ಭಾರತದಲ್ಲಿ ಅಗ್ಗದ ಬೆಲೆ ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ ಲಾಂಚ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಇನ್ಫಿನಿಕ್ಸ್ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G 35 SoC ಪ್ರೊಸೆಸರ್ ಅನ್ನು ಪಡೆದುಕೊಂಡಿದೆ.

ಹೌದು, ಇನ್ಫಿನಿಕ್ಸ್ ಸಂಸ್ಥೆ ಹೊಸ ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದ್ದು, ಕೇವಲ 8,499 ರೂ.ಬೆಲೆಗೆ ಖರೀದಿಸಬಹುದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ 720x1,640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82-ಇಂಚಿನ ಎಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟಿಎಫ್ಟಿ ಐಪಿಎಸ್ ಡಿಸ್‌ಪ್ಲೇ ಆಗಿದ್ದು, ವಾಟರ್ ಡ್ರಾಪ್-ಸ್ಟೈಲ್ ನಾಚ್ ವಿನ್ಯಾವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.66% ಸ್ಕ್ರೀನ್-ಟು-ಬಾಡಿ ಅನುಪಾತ, 20.5: 9, ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 440 ನಿಟ್ಸ್ ಬ್ರೈಟ್‌ನೆಸ್ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಒಳಗೊಂಡಿದೆ. ಇದು ಎನ್‌ಇಜಿ ಡೈನೋರೆಕ್ಸ್ ಟಿ 2 ಎಕ್ಸ್ -1 ಗ್ಲಾಸ್ ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಮೀಡಿಯಾ ಟೆಕ್ ಹೆಲಿಯೊ G 35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎಐ ಲೆನ್ಸ್ ಅನ್ನು ಒಳಗೊಂಡಿದೆ. ಇದು ಕ್ವಾಡ್ ಎಲ್ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಜೊತೆಗೆ ಸ್ಲೋ ಮೋಷನ್ ವಿಡಿಯೋ ಮತ್ತು ಡಾಕ್ಯುಮೆಂಟ್ ಮೋಡ್‌ನಂತಹ ಮೋಡ್‌ಗಳನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಫ್ರಂಟ್ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಪೋರ್ಟ್ರೇಟ್, 3 ಡಿ ಫೇಸ್ ಬ್ಯೂಟಿ ಮೋಡ್, ವೈಡ್ ಸೆಲ್ಫಿ ಮೋಡ್, ಎಆರ್ ಅನಿಮೋಜಿ, ಎಆರ್ ಫೇಸ್ ಮೋಷನ್ ಡಿಟೆಕ್ಷನ್, ಅನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಪವರ್ ಮ್ಯಾರಥಾನ್ ಟೆಕ್ನಾಲಜಿಯೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಬ್ಯಾಟರಿ ಬ್ಯಾಕಪ್ ಅನ್ನು 25% ಹೆಚ್ಚಿಸುತ್ತದೆ. ಬ್ಯಾಟರಿ 55 ದಿನಗಳಿಗಿಂತ ಹೆಚ್ಚು ಸಮಯವನ್ನು ನೀಡುತ್ತದೆ, 23 ಗಂಟೆಗಳವರೆಗೆ ತಡೆರಹಿತ ವೀಡಿಯೊ ಪ್ಲೇಬ್ಯಾಕ್, 53 ಗಂಟೆಗಳ 4 ಜಿ ಟಾಕ್‌ಟೈಮ್, 44 ಗಂಟೆಗಳ ಸಂಗೀತ ಪ್ಲೇಬ್ಯಾಕ್, 23 ಗಂಟೆಗಳ ವೆಬ್ ಸರ್ಫಿಂಗ್ ಮತ್ತು ಹೆಚ್ಚಿನದನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ವೈ-ಫೈ 802.11 ಎಸಿ, ಬ್ಲೂಟೂತ್, ಮೈಕ್ರೋ ಯುಎಸ್‌ಬಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಎಫ್‌ಎಂ ರೇಡಿಯೋ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ ಏಕೈಕ 4GB RAM + 64 GB ಶೇಖರಣಾ ಮಾದರಿಗೆ 8,499 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಏಪ್ರಿಲ್ 26 ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿರುತ್ತದೆ. ಇನ್ಫಿನಿಕ್ಸ್ ಹಾಟ್ 10 ಪ್ಲೇ ಮೊರಾಂಡಿ ಗ್ರೀನ್, 7-ಡಿಗ್ರಿ ಪರ್ಪಲ್, ಏಜಿಯನ್ ಬ್ಲೂ ಮತ್ತು ಅಬ್ಸಿಡಿಯನ್ ಬ್ಲ್ಯಾಕ್ ನಂತಹ ನಾಲ್ಕು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.


Click it and Unblock the Notifications
