Home
ಸುದ್ದಿಜಾಲ

ಇನ್ಫಿನಿಕ್ಸ್‌ ಹಾಟ್‌ 11 2022 ಫೋನಿನ ಮೊದಲ ಮಾರಾಟ ಇಂದು!..ಬೆಲೆ ಅಗ್ಗ!

ಜನಪ್ರಿಯ ಇನ್‌ಫಿನಿಕ್ಸ್‌ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಹೊಸದಾಗಿ ಲಾಂಚ್ ಮಾಡಿರುವ 'ಇನ್ಫಿನಿಕ್ಸ್‌ ಹಾಟ್‌ 11 2022' ಸ್ಮಾರ್ಟ್‌ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್‌ ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏ. 21) ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಫಸ್ಟ್‌ ಸೇಲ್ ಆರಂಭಿಸಲಿದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಈ ಫೋನಿನ ಏಕೈಕ್ 4GB + 64GB ಸ್ಟೋರೇಜ್ ರೂಪಾಂತರಕ್ಕೆ 8,999 ರೂ.ಆಗಿದೆ.

ಇನ್ಫಿನಿಕ್ಸ್‌

ಹೌದು, ಇನ್‌ಫಿನಿಕ್ಸ್‌ ಸಂಸ್ಥೆಯ ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನಿನ ಮಾರಾಟ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಯಲಿದೆ. ಈ ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿರುವುದು ಪ್ಲಸ್‌ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೇ ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ವನ್ನು ಹೊಂದಿದೆ. ಇದು 89.53% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಪವರ್‌ ಎಷ್ಟಿದೆ?

ಪ್ರೊಸೆಸರ್‌ ಪವರ್‌ ಎಷ್ಟಿದೆ?

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ XOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗಲಿದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್

ಡ್ಯುಯಲ್ ಕ್ಯಾಮೆರಾ ಸೆನ್ಸಾರ್

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.1, GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 11 2022 ಸ್ಮಾರ್ಟ್‌ಫೋನ್‌ ಬೆಲೆ ಏಕೈಕ 4GB + 64GB ಸ್ಟೋರೇಜ್ ರೂಪಾಂತರಕ್ಕೆ 8,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅರೋರಾ ಗ್ರೀನ್, ಪೋಲಾರ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Infinix Hot 11 2022 to go on First Sale Today Via Flipkart: Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+