Home
ಸುದ್ದಿಜಾಲ

ಬಹು ನಿರೀಕ್ಷಿತ ಇನ್ಫಿನಿಕ್ಸ್‌ ಹಾಟ್‌ 10 ಸ್ಮಾರ್ಟ್‌ಫೋನ್‌ ಬಿಡುಗಡೆ!

ಬಹು ನಿರೀಕ್ಷಿತ ಇನ್ಫಿನಿಕ್ಸ್‌ ಹಾಟ್‌ 10 ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಇನ್ಫಿನಿಕ್ಸ್‌ ಹಾಟ್‌ 9 ಸ್ಮಾರ್ಟ್‌ಫೊನ್‌ನ ಮುಂದುವರೆದ ಆವೃತ್ತಿಯಾಗಿದ್ದು, ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಡ್ಯುಯಲ್ ಸೆಲ್ಫಿ ಫ್ಲ್ಯಾಷ್‌ಲೈಟ್‌ಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡಿಟಿಎಸ್‌ ಹೆಚ್‌ಡಿ ಸರೌಂಡ್‌ ಸೌಂಡ್‌ ಸಿಸ್ಟಂ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಪವರ್‌ ಮ್ಯಾರಥಾನ್‌ ಟೆಕ್ನಾಲಜಿಯನ್ನು ಹೊಂದಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಸಂಸ್ಥೆಯ ಬಹು ನಿರೀಕ್ಷಿತ ಇನ್ಫಿನಿಕ್ಸ್‌ ಹಾಟ್‌ 10 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಇದು 6.78-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 91.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಇನ್ಫಿನಿಕ್ಸ್ ಹಾಟ್ 10, 720x1,640 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.78-ಇಂಚಿನ ಹೆಚ್‌ಡಿ + IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20.5: 9 ರಚನೆಯ ಅನುಪಾತ ಹೊಂದಿದ್ದು, 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಹೆಲಿಯೊ G70 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 XOS 7.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 6GB RAM ಮತ್ತು 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸಹ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ಇನ್ಫಿನಿಕ್ಸ್ ಹಾಟ್ 10 ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಸೆಲ್ಫಿ ವೀಡಿಯೊ ಚಾಟ್‌, ಸೆಲ್ಫಿ ಇಮೇಜ್‌ಗಳಲ್ಲಿ ಬೆಳಕನ್ನು ಹೆಚ್ಚಿಸಲು ಮುಂಭಾಗದಲ್ಲಿ ಡ್ಯುಯಲ್ ಸೆಲ್ಫಿ ಎಲ್ಇಡಿ ಫ್ಲ್ಯಾಷ್‌ಲೈಟ್‌ಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ, ಎಐ ಎಚ್‌ಡಿಆರ್, ಎಐ ಪೋರ್ಟ್ರೇಟ್, ಎಐ 3 ಡಿ ಫೇಸ್ ಬ್ಯೂಟಿ, ವೈಡ್ ಸೆಲ್ಫಿ, ಮತ್ತು ಎಆರ್ ಅನಿಮೋಜಿಯಂತಹ ಕೃತಕ ಬುದ್ಧಿಮತ್ತೆ (AI) ಬೆಂಬಲಿತ ಫೀಚರ್ಸ್‌ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್ ಹಾಟ್ 10 ಸ್ಮಾರ್ಟ್‌ಫೋನ್‌ 5,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.ಇದು 18W ಚಾರ್ಜರ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಒಂದೇ ಚಾರ್ಜ್‌ನಲ್ಲಿ 23 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ತಲುಪಿಸಲು ರೇಟ್ ಮಾಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4G, ಜಿಪಿಎಸ್, ಬ್ಲೂಟೂತ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 10 6GB RAM + 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯದ ಬೆಲೆ 9,999,ರೂ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಂಬರ್ ರೆಡ್, ಮೂನ್ಲೈಟ್ ಜೇಡ್, ಅಬ್ಸಿಡಿಯನ್ ಬ್ಲ್ಯಾಕ್ ಮತ್ತು ಓಷನ್ ವೇವ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಅಕ್ಟೋಬರ್ 16 ರಿಂದ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ, ಇದು ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದ ಸಮಯದಲ್ಲಿ ಲಭ್ಯವಾಗಲಿದೆ.

Best Mobiles in India

English summary
Infinix Hot 10 has been launched as the successor to the Infinix Hot 9 that debuted in late May. The new smartphone comes with a hole-punch display design and features dual selfie flashlights at front.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+