Home
ಸುದ್ದಿಜಾಲ

ಇನ್ಫಿನಿಕ್ಸ್‌ ಹಾಟ್‌ 10s ಸರಣಿ ಸ್ಮಾರ್ಟ್‌ಫೋನ್‌ ಲಾಂಚ್‌! ಆಕರ್ಷಕ ಫೀಚರ್ಸ್‌!

ಇನ್ಫಿನಿಕ್ಸ್‌ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಇನ್ಫಿನಿಕ್ಸ್‌ ಹಾಟ್‌ 10s ಮತ್ತು ಇನ್ಫಿನಿಕ್ಸ್‌ 10s ಎನ್‌ಎಫ್‌ಸಿ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್‌ ಹಿಲಿಯೊ G 85 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಸಂಸ್ಥೆ ಹೊಸ ಇನ್ಫಿನಿಕ್ಸ್‌ ಹಾಟ್ 10s ಸ್ಮಾರ್ಟ್‌ಫೋನ್‌ ಸರಣಿಯನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಎರಡೂ ಫೋನ್‌ಗಳು 180Hz ನ ಟಚ್ ಸ್ಯಾಂಪ್ಲಿಂಗ್ ರೇಟ್‌ ಜೊತೆಗೆ 90Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಗಳನ್ನು ಹೊಂದಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ಫಿನಿಕ್ಸ್ ಹಾಟ್ 10s ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.82-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿವೆ. ಇನ್ನು ಈ ಡಿಸ್‌ಪ್ಲೇ 90Hz ಸ್ಕ್ರೀನ್ ರಿಫ್ರೆಶ್ ರೇಟ್‌, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 20.5: 9 ರಚನೆಯ ಅನುಪಾತವನ್ನು ಹೊಂದಿವೆ

ಪ್ರೊಸೆಸರ್‌

ಪ್ರೊಸೆಸರ್‌

ಇನ್ಫಿನಿಕ್ಸ್ ಹಾಟ್ 10s ಸರಣಿ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್‌ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರಲ್ಲಿ ಇನ್ಫಿನಿಕ್ಸ್‌ ಹಾಟ್ 10s ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಇನ್ಫಿನಿಕ್ಸ್‌ಹಾಟ್ 10s ಎನ್‌ಎಫ್‌ಸಿ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಫ್ರಂಟ್ ಫೋಕಸ್ ಲೆನ್ಸ್ ಜೊತೆಗೆ ಡ್ಯುಯಲ್ ಫ್ರಂಟ್ ಫ್ಲ್ಯಾಷ್ ಇದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್ ಹಾಟ್ 10s 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 62 ದಿನಗಳ ಸ್ಟ್ಯಾಂಡ್‌ಬೈ ಟೈಂ ಮತ್ತು 52.02 ಗಂಟೆಗಳ 4 ಜಿ ಟಾಕ್ ಟೈಮ್ ಅನ್ನು ನೀಡುತ್ತದೆ. ಆದರೆ ಇನ್ಫಿನಿಕ್ಸ್‌ ಹಾಟ್‌ 10s NFC ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ ಎಸಿ, ಬ್ಲೂಟೂತ್, 3.5 ಎಂಎಂ ಜ್ಯಾಕ್, ಎಫ್‌ಎಂ, ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ಹಾಟ್ 10s ಸರಣಿ ಸ್ಮಾರ್ಟ್‌ಫೋನ್‌ಗಳ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಆದರೆ ಇದೇ ಮೇ 12 ರಿಂದ ಇನ್ಫಿನಿಕ್ಸ್ ಹಾಟ್ 10s ಇಂಡೋನೇಷ್ಯಾದಲ್ಲಿ ಲಭ್ಯವಾಗಲಿದೆ. ಇದು 7 ಡಿಗ್ರಿ ಪರ್ಪಲ್, 95 ಡಿಗ್ರಿ ಬ್ಲ್ಯಾಕ್, ಮೊರಾಂಡಿ ಗ್ರೀನ್ ಮತ್ತು ಹಾರ್ಟ್ ಆಫ್ ಓಷನ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗೇಯೆ ಇನ್ಫಿನಿಕ್ಸ್ ಹಾಟ್ 10s NFC ಸ್ಮಾರ್ಟ್‌ಫೋನ್‌ ರಷ್ಯಾ ಮತ್ತು ಲ್ಯಾಟಿನ್ ಅಮೆರಿಕದಂತಹ ಮಾರುಕಟ್ಟೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Infinix Hot 10S, Infinix Hot 10S NFC With Triple camera setup Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+