ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಅನಾವರಣ! ಫೀಚರ್ಸ್‌ ಹೇಗಿದೆ?

|

ಜನನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕರಲ್ಲಿ ಇನ್ಫಿನಿಕ್ಸ್‌ ಕಂಪೆನಿ ಕೂಡ ಸೇರಿದೆ. ತನ್ನ ವೈವಿಧ್ಯಮಯ ಹಾಗೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೆ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಅನ್ನು ಸೀಮಿತ ಮಾರುಕಟ್ಟೆಗಳಲ್ಲಿ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ 6.82-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಪಡೆದುಕೊಂಡಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇದು ಎಕ್ಸ್‌ಪ್ಲೋರೇಟರಿ ಬ್ಲೂ, ಹೇಸ್ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸನ್‌ಸೆಟ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.82-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ವಿನ್ಯಾಸವನ್ನು ಹೊಂದಿದ್ದು, 90.66% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಫೋನ್ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಪವರ್ ಮ್ಯಾರಥಾನ್' ತಂತ್ರಜ್ಞಾನ ಹೊಂದಿರುವ 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಹೊಂದಿದೆ. ಇದು ಪವರ್ ಬೂಸ್ಟ್ ಮತ್ತು ಅಲ್ಟ್ರಾ ಪವರ್ ಮೋಡ್ ಎನ್ನುವ ಎರಡು ಪವರ್‌ ಸೇವ್‌ ವಿಧಾನಗಳೊಂದಿಗೆ ಬ್ಯಾಟರಿ ಬ್ಯಾಕಪ್ ಅನ್ನು ಹೆಚ್ಚಿಸುತ್ತದೆ. ಬ್ಯಾಟರಿಯು 55 ದಿನಗಳವರೆಗೆ ಸ್ಟ್ಯಾಂಡ್‌ಬೈ ಸಮಯವನ್ನು ನೀಡುತ್ತದೆ ಮತ್ತು 53 ಗಂಟೆಗಳ ಪ್ಲೇಬ್ಯಾಕ್ ಟೈಂ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 4G, ಬ್ಲೂಟೂತ್, GPS, 3.5mm ಹೆಡ್‌ಫೋನ್ ಜ್ಯಾಕ್, ಮೈಕ್ರೋ-USB ಪೋರ್ಟ್, OTG ಮತ್ತು FM ರೇಡಿಯೋ ಬೆಂಬಲಿಸಲಿದೆ. ಇದರೊಂದಿಗೆ ಜಿ-ಸೆನ್ಸರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಈ-ಕಂಪಾಸ್, ಅಂಡ್ ಅಕ್ಸಿಲೆರೊಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇನ್ಫಿನಿಕ್ಸ್‌ ಹಾಟ್‌ 11 ಪ್ಲೇ ಸ್ಮಾರ್ಟ್‌ಫೋನ್‌ ಬೆಲೆ ವಿವರ ಇನ್ನು ಬಹಿರಂಗವಾಗಿಲ್ಲ. ಸದ್ಯ ಈ ಫೋನ್‌ ಸಿಂಗಲ್‌ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ನಲ್ಲಿ ನೀಡಲಾಗುತ್ತದೆ. ಈ ಫೋನ್‌ ಎಕ್ಸ್‌ಪ್ಲೋರೇಟರಿ ಬ್ಲೂ, ಹೇಸ್ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸನ್‌ಸೆಟ್ ಗೋಲ್ಡ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಯಾವಾಗ ಲಬ್ಯವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಹಿಂದಿನ ಇನ್ಫಿನಿಕ್ಸ್‌ ಹಾಟ್‌ 10 ಪ್ಲೇ ಭಾರತದಲ್ಲಿ 8,499.ರೂ ಬೆಲೆಗೆ ಬಿಡುಗಡೆ ಆಗಿತ್ತು.

Best Mobiles in India

English summary
Infinix Hot 11 Play features a 6.82-inch HD+ IPS display and runs on a MediaTek Helio G35 processor.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X