
- Automobiles
31 ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ಟಾಟಾ ಹೊಸ ಸಿಗ್ನಾ 3118.ಟಿ ಟ್ರಕ್ ಬಿಡುಗಡೆ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Sports
'ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲಿ ನಾನು ಇಂಗ್ಲೆಂಡ್ಗೆ ಚಿಯರ್ ಮಾಡ್ತೇನೆ'
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಮತ್ತು ರೆಡ್ಮಿ 9 ಪ್ರೈಮ್: ಭಿನ್ನತೆಗಳೆನು?..ಬೆಲೆ ಎಷ್ಟು?
ಅಗ್ಗದ ಬೆಲೆಯಲ್ಲಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿ ಗುರುತಿಸಿಕೊಂಡಿರುವ ಇನ್ಫಿನಿಕ್ಸ್ ಕಂಪನಿಯು ಇದೀಗ ಹೈ ಎಂಡ್ ಮಾದರಿಯ ಸ್ಮಾರ್ಟ್ಫೋನ್ ಸಹ ಪರಿಚಯಿಸಿದೆ. ಸಂಸ್ಥೆಯು ಇದೀಗ ಹೊಸದಾಗಿ ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಸ್ಮಾರ್ಟ್ಫೋನ್ ಆಗಿದ್ದು, ಮೀಡಿಯಾಟೆಕ್ ಹಿಲಿಯೋ G25 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಇನ್ಫಿನಿಕ್ಸ್ ಕಂಪನಿಯು ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ ಅನ್ನು ಫಿಲಿಪೈನ್ಸ್ ನಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ನಲ್ಲಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದೆ. ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ ಮತ್ತು ರೆಡ್ಮಿ 9 ಪ್ರೈಮ್ ಸ್ಮಾರ್ಟ್ಫೋನ್ ಫೀಚರ್ಸ್ಗಳ ನಡುವಿನ ಹೋಲಿಕೆಯನ್ನು ನೋಡೋಣ ಬನ್ನಿರಿ.

ಡಿಸ್ಪ್ಲೇ ವಿನ್ಯಾಸ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ 720x1,640 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.82-ಇಂಚಿನ ಹೆಚ್ಡಿ + IPS ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20.5: 9 ರಚನೆಯ ಅನುಪಾತ ಹೊಂದಿದ್ದು, ಆಕರ್ಷಕ ಬ್ರೈಟ್ನೆಶ್ ಅನ್ನು ಒಳಗೊಂಡಿದೆ. ರೆಡ್ಮಿ 9 ಪ್ರೈಮ್ ಸ್ಮಾರ್ಟ್ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇ ಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ G25 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಗೋ ಎಡಿಷನ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 2GB ಮತ್ತು 32GB ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ರೆಡ್ಮಿ 9 ಪ್ರೈಮ್ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ಕ್ಯಾಮೆರಾ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಉಳಿದಂತೆ ಪೋಟೊ ಎಡಿಟಿಂಗ್ ಸೌಲಭ್ಯಗಳನ್ನು ಪಡೆದಿದೆ. ರೆಡ್ಮಿ 9 ಪ್ರೈಮ್ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಒಳಗೊಂಡಿದೆ. ಕ್ರಮವಾಗಿ 13ಎಂಪಿ + 8ಎಂಪಿ + 5ಎಂಪಿ + 2ಎಂಪಿ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ.53 ಗಂಟೆಗಳ ಟಾಕ್ ಟೈಮ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಹಿಂಭಾಗದಲ್ಲಿ ಫಿಂಗರ್ಪ್ರಿಂಟ್ ಸ್ಕ್ಯಾನರ್ ಸಹ ಇದೆ. ರೆಡ್ಮಿ 9 ಪ್ರೈಮ್ ಸ್ಮಾರ್ಟ್ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆದರೆ ಸದ್ಯ ಇದು 10W ಚಾರ್ಜರ್ನೊಂದಿಗೆ ರವಾನಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್ಫೋನ್ 2GB ಮತ್ತು 32GB ಸ್ಟೋರೇಜ್ ವೇರಿಯಂಟ್ ಬೆಲೆಯು ಫಿಲಿಪೈನ್ಸ್ PHP 4,290 ಆಗಿದೆ (ಭಾರತದಲ್ಲಿ ಅಂದಾಜು 6,500ರೂ. ಎನ್ನಲಾಗಿದೆ). ಇನ್ನು ಈ ಫೋನ್ ಏಜಿಯನ್ ಬ್ಲೂ ಮತ್ತು ಮೊರಾಂಡಿ ಗ್ರೀನ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190