ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಬಜೆಟ್ ಬೆಲೆಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಹೋಲ್ ಪಂಚ್ ಡಿಸ್‌ಪ್ಲೇ ವಿನ್ಯಾಸ ಮತ್ತು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ.

ಹೌದು, ಇನ್ಫಿನಿಕ್ಸ್ ಕಂಪೆನಿ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಹಾಗೆಯೇ 64GB ಇಂಟರ್ ಸ್ಟೋರೇಜ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 4G ನೆಟ್‌ವರ್ಕ್‌ನಲ್ಲಿ 22 ಗಂಟೆಗಳ ಟಾಕ್ ಟೈಮ್ ಅನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 89.53% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲವೇನು?
ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯೂನಿಸೋಕ್ T610 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗಲಿದೆ.

ಕ್ಯಾಮೆರಾ
ಇನ್ನ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.0 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಬೆಂಬಲಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 11 2022 ಸ್ಮಾರ್ಟ್‌ಫೋನ್ ಬೆಲೆ ಏಕೈಕ 4GB + 64GB ಸ್ಟೋರೇಜ್ ರೂಪಾಂತರಕ್ಕೆ 8,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅರೋರಾ ಗ್ರೀನ್, ಪೋಲಾರ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಗೋಲ್ಡ್ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ. ಇದು ಇದೇ ಏಪ್ರಿಲ್ 22 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಪ್ರಸ್ತುತ ಲಭ್ಯವಿರುವ ಬೆಲೆಯು ಪರಿಚಯಾತ್ಮಕ ಬೆಲೆಯಾಗಿದೆ. ಇದು ಮುಂದಿನ ದಿನಗಳಲ್ಲಿ ಬೆಲೆಯಲ್ಲಿ ಬದಲಾವಣೆ ಮಾಡುವ ಸಾದ್ಯತೆಯಿದೆ. ಇನ್ನು ಕಳೆದ ವರ್ಷ, ಇನ್ಫಿನಿಕ್ಸ್ ಹಾಟ್ 11 ಅನ್ನು ಕೂಡ 4GB + 64GB ಕಾನ್ಫಿಗರೇಶನ್‌ಗೆ 8,999ರೂ ಬೆಲೆಯಲ್ಲಿ ಪರಿಚಯಿಸಲಾಗಿತ್ತು ಅನ್ನೊದನ್ನ ಗಮನಿಸಬೇಕಿದೆ.


Click it and Unblock the Notifications








