ಇನ್ಫಿನಿಕ್ಸ್‌ ಹಾಟ್‌ 10T ಸ್ಮಾರ್ಟ್‌ಫೋನ್‌ ಲಾಂಚ್‌ ! ವಿಶೇಷ ಫೀಚರ್ಸ್‌!

|

ಜನಪ್ರಿಯ ಇನ್ಫಿನಿಕ್ಸ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಸದ್ಯ ಇದೀಗ ಇನ್ಫಿನಿಕ್ಸ್‌ ಹಾಟ್ 10 ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 10T ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 90Hz ಡಿಸ್‌ಪ್ಲೇ ಮತ್ತು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿವೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ಹಾಟ್‌ 10T ಸ್ಮಾರ್ಟ್‌ಫೋನ್ ಅನ್ನು ಕಿನ್ಯಾ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್ ಹಾಟ್ 10T ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.82 ಇಂಚಿನ ಎಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಐಪಿಎಸ್ ಡಿಸ್‌ಪ್ಲೇ 20.5: 9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಎಕ್ಸ್‌ಒಎಸ್ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ಫಿನಿಕ್ಸ್ ಹಾಟ್ 10T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮುರನೇ ಕ್ಯಾಮೆರಾ ಎಐ ಲೆನ್ಸ್ ಹೊಂದಿದೆ. ಜೊತೆಗೆ ಕ್ವಾಡ್ ಎಲ್ಇಡಿ ಫ್ಲ್ಯಾಷ್ ಕೂಡ ಇದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು ಡ್ಯುಯಲ್ ಎಲ್ಇಡಿ ಫ್ಲ್ಯಾಷ್‌ ಅನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್ ಹಾಟ್ 10T ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು 4G ನೆಟ್‌ವರ್ಕ್‌ ನಲ್ಲಿ 37 ಗಂಟೆಗಳ ಟಾಕ್ ಟೈಮ್ ಅಥವಾ ಒಂದೇ ಚಾರ್ಜ್‌ನಲ್ಲಿ 61 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ 802.11 ಎಸಿ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಎಫ್ಎಂ ರೇಡಿಯೋ, ಮೈಕ್ರೋ-ಯುಎಸ್ಬಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 4GB RAM+ 64GB ಶೇಖರಣಾ ರೂಪಾಂತರಕ್ಕಾಗಿ ಕೆಇಎಸ್ 15,499 (ಸರಿಸುಮಾರು 10,700 ರೂ.) ಬೆಲೆ ಹೊಂದಿದೆ. ಅಲ್ಲದೆ 4GB RAM+ 128GB ಶೇಖರಣಾ ಮಾದರಿಯ ಬೆಲೆ ಕೆಇಎಸ್ 17,499 (ಸುಮಾರು 12,000ರೂ.) ಆಗಿದೆ. ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌, ಹಾರ್ಟ್ ಆಫ್ ಓಷನ್, ಮೊರಾಂಡಿ ಗ್ರೀನ್ ಮತ್ತು ಪರ್ಪಲ್ ಬಣ್ಣಗಳಲ್ಲಿ ಖರೀದಿಸಲು ಲಭ್ಯವಿದೆ.

Best Mobiles in India

English summary
Infinix Hot 10T include a 90Hz display and triple rear cameras.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X